ತ್ರಿವಳಿ ತಲಾಕ್ ಮಸೂದೆಗೆ ರಾಜ್ಯಸಭೆಯಲ್ಲಿ ಅನುಮೋದನೆ ದೊರೆಯದ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ತ್ರಿವಳಿ ತಲಾಕ್ ನಿಷೇಧ ಸುಗ್ರೀವಾಜ್ಞೆಗೆ ಒಪ್ಪಿಗೆ ನೀಡಲಾಗಿದೆ.
ಈ ಮೂಲಕ ತ್ರಿವಳಿ ತಲಾಕ್ ಶಿಕ್ಷಾರ್ಹ ಅಪರಾಧವಾಗಲಿದೆ.
ತ್ರಿವಳಿ ತಲಾಕ್ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಅನುಮೋದನೆ ದೊರೆತಿತ್ತು, ಆದರೆ, ರಾಜ್ಯಸಭೆಯಲ್ಲಿ ಅನುಮೋದನೆ ದೊರೆತಿರಲಿಲ್ಲ. ಇದರಿಂದಾಗಿ ತ್ರಿವಳಿ ತಲಾಕ್ ತಿದ್ದುಪಡಿ ಮಸೂದೆ ಕಾಯ್ದೆಯಾಗಿ ಜಾರಿಗೆ ಬರಲು ಸಾಧ್ಯವಾಗಿರಲಿಲ್ಲ.
ಆಗಸ್ಟ್ನಲ್ಲಿ ಕೇಂದ್ರ ಸರ್ಕಾರ ತ್ರಿವಳಿ ತಲಾಕ್ ಮಸೂದೆಗೆ 3 ತಿದ್ದುಪಡಿಗಳನ್ನು ತಂದಿತ್ತು. ಪ್ರಸ್ತಾವಿತ ತಿದ್ದುಪಡಿ ಪ್ರಕಾರ, ತ್ರಿವಳಿ ತಲಾಕ್ ಜಾಮೀನು ರಹಿತ ಅಪರಾಧವಾಗಿಯೇ ಮುಂದುವರಿಯಲಿದೆ. ಆದರೆ, ಪತ್ನಿಯ ಅಭಿಪ್ರಾಯ ಪಡೆದು ನ್ಯಾಯಾಧೀಶರು ಜಾಮೀನು ನೀಡಬಹುದು. ಮಕ್ಕಳನ್ನು ತನ್ನ ವಶಕ್ಕೆ ನೀಡುವಂತೆ ತಾಯಿ ಅರ್ಜಿ ಹಾಕಬಹುದು.
ತ್ರಿವಳಿ ತಲಾಕ್ ದೂರನ್ನು ಆರೋಪಿಯ ಪತ್ನಿ ಅಥವಾ ಆಕೆಯ ರಕ್ತ ಸಂಬಂಧಿಗಳು ಮಾತ್ರ ನೀಡಬಹುದಾಗಿದೆ. ಜತೆಗೆ ಎಫ್ಐಆರ್ ದಾಖಲಿಸಿ ಆರೋಪಿಯನ್ನು ತಕ್ಷಣ ಬಂಧಿಸಬೇಕೆಂದಿಲ್ಲ ಎಂಬ ಅಂಶಗಳನ್ನು ಮಸೂದೆಯಲ್ಲಿ ಸೇರಿಸಲಾಗಿದೆ.
ಸುಗ್ರೀವಾಜ್ಞೆಗೆ 6 ತಿಂಗಳೊಳಗೆ ಸಂಸತ್ತಿನಲ್ಲಿ ಅನುಮೋದನೆ ಪಡೆಯಬೇಕು. ಹಾಗಾಗಿ ಕೇಂದ್ರ ಸರ್ಕಾರ ಚಳಿಗಾಲದ ಅಧಿವೇಶನದಲ್ಲಿ ತ್ರಿವಳಿ ತಲಾಕ್ ಮಸೂದೆಯನ್ನು ಮಂಡಿಸಲಿದೆ. (ಏಜೆನ್ಸೀಸ್)
ತ್ರಿವಳಿ ತಲಾಕ್ ಮಸೂದೆ ತಿದ್ದುಪಡಿ
ತ್ರಿವಳಿ ತಲಾಕ್ ಮಸೂದೆ ಮುಂದಿನ ಅಧಿವೇಶನಕ್ಕೆ

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ