ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಭಾರತ ಉಗ್ರಪೀಡಿತ!,

ಉಗ್ರರ ದಾಳಿಗೆ ಅತಿ ಹೆಚ್ಚು ನಲುಗಿದ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಮೂರನೇ ಸ್ಥಾನದಲ್ಲಿದೆ! ಮೊದಲೆರಡು ಸ್ಥಾನಗಳಲ್ಲಿ ಇರಾಕ್ ಮತ್ತು ಅಫ್ಘಾನಿಸ್ತಾನ ಇವೆ. ಭಾರತದಲ್ಲಿ 43 ಉಗ್ರರ ಗುಂಪುಗಳು ಸಕ್ರಿಯವಾಗಿದ್ದು, 2017ರಲ್ಲಿ ಒಟ್ಟಾರೆ 860 ದಾಳಿಗಳು ನಡೆದಿವೆ. ಇದರಿಂದ 344 ಮಂದಿ ಮೃತಪಟ್ಟಿದ್ದಾರೆ. ಈ ಪೈಕಿಯಲ್ಲಿ ಶೇ. 89 ಮಂದಿ ಜಮ್ಮು-ಕಾಶ್ಮೀರದಲ್ಲಿ ಅಸುನೀಗಿದ್ದಾರೆ ಎಂದು ಅಮೆರಿಕದ ವಿದೇಶಾಂಗ ಇಲಾಖೆ ತಿಳಿಸಿದೆ.
 ಅಮೆರಿಕದ ಭಯೋತ್ಪಾದನೆ ಮತ್ತು ಭಯೋತ್ಪಾದನೆಗೆ ಪ್ರತಿಕ್ರಿಯೆ ಅಧ್ಯಯನದ ರಾಷ್ಟ್ರೀಯ ಒಕ್ಕೂಟ, ವಿದೇಶಾಂಗ ಇಲಾಖೆಯ ಕೋರಿಕೆ ಮೇರೆಗೆ ಈ ವಿಶ್ಲೇಷಣಾ ವರದಿ ಸಲ್ಲಿಸಿದೆ. 2016ಕ್ಕೆ ಹೋಲಿಸಿದರೆ ಭಾರತದಲ್ಲಿ ಶೇ. 8 ವಿಧ್ವಂಸಕ ಕೃತ್ಯ ತಗ್ಗಿದೆ. ಆದರೂ ಭಾರತ ಮೂರನೇ ಸ್ಥಾನದಲ್ಲಿದೆ. 2016ರಲ್ಲೂ ಭಾರತ ಮೂರನೇ ಸ್ಥಾನದಲ್ಲಿತ್ತು ಮತ್ತು ಭಯೋತ್ಪಾದನಾ ದಾಳಿಗೆ ಸತ್ತವರ ಸಂಖ್ಯೆ 380 ಆಗಿತ್ತು. 2015ರಲ್ಲಿ ಪಾಕಿಸ್ತಾನ ತೃತೀಯ ಸ್ಥಾನದಲ್ಲಿತ್ತು ವರದಿ ತಿಳಿಸಿದೆ.
ಭಾರತದಲ್ಲಿ ನಡೆಯುವ ಬಹುತೇಕ ಉಗ್ರ ದಾಳಿಗಳು ಪಾಕಿಸ್ತಾನದಿಂದ ಪ್ರಚೋದಿತವಾಗಿರುತ್ತವೆ. ಉಗ್ರರ ಇಂಥ ಸಂಚಿಗೆ ಪಾಕ್ ಸೇನೆ ಮತ್ತು ಬೇಹುಗಾರಿಕಾ ಸಂಸ್ಥೆಗಳ ಕುಮ್ಮಕ್ಕು ಇರುತ್ತದೆ. ದಶಕಗಳಿಂದ ಉಗ್ರರನ್ನು ರಫ್ತು ಮಾಡುತ್ತಿರುವ ಪಾಕಿಸ್ತಾನದಲ್ಲೂ ಭಯೋತ್ಪಾದನಾ ಗುಂಪುಗಳು ದಾಳಿ ನಡೆಸುತ್ತಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಕಾಶ್ಮೀರದಲ್ಲಿ ಹೆಚ್ಚು ದಾಳಿ: 2017ರಲ್ಲಿ ಭಾರತದ ಮೂರು ರಾಜ್ಯಗಳಲ್ಲಿ ಹೆಚ್ಚಿನ ವಿಧ್ವಂಸಕ ಕೃತ್ಯಗಳು ನಡೆದಿವೆ. ಜಮ್ಮು- ಕಾಶ್ಮೀರದಲ್ಲೆ ಅತಿ ಹೆಚ್ಚು (ಶೇ. 25) ದಾಳಿಗಳು ನಡೆದಿದ್ದು, ಛತ್ತೀಸ್​ಗಢ (ಶೇ. 15) ಮತ್ತು ಪಶ್ಚಿಮ ಬಂಗಾಳ (ಶೇ. 10) ನಂತರ ಸ್ಥಾನದಲ್ಲಿವೆ.
ವಿಶ್ವದಲ್ಲಿ 18,753 ಮಂದಿ ಸಾವು: 2017ರಲ್ಲಿ ವಿಶ್ವದಾದ್ಯಂತ 8,584 ಭಯೋತ್ಪಾದನಾ ದಾಳಿಗಳು ನಡೆದಿದ್ದು, ಒಟ್ಟಾರೆ 18,753 ಜನರು ಬಲಿಯಾಗಿದ್ದಾರೆ. 19, 461 ಮಂದಿ ಗಾಯಗೊಂಡಿದ್ದಾರೆ.
ಅಪಾಯಕಾರಿ ನಕ್ಸಲ್
ಭಾರತದಲ್ಲಿ ಒಂದೆಡೆ ಉಗ್ರವಾದಿಗಳ ಉಪಟಳ ಹೆಚ್ಚುತ್ತಿದ್ದರೆ, ಇನ್ನೊಂದೆಡೆ ನಕ್ಸಲರ ದಾಳಿಯಿಂದ ದೇಶ ನಲುಗುತ್ತಿದೆ. ಕಳೆದ ವರ್ಷ ನಡೆದ ವಿಧ್ವಂಸಕ ಕೃತ್ಯಗಳ ಪೈಕಿ ಸಿಪಿಐ (ಮಾವೋವಾದಿ) ನಕ್ಸಲರು ನಡೆಸಿದ ದಾಳಿ ಪ್ರಮಾಣ ಶೇ. 53. 2016ಕ್ಕೆ (338 ದಾಳಿ) ಹೋಲಿಸಿದರೆ 2017ರಲ್ಲಿ (295 ದಾಳಿ) ನಕ್ಸಲರ ವಿಧ್ವಂಸಕ ಕೃತ್ಯ ತಗ್ಗಿದೆ. ಆದರೆ, ಮೃತರ ಸಂಖ್ಯೆಯಲ್ಲಿ ಶೇ. 16 ಮತ್ತು ಗಾಯಗೊಂಡವರ ಸಂಖ್ಯೆಯಲ್ಲಿ ಶೇ. 50 ಹೆಚ್ಚಳವಾಗಿದೆ. ವಿಶ್ವದಲ್ಲಿ ಅತಿ ಅಪಾಯಕಾರಿ ಸಂಘಟನೆಗಳ ಪಟ್ಟಿಯಲ್ಲಿ ಸಿಪಿಐ (ಮಾವೋವಾದಿ) ನಾಲ್ಕನೇ ಸ್ಥಾನದಲ್ಲಿದೆ. ಐಸಿಸ್ (857 ದಾಳಿ) ತಾಲಿಬಾನ್ (703 ದಾಳಿ) ಅಲ್-ಶಬಾಬ್ (353 ದಾಳಿ) ಕ್ರಮವಾಗಿ ಮೊದಲ ಮೂರು ಸ್ಥಾನಗಳಲ್ಲಿವೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...