ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಸ್ತ್ರೀಶಕ್ತಿಗೆ ಗೌರಿ ಹಬ್ಬದ ಗಿಫ್ಟ್,

ನವದೆಹಲಿ: ದೇಶದ ಲಕ್ಷಾಂತರ ಅಂಗನವಾಡಿ, ಆಶಾ ಕಾರ್ಯಕರ್ತೆಯರು ಹಾಗೂ ಶುಶ್ರೂಷಕಿಯರಿಗೆ ಪ್ರಧಾನಿ ನರೇಂದ್ರ ಮೋದಿ ಗೌರಿ, ಗಣೇಶ ಹಬ್ಬದ ಭರ್ಜರಿ ಉಡುಗೊರೆ ಪ್ರಕಟಿಸಿದ್ದಾರೆ. ಮುಂದಿನ ತಿಂಗಳಿನಿಂದಲೇ ಜಾರಿ ಆಗುವಂತೆ ಗೌರವ ಧನ ಹೆಚ್ಚಳದ ಜತೆಗೆ ಆಶಾ ಕಾರ್ಯಕರ್ತೆಯರು, ಶುಶ್ರೂಷಕಿಯರನ್ನು ಸಾಮಾಜಿಕ ಭದ್ರತಾ ಯೋಜನೆ ಆದ ಪ್ರಧಾನಮಂತ್ರಿ ಜೀವನ ಜ್ಯೋತಿ ವಿಮಾ ಯೋಜನೆ ಹಾಗೂ ಸುರಕ್ಷಾ ವಿಮೆ ಯೋಜನೆ ವ್ಯಾಪ್ತಿಗೆ ತರುವ ನಿರ್ಧಾರ ಕೈಗೊಂಡಿದ್ದಾರೆ.
ಅ.1ರಿಂದ ಅನ್ವಯ: ಸದ್ಯ ಕರ್ನಾಟಕ ಸೇರಿ
ಬಹುತೇಕ ರಾಜ್ಯಗಳಲ್ಲಿ ಕೇಂದ್ರ ಸರ್ಕಾರದ ಗೌರವಧನ ಜತೆಗೆ ರಾಜ್ಯ ಸರ್ಕಾರ ಸಹಾಯಧನ ಸೇರಿಸಿ ಕೊಡುತ್ತದೆ. ವೇತನ ಏರಿಕೆ ಅ.1ರಿಂದ ಅನ್ವಯವಾಗಲಿದೆ. ಮಂಗಳವಾರ ದೇಶಾದ್ಯಂತ ವಿವಿಧ ಕೇಂದ್ರಗಳಲ್ಲಿ ನೆರೆದಿದ್ದ ಲಕ್ಷಾಂತರ ಕಾರ್ಯಕರ್ತೆಯರ ಜತೆಗಿನ ವಿಡಿಯೋ ಸಂವಾದದಲ್ಲಿ ಪ್ರಧಾನಿ ಮೋದಿ ಈ ಘೋಷಣೆ ಹೊರಡಿಸಿದರು.
ಪೋಷಕಾಂಶ ಮಾಸಿಕ ಅಭಿಯಾನ
ಸೆಪ್ಟೆಂಬರ್​ನಲ್ಲಿ ಪೋಷಕಾಂಶ ಮಾಸಿಕ ಅಭಿಯಾನ ಕೈಗೊಳ್ಳಲಾಗಿದ್ದು, ಆಶಾ, ಅಂಗನವಾಡಿ ಹಾಗೂ ಎಎನ್​ಎಂ ಕಾರ್ಯಕರ್ತೆಯರು ದೇಶದ ಪ್ರತಿಯೊಂದು ಬಡ ಜನರ ಮನೆಗೆ ಸರ್ಕಾರಿ ಯೋಜನೆ ಮುಟ್ಟುವಂತೆ ಕೆಲಸ ಮಾಡಬೇಕು. ವಿಶ್ವಸಂಸ್ಥೆಯೇ ಹೇಳಿದಂತೆ ಸ್ವಚ್ಛತಾ ಅಭಿಯಾನದಿಂದ 3 ಲಕ್ಷಕ್ಕೂ ಅಧಿಕ ಜನರ ಜೀವ ಉಳಿಯುತ್ತಿದೆ. ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸಬೇಕು ಎಂದು ಮೋದಿ ಕರೆ ನೀಡಿದರು.
ಸೆ.23ಕ್ಕೆ ಆಯುಷ್ಮಾನ್ ಉದ್ಘಾಟನೆ
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಆಯುಷ್ಮಾನ್ ಭಾರತ ಸೆ.23ರಂದು ಜಾರ್ಖಂಡ್​ನಲ್ಲಿ ಉದ್ಘಾಟನೆಯಾಗಲಿದೆ. ಯೋಜನೆಯ ಫಲಾನುಭವಿಗಳನ್ನು ಈಗಾಗಲೇ ಗುರುತಿಸಲಾಗಿದೆ. ಆದಾಗ್ಯೂ ಯೋಜನೆ ನೋಂದಣಿಗಾಗಿ ಆಶಾ, ಅಂಗನವಾಡಿ ಹಾಗೂ ಎಎನ್​ಎಂ ಕಾರ್ಯಕರ್ತೆಯರು ಸಹಕರಿಸಬೇಕು ಎಂದು ಪ್ರಧಾನಿ ಮನವಿ ಮಾಡಿದ್ದಾರೆ.
ಸಾಮಾಜಿಕ ಭದ್ರತೆ
ವೇತನ ಏರಿಕೆ ಜತೆಗೆ ಆಶಾ ಕಾರ್ಯಕರ್ತೆಯರು ಹಾಗೂ ಶುಶ್ರೂಷಕಿಯರು ಇನ್ನು ಸಾಮಾಜಿಕ ಭದ್ರತಾ ಯೋಜನೆ ವ್ಯಾಪ್ತಿಗೆ ಬರಲಿದ್ದಾರೆ. ಪ್ರಧಾನಮಂತ್ರಿ ಜೀವನ ಜ್ಯೋತಿ ವಿಮಾ ಯೋಜನೆ ಹಾಗೂ ಪ್ರಧಾನಮಂತ್ರಿ ಸುರಕ್ಷಾ ವಿಮಾ ಯೋಜನೆ ಇವರಿಗೂ ಅನ್ವಯವಾಗಲಿದೆ. ಇದಕ್ಕಾಗಿ ಯಾವುದೇ ಪ್ರೀಮಿಯಂ ಕಟ್ಟಬೇಕಿಲ್ಲ. ಸರ್ಕಾರವೇ ಭರಿಸಲಿದೆ. ಪ್ರತಿಯಾಗಿ ಯಾವುದೇ ಅಹಿತಕರ ಘಟನೆ ನಡೆದರೆ ಸರ್ಕಾರದಿಂದ 4 ಲಕ್ಷ ರೂ.ಗಳವರೆಗೆ ವಿಮಾ ಹಣ ದೊರೆಯಲಿದೆ.
ಪ್ರೋತ್ಸಾಹ ಧನ ದ್ವಿಗುಣ
ಸದ್ಯ ಆಶಾ ಕಾರ್ಯಕರ್ತೆಯರಿಗೆ ವಿವಿಧ ಯೋಜನೆಗಳ ಮೂಲಕ ಕನಿಷ್ಠ 1 ಸಾವಿರ ರೂ. ಪ್ರೋತ್ಸಾಹಧನ ಸಿಗುತ್ತಿದೆ. ಇದೀಗ ಈ ಹಣವನ್ನು ದ್ವಿಗುಣಗೊಳಿಸಿರುವುದಾಗಿ ಪ್ರಧಾನಿ ತಿಳಿಸಿದ್ದಾರೆ. ಹಾಗೆಯೇ ಐಸಿಡಿಎಸ್-ಐಸಿಎಸ್ ತಂತ್ರಾಂಶ ಬಳಸುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕರಿಗೆ 250-500 ರೂ.ಗಳವರೆಗೆ ಪ್ರೋತ್ಸಾಹಧನ ನೀಡಲು ನಿರ್ಧರಿಸಲಾಗಿದೆ.
ರಾಜ್ಯಕ್ಕೂ ಆಶಾಕಿರಣ
ಬೆಂಗಳೂರು: ಕೇಂದ್ರ ಸರ್ಕಾರದ ವೇತನ ಹೆಚ್ಚಳ ಹಾಗೂ ಉಚಿತ ವಿಮೆ ಸೌಲಭ್ಯ ರಾಜ್ಯಾದ್ಯಂತ 1.63 ಲಕ್ಷ ಕಾರ್ಯಕರ್ತೆಯರಿಗೆ ಸಿಗಲಿದೆ. ರಾಜ್ಯದಲ್ಲಿ 1.24 ಲಕ್ಷ ಅಂಗನವಾಡಿ ನೌಕರರಿದ್ದು, 39 ಸಾವಿರ ಆಶಾ ಕಾರ್ಯಕರ್ತೆಯರಿದ್ದಾರೆ. ಆಶಾ ಕಾರ್ಯಕರ್ತೆಯರ ನಿರಂತರ ಹೋರಾಟದ ನಂತರ 2017ರಲ್ಲಿ ರಾಜ್ಯ ಸರ್ಕಾರ ಗೌರವಧನವನ್ನು 3500 ರೂ.ಗೆ ಹೆಚ್ಚಿಸಿದೆ. ಆದರೆ ಕಾರ್ಯಕರ್ತೆಯರು 6 ಸಾವಿರ ರೂ.ಗೆ ಹೆಚ್ಚಿಸುವಂತೆ ಬೇಡಿಕೆ ಇಟ್ಟಿದ್ದಾರೆ. 12,500 ರೂ.ಗಳ ಕನಿಷ್ಠ ವೇತನ ನೀಡಬೇಕೆಂಬ ನಿಯಮವಿದೆ.
ಅದರಂತೆ ರಾಜ್ಯ ಸರ್ಕಾರ 6 ಸಾವಿರ ರೂ.ಗಳ ಗೌರವಧನ ನೀಡಿದಲ್ಲಿ, ಕೇಂದ್ರದಿಂದ ಬರುವ ಪ್ರೋತ್ಸಾಹಧನವನ್ನು ಹೆಚ್ಚಿಸುವುದಕ್ಕೆ ಬೇಡಿಕೆ ಇಡುವುದಾಗಿ ಕಾರ್ಯಕರ್ತೆಯರು ಹೇಳಿದ್ದರು. ಇದಲ್ಲದೇ ರಾಜ್ಯ ಸರ್ಕಾರ ಸುವರ್ಣ ಆರೋಗ್ಯ ಸುರಕ್ಷತಾ ಟ್ರಸ್ಟ್ ಅಡಿಯಲ್ಲಿ ಆರೋಗ್ಯ ಕಾರ್ಡ್ ವಿತರಿಸುವ ಭರವಸೆಯನ್ನು ನೀಡಿತ್ತು. ಅದು ಕೂಡ ಭರವಸೆ ಆಗೇ ಉಳಿದಿದೆ. ಅಂಗನವಾಡಿ ನೌಕಕರಿಗೆ ಕ್ಷೇಮಾಭಿವೃದ್ಧಿ ಸ್ಥಾಪಿಸಲಾಗಿದ್ದು, ಅದೇ ಮಾದರಿಯನ್ನು ಆಶಾ ಕಾರ್ಯಕತೆರ್ಯರಿಗೂ ಒದಗಿಸಬೇಕೆಂಬ ಕೂಗು ಕೇಳಿ ಬಂದಿತ್ತು. ಅದರ ಮೂಲಕ ಅಪಘಾತಕ್ಕೊಳಗಾಗುವ ಕಾರ್ಯಕರ್ತೆಯರಿಗೆ 2 ಲಕ್ಷ ರೂ.ಗಳ ಮೊತ್ತವನ್ನು ದೊರಕಿಸುವಂತೆ ನಿಧಿ ಸ್ಥಾಪಿಸಬೇಕೆಂದು ಒತ್ತಾಯಿಸಿದರು. ಇದೀಗ ಕೇಂದ್ರ ಸರ್ಕಾರದ ನಿರ್ಧಾರದಿಂದ ಬಹುತೇಕ ಸೌಲಭ್ಯಗಳು ದೊರೆಯುವ ನಿರೀಕ್ಷೆಯಿದೆ.
ಕೇಂದ್ರ ಸರ್ಕಾರ ಅಂಗನವಾಡಿ ನೌಕರರಿಗೆ 7ನೇ ವೇತನ ಆಯೋಗದ ಪ್ರಕಾರ ಕನಿಷ್ಠ ವೇತನವನ್ನು ಹೆಚ್ಚಿಸಬೇಕಿದೆ. ಅದರಂತೆ ಕೇಂದ್ರ ಸರ್ಕಾರದಿಂದ ಕನಿಷ್ಠ 10 ಸಾವಿರ ರೂ. ವೇತನ ದೊರೆಯಬೇಕು. ಆದರೆ ಸರ್ಕಾರ ಅಲ್ಪ ಮೊತ್ತವನ್ನಷ್ಟೇ ಹೆಚ್ಚಿಸಿದೆ. ನಮ್ಮ ಬೇಡಿಕೆಗಳಿಗೆ ಇನ್ನೂ ಸ್ಪಂದನೆ ದೊರೆಯಬೇಕಿದೆ.
|ವರಲಕ್ಷ್ಮೀ, ಸಿಐಟಿಯು ರಾಜಾಧ್ಯಕ್ಷೆ
ಕೇಂದ್ರ ಸರ್ಕಾರದ ಈ ನಿರ್ಧಾರ ಖುಷಿ ನೀಡಿದೆ. ಎಲ್ಲ ಸೌಲಭ್ಯಗಳನ್ನು ಒದಗಿಸುತ್ತಿರುವುದು ಸಂತಸದ ವಿಚಾರ. ಆದರೆ ಸದ್ಯಕ್ಕೆ ಪ್ರೋತ್ಸಾಹಧನದ ಮೊತ್ತವು 1,500 ರೂ.ಗಳಿದ್ದು, ಈ ಮೊತ್ತವನ್ನು ಕನಿಷ್ಠ 6 ಸಾವಿರಕ್ಕೆ ಹೆಚ್ಚಿಸಬೇಕು. ಈ ನಿಟ್ಟಿನಲ್ಲಿಯೂ ಕೇಂದ್ರ ಸರ್ಕಾರ ತೀರ್ಮಾನ ಕೈಗೊಳ್ಳಬೇಕು.
| ರಮಾ ಸಲಹೆಗಾರರು, ಆಶಾ ಸಂಘ(ಎಐಯುಟಿಯುಸಿ)

ಮಲ್ಲಮ್ಮನ ಜತೆ ಮೋದಿ ಮಾತು
 ಪ್ರಧಾನಿ ನರೇಂದ್ರ ಮೋದಿ ಯಾದಗಿರಿ ಜಿಲ್ಲೆ ಕಡೇಚೂರಿನ ಅಂಗನವಾಡಿ ಕೇಂದ್ರದ ಮೇಲ್ವಿಚಾರಕಿ ಮಲ್ಲಮ್ಮ ಜತೆ ವಿಡಿಯೋ ಕಾನ್ಪರೆನ್ಸ್​ನಲ್ಲಿ ಮಾತನಾಡಿದರು. ‘ಯಾದಗಿರಿ ಜಿಲ್ಲೆಯ ಜನತೆಗೆ ನನ್ನ ನಮಸ್ಕಾರಗಳು… ನಿಮಗೆ ನನ್ನ ಹಾರ್ದಿಕ ಶುಭಾಶಯಗಳು’ ಎಂದು ಕನ್ನಡದಲ್ಲೇ ಮಾತು ಆರಂಭಿಸಿದ ಮೋದಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರ ಸೇವೆಗೆ ಶ್ಲಾಘನೆ ವ್ಯಕ್ತಪಡಿಸಿದರು. ‘ದೇಶದ ಪ್ರಧಾನಿ ಜತೆ ಮಾತನಾಡಲು ಅವಕಾಶ ಸಿಕ್ಕಿದ್ದು ನನ್ನ ಸುದೈವ’ ಎಂದು ಮಲ್ಲಮ್ಮ ಹರ್ಷ ವ್ಯಕ್ತಪಡಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....