ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ವಿರಾಟ್ ಕೊಹ್ಲಿ, ಮೀರಾಬಾಯಿಗೆ ಖೇಲ್​ರತ್ನ ಗೌರವ,

ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ವಿಶ್ವ ಚಾಂಪಿಯನ್ ವೇಟ್​ಲಿಫ್ಟರ್ ಮೀರಾಬಾಯಿ ಚಾನು 2018ರ ಸಾಲಿನ ಪ್ರತಿಷ್ಠಿತ ರಾಜೀವ್ ಗಾಂಧಿ ಖೇಲ್​ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಜಾವೆಲಿನ್ ಥ್ರೋ ತಾರೆ ನೀರಜ್ ಚೋಪ್ರಾ, ಅಥ್ಲೀಟ್ ಹಿಮಾ ದಾಸ್ ಮತ್ತು ಕರ್ನಾಟಕದ ಟೆನಿಸ್ ತಾರೆ ರೋಹನ್ ಬೋಪಣ್ಣ ಸಹಿತ 20 ಕ್ರೀಡಾಪಟುಗಳು ಅರ್ಜುನ ಪ್ರಶಸ್ತಿಗೆ ಪಡೆದಿದ್ದಾರೆ. ಕ್ರೀಡಾ ಸಚಿವಾಲಯ ಗುರುವಾರ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳನ್ನು ಅಧಿಕೃತವಾಗಿ ಘೋಷಿಸಿದೆ. ಕಳೆದ ಒಂದು ದಶಕದಿಂದ ಭಾರತ ಬಾಕ್ಸಿಂಗ್ ತಂಡದ ಕೋಚ್ ಆಗಿರುವ ಮೈಸೂರಿನ ಸಿಎ ಕುಟ್ಟಪ್ಪ ಮತ್ತು ರಾಜ್ಯದ ಹಿರಿಯ ಅಥ್ಲೆಟಿಕ್ಸ್ ಕೋಚ್ ವಿಆರ್ ಬೀಡು, ದ್ರೋಣಾಚಾರ್ಯ ಪ್ರಶಸ್ತಿ ಪಡೆದಿದ್ದಾರೆ.
ಪ್ರಶಸ್ತಿಯಲ್ಲೇನಿದೆ
1991-92ರಲ್ಲಿ ಆರಂಭಗೊಂಡ ಖೇಲ್​ರತ್ನ ಪ್ರಶಸ್ತಿ 7.5 ಲಕ್ಷ ರೂ. ನಗದು ಬಹುಮಾನ ಒಳಗೊಂಡಿದೆ. ಜತೆಗೆ ಒಂದು ಪದಕ, ಪ್ರಮಾಣ ಪತ್ರವನ್ನೂ ರಾಷ್ಟ್ರಪತಿ ವಿತರಿಸಲಿದ್ದಾರೆ. ಅರ್ಜುನ, ದ್ರೋಣಾಚಾರ್ಯ ಮತ್ತು ಧ್ಯಾನ್​ಚಂದ್ ಪ್ರಶಸ್ತಿ ತಲಾ 5 ಲಕ್ಷ ರೂ. ನಗದು ಬಹುಮಾನ ಮತ್ತು ಕ್ರಮವಾಗಿ ಅರ್ಜುನ, ದ್ರೋಣಾಚಾರ್ಯ ಮತ್ತು ಧ್ಯಾನ್​ಚಂದ್ ಪ್ರತಿಮೆ, ಪ್ರಮಾಣಪತ್ರವನ್ನು ಒಳಗೊಂಡಿದೆ.
2018ರ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರು: ರಾಜೀವ್ ಗಾಂಧಿ ಖೇಲ್​ರತ್ನ: ವಿರಾಟ್ ಕೊಹ್ಲಿ (ಕ್ರಿಕೆಟ್), ಮೀರಾಬಾಯಿ ಚಾನು (ವೇಟ್​ಲಿಫ್ಟಿಂಗ್).
ಅರ್ಜುನ ಪ್ರಶಸ್ತಿ: ಸ್ಮೃತಿ ಮಂದನಾ (ಕ್ರಿಕೆಟ್), ರೋಹನ್ ಬೋಪಣ್ಣ (ಟೆನಿಸ್), ನೀರಜ್ ಚೋಪ್ರಾ, ಜಿನ್ಸನ್ ಜಾನ್ಸನ್, ಹಿಮಾ ದಾಸ್ (ಅಥ್ಲೆಟಿಕ್ಸ್), ಶುಭಾಂಕರ್ ಶರ್ಮ (ಗಾಲ್ಪ್), ಸತೀಶ್ ಕುಮಾರ್ (ಬಾಕ್ಸಿಂಗ್), ಸಿಕ್ಕಿ ರೆಡ್ಡಿ (ಬ್ಯಾಡ್ಮಿಂಟನ್), ಮನ್​ಪ್ರೀತ್ ಸಿಂಗ್, ಸವಿತಾ (ಹಾಕಿ), ರವಿ ರಾಥೋಡ್ (ಪೋಲೋ), ರಾಹಿ ಸನೋಬಟ್, ಅಂಕುರ್ ಮಿತ್ತಲ್, ಶ್ರೇಯಸಿ ಸಿಂಗ್ (ಶೂಟಿಂಗ್), ಮನಿಕಾ ಬಾತ್ರಾ, ಜಿ. ಸತ್ಯನ್ (ಟೇಬಲ್ ಟೆನಿಸ್), ಸುಮಿತ್ (ಕುಸ್ತಿ), ಪೂಜಾ (ವುಶು), ಅಂಕುರ್ ಧಾಮ (ಪ್ಯಾರಾ ಅಥ್ಲೆಟಿಕ್ಸ್), ಮನೋಜ್ ಸರ್ಕಾರ್ (ಪ್ಯಾರಾ ಬ್ಯಾಡ್ಮಿಂಟನ್).
ದ್ರೋಣಾಚಾರ್ಯ ಪ್ರಶಸ್ತಿ: ಎಸ್​ಎಸ್ ಪನ್ನು (ಅಥ್ಲೆಟಿಕ್ಸ್), ಸಿಎ ಕುಟ್ಟಪ್ಪ (ಬಾಕ್ಸಿಂಗ್), ವಿಜಯ್ ಶರ್ಮ (ವೇಟ್​ಲಿಫ್ಟಿಂಗ್), ಶ್ರೀನಿವಾಸ ರಾವ್ (ಟೇಬಲ್ ಟೆನಿಸ್), ಕ್ಲಾರೆನ್ಸ್ ಲೋಬೋ (ಹಾಕಿ), ತಾರಕ್ ಸಿನ್ಹಾ (ಕ್ರಿಕೆಟ್), ಜೀವನ್​ಕುಮಾರ್ ಶರ್ಮ (ಜುಡೋ), ವಿಆರ್ ಬೀಡು (ಅಥ್ಲೆಟಿಕ್ಸ್).
ಧ್ಯಾನ್​ಚಂದ್ ಪ್ರಶಸ್ತಿ: ಸತ್ಯದೇವ್ ಪ್ರಸಾದ್ (ಆರ್ಚರಿ), ಭರತ್ ಛೇಟ್ರಿ (ಹಾಕಿ), ಬಾಬಿ ಅಲೋಶಿಯಸ್, ಚೌಗಲೆ ದಾದು ದತ್ತಾತ್ರೇಯ (ಕುಸ್ತಿ).
ರಾಷ್ಟ್ರೀಯ ಖೇಲ್ ಪ್ರೋತ್ಸಾಹನ್ ಪುರಸ್ಕಾರ್: ಜೆಎಸ್​ಡಬ್ಲ್ಯು ಸ್ಪೋರ್ಟ್ಸ್, ರಾಷ್ಟ್ರೀಯ ಇಸ್ಪಾತ್ ನಿಗಮ್ ಲಿಮಿಟೆಡ್, ಇಶಾ ಔಟ್​ರೀಚ್.
25ರಂದು ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ಸೆ. 25ರಂದು ನಡೆಯಲಿರುವ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ. ಪ್ರತಿ ವರ್ಷ ರಾಷ್ಟ್ರೀಯ ಕ್ರೀಡಾ ದಿನವಾದ ಆ. 29ರಂದು ಕ್ರೀಡಾ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಏಷ್ಯಾಡ್​ನಿಂದಾಗಿ ಸಮಾರಂಭ ಮುಂದೂಡಲ್ಪಟ್ಟಿತ್ತು.
ಖೇಲ್​ರತ್ನ ತಪ್ಪಿದ್ದಕ್ಕೆ ಭಜರಂಗ್ ಗರಂ!
ಕಾಮನ್ವೆಲ್ತ್-ಏಷ್ಯನ್ ಗೇಮ್್ಸ ಸ್ವರ್ಣ ಪದಕ ವಿಜೇತ ಭಜರಂಗ್ ಪೂನಿಯಾ, ತಮಗೆ ಖೇಲ್​ರತ್ನ ಪ್ರಶಸ್ತಿ ಸಿಗದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ಕ್ರೀಡಾ ಸಚಿವ ರಾಜ್ಯವರ್ಧನ್ ರಾಥೋಡ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಿದ್ದಾರೆ. ಇಲ್ಲದಿದ್ದರೆ ಸರ್ಕಾರದ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರುವ ಬೆದರಿಕೆ ಒಡ್ಡಿದ್ದಾರೆ.
ಅಥ್ಲೀಟ್​ಗಳ ಗುರುವಿಗೆ ಸಂದ ಗೌರವ
ಬೆಂಗಳೂರು: ಕಳೆದ 46 ವರ್ಷಗಳಿಂದ ಪಟ್ಟ ಶ್ರಮ. ನೂರಾರು ಅಥ್ಲೀಟ್​ಗಳನ್ನು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆಸಿದ್ದು ಸಾರ್ಥಕವಾಯಿತು ಎಂದು ದ್ರೋಣಾಚಾರ್ಯ ಪ್ರಶಸ್ತಿ ಪುರಸ್ಕೃತ ವಿಆರ್ ಬೀಡು ಹೇಳಿದ್ದಾರೆ. ಕೇಂದ್ರ ಸರ್ಕಾರದಿಂದ ಕೋಚ್​ಗಳಿಗೆ ನೀಡಲಾಗುವ ಅತ್ಯುನ್ನತ ಪ್ರಶಸ್ತಿಗೆ ಭಾಜರಾದ ಕುರಿತು ‘ವಿಜಯವಾಣಿ’ಯೊಂದಿಗೆ ಸಂತೋಷ ಹಂಚಿಕೊಂಡ ಬೀಡು, ಪ್ರಶಸ್ತಿ ದಕ್ಕಿರುವುದು ಸಹಜವಾಗಿ ಖುಷಿ ನೀಡಿದೆ. ಅಶ್ವಿನಿ ನಾಚಪ್ಪ, ಉದಯ್ ಕೆ ಪ್ರಭು, ರೀತ್ ಅಬ್ರಾಹಂ, ಜಿಜಿ ಪ್ರಮೀಳಾ, ಎಂಕೆ ಆಶಾ ಸೇರಿದಂತೆ ಅದೆಷ್ಟೋ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಅಥ್ಲೀಟ್​ಗಳಿಗೆ ಮಾರ್ಗದರ್ಶನ ನೀಡಿದ್ದೆ. ಸಣ್ಣ ಮಟ್ಟದ ಕೂಟದಿಂದ ಹಿಡಿದು ಒಲಿಂಪಿಕ್ಸ್ ವರೆಗೂ ಅಥ್ಲೀಟ್​ಗಳನ್ನು ತಯಾರು ಮಾಡಿದ್ದೇನೆ ಎಂದು 71 ವರ್ಷದ ಕೋಚ್ ಹೇಳಿದರು. ರಾಷ್ಟ್ರೀಯ ಕ್ರೀಡಾ ಸಂಸ್ಥೆ (ಎನ್​ಐಎಸ್) ಮೂಲಕ 1972ರಲ್ಲಿ ಕೋಚಿಂಗ್ ವೃತ್ತಿ ಆರಂಭಿಸಿದ ಬೀಡು, ಮೂಲತಃ ಉಡುಪಿ ಜಿಲ್ಲೆಯವರು. 1989ರಲ್ಲಿ ನವದೆಹಲಿಯಲ್ಲಿ ನಡೆದ ಏಷ್ಯನ್ ಟ್ರಾ್ಯಕ್ ಮತ್ತು ಫೀಲ್ಡ್ ಚಾಂಪಿಯನ್​ಷಿಪ್​ನಲ್ಲಿ ಭಾರತದ ಲಾಂಗ್​ಜಂಪ್ ಕೋಚ್ ಆಗಿದ್ದರು. 1991ರಲ್ಲಿ ರಾಷ್ಟ್ರೀಯ ಕೋಚ್ ಆಗಿದ್ದರು. ಬೀಡು ದ್ರೋಣಾಚಾರ್ಯ ಪ್ರಶಸ್ತಿ ಪಡೆಯುತ್ತಿರುವ ಕರ್ನಾಟಕದ 2ನೇ ಅಥ್ಲೆಟಿಕ್ಸ್ ಕೋಚ್ ಎನಿಸಿಕೊಂಡಿದ್ದಾರೆ. 2014ರಲ್ಲಿ ಎನ್ ಲಿಂಗಪ್ಪ ಈ ಪ್ರಶಸ್ತಿ ಪಡೆದಿದ್ದರು.
ವಿಜೇಂದರ್​ಗೆ ತರಬೇತಿ ನೀಡಿದ್ದ ಕುಟ್ಟಪ್ಪ!
2008ರ ಒಲಿಂಪಿಕ್ ಪದಕ ವಿಜೇತ ವಿಜೇಂದರ್ ಸಿಂಗ್, ಶಿವ ಥಾಪ ಸೇರಿದಂತೆ ಹಲವು ಬಾಕ್ಸರ್​ಗಳಿಗೆ ಮಾರ್ಗದರ್ಶನ ನೀಡಿರುವ ಮೈಸೂರು ಮೂಲದ 39 ವರ್ಷದ ಸಿಎ ಕುಟ್ಟಪ್ಪ, ರಾಷ್ಟ್ರೀಯ ಕ್ರೀಡಾ ಸಂಸ್ಥೆಯಲ್ಲಿ 2006ರಲ್ಲಿ ಕೋಚಿಂಗ್ ಡಿಪ್ಲೊಮಾ ಪೂರೈಸಿದ್ದರು. ಬಳಿಕ ಆರ್ವಿು ಸ್ಪೋರ್ಟ್ಸ್ ಸಂಸ್ಥೆಯಲ್ಲಿ ಕೋಚ್ ಆಗಿ ನಿಯೋಜನೆಗೊಂಡರು. ಪ್ರಸ್ತುತ ರಾಷ್ಟ್ರೀಯ ತಂಡದ ಸಹಾಯಕ ಕೋಚ್ ಹಾಗೂ ಕೋಚ್ ಸ್ಥಾನವನ್ನು  ವಹಿಸಿಕೊಂಡಿದ್ದಾರೆ. ಇಷ್ಟು ಚಿಕ್ಕ ವಯಸ್ಸಿನಲ್ಲೇ ಇಂಥ ದೊಡ್ಡ ಪ್ರಶಸ್ತಿ ನಿರೀಕ್ಷಿಸಿರಲಿಲ್ಲ ಎನ್ನುತ್ತಾರೆ ಆರ್ವಿುಯಲ್ಲಿ ಸುಬೇದಾರ್ ಆಗಿರುವ ಕುಟ್ಟಪ್ಪ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....