ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಇಂದು ಪತ್ರಿಕಾ ವಿತರಕರ ದಿನ,

ಬೆಂಗಳೂರು: ಮಂಗಳವಾರ (ಸೆ. 4) ಪತ್ರಿಕಾ ವಿತರಕರ ದಿನ. ಚಳಿ, ಮಳೆ ಎನ್ನದೆ ಪ್ರತಿ ನಿತ್ಯ ಬೆಳಗ್ಗಿನ ಜಾವ ಸಕಾಲಕ್ಕೆ ಮನೆ-ಮನೆಗಳಿಗೆ ಪತ್ರಿಕೆ ತಲುಪಿಸುವ ವಿತರಕರ ಶ್ರಮ ಅಪಾರ. ಕೇವಲ 2-3 ಗಂಟೆಗಳಲ್ಲಿ ತಮ್ಮ ವ್ಯಾಪಿಯ ಸಾವಿರಾರು ಮನೆಗಳಿಗೆ ಪತ್ರಿಕೆಗಳನ್ನು ಹಾಕುವ ಕಾರ್ಯ ನಿತ್ಯ ತಪ್ಪದು. ಪತ್ರಿಕೆ ಸಕಾಲದಲ್ಲಿ ಸಿಗದಿದ್ದರೆ ಲಕ್ಷಾಂತರ ಓದುಗರು ಚಡಪಡಿಸುತ್ತಿರುತ್ತಾರೆ. ಆ ಕಾರಣಕ್ಕಾಗಿಯೇ ಬೆಳಗಿನ ಜಾವ ವಿಳಂಬ ಮಾಡದ ವಿತರಕರು ಸೈಕಲ್ ಮತ್ತು ಬೈಕನ್ನೇರಿ ಪತ್ರಿಕೆಗಳನ್ನು ಸಂಗ್ರಹಿಸಿ ಮನೆಮನೆಗಳಿಗೆ ಪತ್ರಿಕೆ ಹಾಕುವ ಕಾರ್ಯದಲ್ಲಿ ತೊಡಗಿಸಿಕೊಂಡಿರುತ್ತಾರೆ.
ಜಾಗತೀಕರಣ, ಆಧುನಿಕತೆ ಎಷ್ಟೇ ಮುಂದುವರಿದರೂ ವಿತರಣೆ ವ್ಯವಸ್ಥೆ ಮಾತ್ರ ಹಳೇ ಪದ್ದತಿಯಲ್ಲೇ ಇದೆ. ಇಂದಿಗೂ ಸೈಕಲ್ ಮೇಲೆ ವಿತರಕರು ಮನೆಗಳಿಗೆ ಪತ್ರಿಕೆ ಹಾಕುತ್ತಿದ್ದಾರೆ. ಇದಕ್ಕೆ ಪರ್ಯಾಯ ವ್ಯವಸ್ಥೆ ತರಬೇಕಿದೆ. ಪತ್ರಿಕೆ ವಿತರಣೆ ಕಷ್ಟದ ಕೆಲಸವಾದರೂ ಸಮಾಜದಲ್ಲಿ ಅವರಿಗೆ ವೃತ್ತಿ ಗೌರವ ಹೆಚ್ಚಿದೆ. ಬಹುತೇಕ ಬಡ ಕುಟುಂಬದ ಮಕ್ಕಳು ಇಂದಿಗೂ ಬೆಳಗ್ಗೆ ಎದ್ದು ಪತ್ರಿಕೆ ಹಾಕುವ ಕೆಲಸ ಮಾಡಿಕೊಂಡು ವಿದ್ಯಾಭ್ಯಾಸ ಮಾಡಿ ಬದುಕು ಕಟ್ಟಿಕೊಂಡಿರುವ ನಿದರ್ಶನಗಳು ನಮ್ಮ ಮುಂದೆ ಸಾಕಷ್ಟಿವೆ.
ಹೊಸಬರು ಈ ವೃತ್ತಿಗೆ ಬರುವಂತೆ ಆಕರ್ಷಿಸಲು ಸರ್ಕಾರ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಬೇಕು. ಬೆಳಗಿನ ಜಾವ 5 ಗಂಟೆಗೆ ಕರ್ತವ್ಯಕ್ಕೆ ಹಾಜರಾಗುವ ಪತ್ರಿಕಾ ವಿತರಕರು ಕೆಲವೊಮ್ಮೆ ಅನಾಹುತಗಳಿಗೆ ತುತ್ತಾಗುವ ಸಾಧ್ಯತೆ ಇರುತ್ತದೆ. ಆಗ ನೆರವಿಗೆ ಬರಬೇಕು ಎನ್ನುತ್ತಾರೆ ಯಶವಂತಪುರ ವಿತರಕ ಚಂದ್ರಶೇಖರ್.
ಅನುದಾನ ಹೆಚ್ಚಿಸಲಿ: ಪತ್ರಿಕಾ ವಿತರಕರ ಸಮಸ್ಯೆಗಳನ್ನು ನಿವಾರಿಸಲು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಬಜೆಟ್​ನಲ್ಲಿ 2 ಕೋಟಿ ರೂ. ಅನುದಾನ ಘೋಷಿಸಿದೆ. ರಾಜ್ಯಮಟ್ಟದಲ್ಲಿ ಒಂದು ಸಂಘವನ್ನು ಆರಂಭಿಸಿ ಅದರ ಮೂಲಕ ಫಲಾನುಭವಿಗಳಿಗೆ ಸೌಲಭ್ಯ ಒದಗಿಸಬೇಕು. ಇದರಿಂದಾಗಿ ಮಧ್ಯವರ್ತಿಗಳ ಹಾವಳಿ ತಪ್ಪಿಸಿದಂತಾಗುತ್ತದೆ. ಬರುವ ಬಜೆಟ್​ನಲ್ಲಿ ಕ್ಷೇಮ ನಿಧಿಗೆ ಹೆಚ್ಚು ಅನುದಾನ ನೀಡಬೇಕು ಎಂದು ಮಹಾಲಕ್ಷ್ಮಿ ಲೇಔಟ್ ಪತ್ರಿಕಾ ವಿತರಕ ಶಂಭು ಹೇಳಿದರು.
ವಿತರಕರ ಬೇಡಿಕೆಗಳೇನು?
ವಿತರಕರನ್ನು ಗುರುತಿಸಿ ಐಡಿ ಕಾರ್ಡ್ ನೀಡಿ
ಪತ್ರಿಕೆ ಸಂಗ್ರಹಣೆಗಾಗಿ ನಿಗದಿತ ಸ್ಥಳ ಕಲ್ಪಿಸಿ
ದ್ವಿಚಕ್ರ ವಾಹನ ಖರೀದಿಗೆ ಸಬ್ಸಿಡಿ
ಕಡಿಮೆ ಬಡ್ಡಿ ದರದಲ್ಲಿ ಸಾಲ ವ್ಯವಸ್ಥೆ
ವಿತರಕರ ಮಕ್ಕಳ ಉನ್ನತ ಶಿಕ್ಷಣಕ್ಕೆ ನೆರವು
ಆರೋಗ್ಯಕ್ಕಾಗಿ ಕಾರ್ಯಕ್ರಮ
ಪಿಂಚಣಿ ಸೌಲಭ್ಯ
ವಿತರಕರನ್ನು ಗುರುತಿಸುವ ಕೆಲಸವಾಗಲಿ
ಮನೆ-ಮನೆಗಳಿಗೆ ಪತ್ರಿಕೆ ಹಾಕುತ್ತಿರುವ ವಿತರಕರನ್ನು ಗುರುತಿಸಿ ಅಸಂಘಟಿತದಿಂದ ಸಂಘಟಿತ ವಲಯಕ್ಕೆ ತರುವ ಕೆಲಸವಾಗಬೇಕಿದೆ. ರಾಜ್ಯದಲ್ಲಿ ಅಂದಾಜು 40ಸಾವಿರ ಪತ್ರಿಕಾ ವಿತರಕರಿದ್ದು, ಗುರುತಿನ ಚೀಟಿ ನೀಡಿದರೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಾಧ್ಯವಾಗಬಹುದು. ಪ್ರತಿ ಜಿಲ್ಲೆಗೆ ಸರ್ಕಾರದ ವತಿಯಿಂದ ಉಸ್ತುವಾರಿ ಅಧಿಕಾರಿಯನ್ನು ನೇಮಿಸಬೇಕು. ಅದಕ್ಕಿಂತ ಮುಂಚೆ ವಿತರಕರನ್ನು ಗುರುತಿಸುವ ಕೆಲಸವಾಗಬೇಕು.
ನಿಧಿ ನಿರ್ವಹಣೆ ಮಾಧ್ಯಮ ಅಕಾಡೆಮಿಗೆ
ಪತ್ರಿಕಾ ವಿತರಕರ ಕ್ಷೇಮ ನಿಧಿಗೆ ಸರ್ಕಾರ ಘೋಷಿಸಿರುವ 2 ಕೋಟಿ ರೂ.ಗಳನ್ನು ಕರ್ನಾಟಕ ಮಾಧ್ಯಮ ಅಕಾಡೆಮಿಗೆ ನೀಡಲು ತೀರ್ವನಿಸಲಾಗಿದೆ. ಚಲನಚಿತ್ರ ಅಕಾಡೆಮಿಯಲ್ಲಿ ಕಾರ್ವಿುಕರಿಗಾಗಿ 10 ಕೋಟಿ ರೂ. ನಿಧಿ ಇಡಲಾಗಿದ್ದು, ಅದನ್ನು ನಿಭಾಯಿಸುತ್ತಿರುವ ಮಾದರಿಯಲ್ಲಿಯೇ ಪತ್ರಿಕಾ ವಿತರಕರ ಕ್ಷೇಮ ನಿಧಿ ಬಳಸಲು ಮಾರ್ಗಸೂಚಿ ಸಿದ್ಧಪಡಿಸಲಾಗುತ್ತಿದೆ. ಮುಂದೆ ಇನ್ನೂ ಹೆಚ್ಚಿನ ನೆರವನ್ನು ಸರ್ಕಾರ ನೀಡಲಿದೆ ಎಂದು ಸಿಎಂ ಮಾಧ್ಯಮ ಕಾರ್ಯದರ್ಶಿ ಎಚ್.ಬಿ. ದಿನೇಶ್ ತಿಳಿಸಿದ್ದಾರೆ.
ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿಗೆ ಹಿಂದಿನ ಸರ್ಕಾರ ಅನುದಾನ ನೀಡಿದ್ದು, ಫಲಾನುಭವಿಗಳಿಗೆ ತಲುಪಿಸುವ ಕೆಲಸ ಆಗುತ್ತಿಲ್ಲ. ಈಗಿನ ಸರ್ಕಾರ ಈ ಬಗ್ಗೆ ಗಮನ ಹರಿಸಬೇಕು.
| ಮುಕುಂದ ಮಾರತ್​ಹಳ್ಳಿ
ಬೆಳಗಿನ ಜಾವ ಪತ್ರಿಕೆ ಹಾಕಲು ತೆರಳು ವಾಗ ಅವಘಡ ವಾಗುವ ಸಾಧ್ಯತೆ ಇರುತ್ತದೆ. ದಟ್ಟವಾದ ಮಂಜು ಕವಿದಾಗ ಎದುರಿಗೆ ಬರುವ ವಾಹನ ಕಾಣದು. ಆದ್ದರಿಂದ ವಿಮೆ ಸೌಲಭ್ಯ ಇದ್ದರೆ ಒಳ್ಳೆಯದು.
| ಉಮಾಶಂಕರ್ ಹೊಸಹಳ್ಳಿ
ಪತ್ರಿಕಾ ವಿತರಕರಿಗೆ ಜೀವನ ಭದ್ರತೆ ಇಲ್ಲ. ಕಮಿಷನ್ ಆಧಾರದಲ್ಲಿ ದುಡಿದು ಜೀವನ ನಡೆಸಬೇಕಿದೆ. ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಸಿಗಬೇಕು. ಸರ್ಕಾರದಿಂದ ಪ್ರತಿ ವರ್ಷ ಪತ್ರಿಕಾ ವಿತರಕರ ಪ್ರತಿಭಾವಂತ ಮಕ್ಕಳನ್ನು ಪ್ರೋತ್ಸಾಹಿಸಬೇಕು.
| ಅನಂತ್ ನವರಂಗ್

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...