ನವದೆಹಲಿ: ಸುಪ್ರೀಂಕೋರ್ಟ್ನ ಮುಂದಿನ ಮುಖ್ಯನ್ಯಾಯಮೂರ್ತಿ ಹುದ್ದೆಗೆ ರಂಜನ್ ಗೊಗೊಯ್ ಹೆಸರನ್ನು ಸಿಜೆಐ ದೀಪಕ್ ಮಿಶ್ರಾ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ. ರಂಜನ್ ಗೊಗೊಯ್ ಸುಪ್ರೀಂ ಕೋರ್ಟ್ನ ಎರಡನೇ ಹಿರಿಯ ನ್ಯಾಯಮೂರ್ತಿಯಾಗಿದ್ದಾರೆ.
ಅ. 2ರಂದು ಹಾಲಿ ಸಿಜೆಐ ದೀಪಕ್ ಮಿಶ್ರಾ ನಿವೃತ್ತಿಯಾಗಲಿದ್ದಾರೆ. ಸಿಜೆಐ ನಿವೃತ್ತಿಗೆ ಒಂದು ತಿಂಗಳ ಮೊದಲು ತಮ್ಮ ಉತ್ತರಾಧಿಕಾರಿಯ ಹೆಸರನ್ನು ಕೇಂದ್ರಕ್ಕೆ ಶಿಫಾರಸು ಮಾಡುವುದು ವಾಡಿಕೆ. ಮುಂದಿನ ಸಿಜೆಐ ಹೆಸರು ಶಿಫಾರಸು ಮಾಡುವಂತೆ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಇತ್ತೀಚೆಗೆ ಪತ್ರ ಬರೆದಿದ್ದರು. ಸಂಪ್ರದಾಯದಂತೆ ಸಿಜೆಐ ಶಿಫಾರಸು ಒಪ್ಪಿಕೊಂಡು ಮುಂದಿನ ಮುಖ್ಯ ನ್ಯಾಯಮೂರ್ತಿಯನ್ನು ರಾಷ್ಟ್ರಪತಿ ಮೂಲಕ ನೇಮಕ ಮಾಡಲಾಗುತ್ತದೆ. 2019ರ ನ.17ರವರೆಗೆ ಸೇವಾವಧಿ ಹೊಂದಿರುವ ನ್ಯಾ.ಗೊಗೊಯ್ ಹೆಸರು ಅಂತಿಮಗೊಳ್ಳುವ ಸಾಧ್ಯತೆ ಹೆಚ್ಚಿದೆ. ರಾಷ್ಟ್ರಪತಿ ಭವನದಲ್ಲಿ ಅ. 3ರಂದು ಸಿಜೆಐ ಆಗಿ ನ್ಯಾ.ರಂಜನ್ ಗೊಗೊಯ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ವರದಿಯಾಗಿದೆ. ಗುವಾಹಟಿ ಹೈಕೋರ್ಟ್ಗೆ 2011ರಲ್ಲಿ ನ್ಯಾಯಮೂರ್ತಿಯಾಗಿ ನೇಮಕವಾದ ನ್ಯಾ.ಗೊಗೊಯ್, 2012ರಲ್ಲಿ ಸುಪ್ರೀಂ ಕೋರ್ಟ್ಗೆ ಬಡ್ತಿ ಪಡೆದಿದ್ದರು. ನಿವೃತ್ತರಾಗಿರುವ ನ್ಯಾ. ಚೆಲಮೇಶ್ವರ್ ಜತೆ ಸುದ್ದಿಗೋಷ್ಠಿ ನಡೆಸಿದ ಇತರ ನಾಲ್ವರು ಹಿರಿಯ ನ್ಯಾಯಮೂರ್ತಿಗಳಲ್ಲಿ ನ್ಯಾ. ಗೊಗೊಯ್ ಕೂಡ ಒಬ್ಬರು ಎನ್ನುವುದು ವಿಶೇಷ.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ