ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಯುದ್ಧವಿಮಾನ ಖರೀದಿ?,

<< 1.5 ಲಕ್ಷ ಕೋಟಿ ರೂಪಾಯಿ ಮೌಲ್ಯದ 114 ಫೈಟರ್ ಜೆಟ್ >>
ನವದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿ ವಿವಾದವು ತಾರಕಕ್ಕೇರುತ್ತಿರುವಾಗಲೇ ಕೇಂದ್ರ ಸರ್ಕಾರ 114 ಹೊಸ ಯುದ್ಧ ವಿಮಾನ ಖರೀದಿಗೆ ಮುಂದಾಗಿದೆ.
ವಾಯುಸೇನೆಗೆ ತುರ್ತು ಅಗತ್ಯವಿರುವ 114 ಯುದ್ಧ ವಿಮಾನ ಖರೀದಿಯ -ಠಿ; 1.5 ಲಕ್ಷ ಕೋಟಿ ಮೊತ್ತದ ಯೋಜನೆಗೆ ರಕ್ಷಣಾ ಸಚಿವ ನಿರ್ಮಲಾ ಸೀತಾರಾಮನ್ ನೇತೃತ್ವದ ರಕ್ಷಣಾ ಸ್ವಾಧೀನ ಮಂಡಳಿ ಒಪ್ಪಿಗೆ ಸೂಚಿಸುವ ಸಾಧ್ಯತೆಯಿದೆ. ಮಾಸಾಂತ್ಯದಲ್ಲಿ ನಡೆಯುವ ಸಭೆಯಲ್ಲಿ ಈ ಕುರಿತು ಅಂತಿಮ ನಿರ್ಣಯವಾಗಲಿದೆ. ಎನ್​ಡಿಎ ಸರ್ಕಾರದ ಅವಧಿಯ ಅತಿ ದೊಡ್ಡ ರಕ್ಷಣಾ ಖರೀದಿ ಇದಾಗಲಿದೆ. ಈ ಒಪ್ಪಂದವು ಭೌತಿಕವಾಗಿ ಜಾರಿಯಾಗಲು ಕನಿಷ್ಠ 3 ವರ್ಷ ಬೇಕಾಗಬಹುದು ಎಂದು ಅಂದಾಜಿಸಲಾಗಿದೆ. ಒಪ್ಪಂದವಾದ ಬಳಿಕ ವಿಮಾನಗಳು ವಾಯುಸೇನೆಗೆ ಸೇರಲು ಮತ್ತೆ 3 ವರ್ಷ ಬೇಕಾಗುತ್ತದೆ. ಆದರೆ ಚೀನಾ ಹಾಗೂ ಪಾಕಿಸ್ತಾನದ ಗಡಿ ತಂಟೆಯ ಕಾರಣದಿಂದ ಕಡಿಮೆ ಅವಧಿಯಲ್ಲಿ ಯುದ್ಧ ವಿಮಾನ ಭಾರತಕ್ಕೆ ಬರುವಂತಾಗಬೇಕು ಎನ್ನುವುದು ವಾಯುಸೇನೆಯ ಆಗ್ರಹವಾಗಿದೆ.
ರಕ್ಷಣಾ ಸಚಿವರ ನೇತೃತ್ವದ ಮಂಡಳಿ ಖರೀದಿಗೆ ತಾತ್ತಿ್ವಕ ಒಪ್ಪಿಗೆ ನೀಡುತ್ತಿದ್ದಂತೆ, ವಾಯುಸೇನೆ ಟೆಂಡರ್ ಕರೆಯಲಿದೆ. ವಿದೇಶಿ ಕಂಪನಿಗಳ ಟೆಂಡರ್ ಬಿಡ್ ನೋಡಿ, ಅಂತಿಮ ನಿರ್ಧಾರ ಮಾಡಲಾಗುತ್ತದೆ. ಇದಕ್ಕೆ ಕನಿಷ್ಠ 3 ತಿಂಗಳು ಅವಕಾಶ ನೀಡಬೇಕು. ಈ ಪ್ರಕ್ರಿಯೆ ಬಳಿಕ ವಾಯುಸೇನೆಯ ಷರತ್ತು ಹಾಗೂ ಇತರ ವಿಚಾರಗಳನ್ನು ಮುಂದಿಟ್ಟುಕೊಂಡು ಕಂಪನಿಗಳ ಜತೆ ಮಾತುಕತೆ ನಡೆಯಲಿದೆ. ಭಾರತ ಸರ್ಕಾರದ ಎಲ್ಲ ಷರತ್ತು ಒಪ್ಪಿಕೊಂಡ ಬಳಿಕ ಅಂತಿಮ ಒಪ್ಪಂದಕ್ಕೆ ಸಹಿ ಹಾಕಲಾಗುತ್ತದೆ.
ಮೇಕ್ ಇನ್ ಇಂಡಿಯಾ: ವಾಯುಸೇನೆ ಖರೀದಿಸಲಿರುವ 114 ಯುದ್ಧ ವಿಮಾನಗಳಲ್ಲಿ ಕೇವಲ 18 ವಿಮಾನಗಳನ್ನು ನೇರವಾಗಿ ಆಮದು ಮಾಡಿಕೊಳ್ಳಲಾಗುತ್ತದೆ. ಉಳಿದ 96 ಯುದ್ಧ ವಿಮಾನಗಳನ್ನು ಭಾರತದಲ್ಲಿಯೇ ನಿರ್ವಿುಸುವ ಷರತ್ತು ಹಾಕಲಾಗಿದೆ. ಇದರಿಂದ ಭಾರತದಲ್ಲಿ ದೊಡ್ಡ ಪ್ರಮಾಣದ ಕೈಗಾರಿಕೆ ಹಾಗೂ ಉದ್ಯೋಗಕ್ಕೆ ಅನುವು ಮಾಡಿಕೊಡಲಿದೆ. ಈ ಷರತ್ತಿನಿಂದ ಯುದ್ಧ ವಿಮಾನವು ವಾಯುಸೇನೆ ಸೇರುವುದು ವಿಳಂಬವಾಗಲಿದೆ ಎಂದು ಅಧಿಕಾರಿಗಳು ಆತಂಕವ್ಯಕ್ತಪಡಿಸಿದ್ದಾರೆ. ಆದರೆ ಸರ್ಕಾರ ಮೇಕ್ ಇನ್ ಇಂಡಿಯಾಕ್ಕೆ ಒತ್ತು ಕೊಡಲು ನಿರ್ಧರಿಸಿದೆ.
ರೇಸ್​ನಲ್ಲಿ ಯಾವ್ಯಾವ ವಿಮಾನಗಳು?
ಮಿಗ್-35(ರಷ್ಯಾ)
ಎಫ್-16, ಎಫ್-18(ಅಮೆರಿಕ)
ಗ್ರಿಪನ್-ಇ(ಸ್ವೀಡನ್)
ಯೂರೋಫೈಟರ್ ಟೈಫೂನ್(ಬ್ರಿಟನ್)
ರಫೇಲ್(ಫ್ರಾನ್ಸ್)
ಖರೀದಿ ಏಕೆ?
ಚೀನಾ ಹಾಗೂ ಪಾಕಿಸ್ತಾನದ ಸಂಭಾವ್ಯ ಯುದ್ಧ ಎದುರಿಸಲು ವಾಯುಸೇನೆಗೆ ಕನಿಷ್ಠ 42 ಸ್ಕ್ವಾಡ್ರನ್​ ಅಗತ್ಯವಿದೆ. ಪ್ರತಿ ಸ್ಕ್ವಾಡ್ರನ್​ನಲ್ಲಿ 16-18 ಯುದ್ಧ ವಿಮಾನಗಳಿರುತ್ತವೆ.
ಭಾರತೀಯ ವಾಯುಸೇನೆ ಕೇವಲ 31 ಸ್ಕ್ವಾಡ್ರನ್​ ಹೊಂದಿದೆ.
ಪಾಕಿಸ್ತಾನವು 23 ಸ್ಕ್ವಾಡ್ರನ್​ ಗಳನ್ನು ಹೊಂದಿದೆ.
ಚೀನಾದಲ್ಲಿ 2100 ಯುದ್ಧ ವಿಮಾನಗಳಿವೆ.
ಮಿಗ್ ಶ್ರೇಣಿಯ 4 ಸ್ಕ್ವಾಡ್ರನ್​ 2019ರಲ್ಲಿ ನಿವೃತ್ತಿಯಾಗುತ್ತಿವೆ.
ತೇಜಸ್ ಯುದ್ಧ ವಿಮಾನ ತಯಾರಿಕೆಯಲ್ಲಿ ವಿಳಂಬ.
ಮುಂದಿನ ಹಾದಿಯೇನು?
2019ರ ವೇಳೆಗೆ 36 ಸುಖೋಯ್ ಯುದ್ಧವಿಮಾನ ಲಭ್ಯ.
2019-22ರ ಅವಧಿಯಲ್ಲಿ 36 ರಫೇಲ್ ಯುದ್ಧವಿಮಾನ ಬರಲಿವೆ.
123 ತೇಜಸ್ ಯುದ್ಧವಿಮಾನ ನಿರ್ಮಾಣ ಹಂತದಲ್ಲಿದೆ.
ರಫೇಲ್ ಖರೀದಿ ಕತೆ ಏನು?
ಕೇಂದ್ರ ಸರ್ಕಾರವು ಈಗಾಗಲೇ ಫ್ರಾನ್ಸ್​ನ ದಸಾಲ್ಟ್ ಕಂಪನಿಯಿಂದ 36 ರಫೇಲ್ ಯುದ್ಧ ವಿಮಾನಗಳನ್ನು 59,000 ಕೋಟಿಗೆ ರೂ.ಗೆ ಖರೀದಿಸುತ್ತಿದೆ. ಇದೇ ಒಪ್ಪಂದ ಮುಂದುವರಿಸಿ ಉಳಿದ 114 ವಿಮಾನಗಳನ್ನು ಖರೀದಿಸಲು ವಾಯುಸೇನೆ ಆಸಕ್ತಿ ತೋರಿದೆ. ಆದರೆ ರಫೇಲ್ ವಿರುದ್ಧ ದೇಶದ ರಾಜಕೀಯ ವಲಯದಲ್ಲಿ ನಡೆಯುತ್ತಿರುವ ಚರ್ಚೆ ಹಿನ್ನೆಲೆಯಲ್ಲಿ ಒಪ್ಪಂದವನ್ನು ವಿಸ್ತರಿಸುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.
ಈ ಒಪ್ಪಂದವು ಎರಡು ಸರ್ಕಾರಗಳ ಮಧ್ಯೆ ಇರುವುದರಿಂದ ಪಾರದರ್ಶಕ ಹಾಗೂ ಸುರಕ್ಷಿತವಾಗಿತ್ತು. ಕಡಿಮೆ ಅವಧಿಯಲ್ಲಿ ಯುದ್ಧ ವಿಮಾನಗಳ ಪೂರೈಕೆಯೂ ಆಗಲಿದೆ ಎನ್ನುವುದು ಅಧಿಕಾರಿಗಳ ವಾದವಾಗಿದೆ. 2019-22ರ ಅವಧಿಯಲ್ಲಿ ಭಾರತಕ್ಕೆ 36 ರಫೇಲ್ ಯುದ್ಧ ವಿಮಾನಗಳು ಬರಲಿವೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...