ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಭಾರತ, ಚೀನಾಗೆ ಟ್ರಂಪ್ ಆಘಾತ,

ನ್ಯೂಯಾರ್ಕ್: ಎಚ್1ಬಿ ವೀಸಾ ಬಳಿಕ ಅಮೆರಿಕ ಸರ್ಕಾರ ಭಾರತಕ್ಕೆ ಸಬ್ಸಿಡಿ ಆಘಾತ ನೀಡಲು ಅಣಿಯಾಗಿದೆ. ‘ಭಾರತ, ಚೀನಾ ಅಭಿವೃದ್ಧಿಶೀಲ ರಾಷ್ಟ್ರಗಳಾಗಿ ಹೊರಹೊಮ್ಮುತ್ತಿವೆ. ಈ ವಿಚಾರವನ್ನು ಬಹಿರಂಗವಾಗಿ ಹೇಳಿ ಕೊಳ್ಳುತ್ತಲೇ ಅಮೆರಿಕದಿಂದ ಸಬ್ಸಿಡಿಯನ್ನೂ ಪಡೆಯುತ್ತಿವೆ. ಅವರಿಗೆ ಹಣ ನೀಡುತ್ತಿರುವ ನಾವು ಮೂರ್ಖರಲ್ಲವೇ? ಅಭಿವೃದ್ಧಿ ಹೊಂದಿರುವ ಅಮೆರಿಕವನ್ನು ಇನ್ನಷ್ಟು ಅಭಿವೃದ್ಧಿ ಪಡಿಸುವ ಅಗತ್ಯವಿದೆ. ಆರ್ಥಿಕ ಪರಿಸ್ಥಿತಿಯನ್ನು ಉತ್ತಮಪಡಿಸಿಕೊಳ್ಳಬೇಕೆಂಬ ಉದ್ದೇಶದಿಂದ ಭಾರತ, ಚೀನಾಗೆ ನೀಡುತ್ತಿದ್ದ ಸಬ್ಸಿಡಿ ನಿಲ್ಲಿಸಬಾರದೇಕೆ’ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಶ್ನಿಸಿದ್ದಾರೆ.
ಭಾರತಕ್ಕೆ ಅಮೆರಿಕ ರಿಯಾಯಿತಿ ಕಟ್?

 ಆರ್ಥಿಕ ಬೆಳವಣಿಗೆ ಕಾಣುತ್ತಿರುವ ಭಾರತ ಮತ್ತು ಚೀನಾಕ್ಕೆ ಸಬ್ಸಿಡಿ ಕಡಿತ ಮಾಡುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ ಹೇಳಿದ್ದಾರೆ.
‘ವಿಶ್ವದ ಇತರ ರಾಷ್ಟ್ರಗಳಿಗಿಂತ ಭಾರತ ಮತ್ತು ಚೀನಾ ವೇಗವಾಗಿ ಪ್ರಗತಿ ಹೊಂದುತ್ತಿವೆ. ಆದರೂ ಈ ರಾಷ್ಟ್ರಗಳಿಗೆ ನಾವು ಹಣ ನೀಡುತ್ತಿದ್ದೇವೆ. ಇದು ಮೂರ್ಖತನವಲ್ಲವೆ? ಈಗ ಇದನ್ನು ಸ್ಥಗಿತಗೊಳಿಸುತ್ತೇವೆ’ ಎಂದು ಅಮೆರಿಕದ ಉತ್ತರ ಡಕೋಟದ ಫಾರ್ಗೆ ನಗರದಲ್ಲಿ ನಡೆದ ದೇಣಿಗೆ ಸಂಗ್ರಹ ಕಾರ್ಯಕ್ರಮದಲ್ಲಿ ಟ್ರಂಪ್ ತಿಳಿಸಿದ್ದಾರೆ.
ಅನೇಕ ವರ್ಷಗಳಿಂದ ನಾವು ಈ ದೇಶಗಳನ್ನು ಪೋಷಣೆ ಮಾಡುತ್ತಿದ್ದೇವೆ. ನಮ್ಮ ನೆರವಿನಿಂದ ಈ ರಾಷ್ಟ್ರಗಳು ಭವಿಷ್ಯ ರೂಪಿಸಿಕೊಂಡಿವೆ. ಇನ್ನು ಇದಕ್ಕೆ ಅವಕಾಶ ಇಲ್ಲ ಎಂದರು.
ವಿಶ್ವ ವಾಣಿಜ್ಯ ಸಂಸ್ಥೆಯನ್ನು (ಡಬ್ಲ್ಯೂಟಿಒ) ತರಾಟೆಗೆ ತೆಗೆದು ಕೊಂಡ ಟ್ರಂಪ್, ಈ ಸಂಸ್ಥೆ ಈಗ ಅತ್ಯಂತ ಹೀನಾಯ ಹಂತಕ್ಕೆ ಬಂದು ತಲುಪಿದೆ. ಚೀನಾವನ್ನು ಆರ್ಥಿಕವಾಗಿ ಸಶಕ್ತಗೊಳ್ಳಲು ಬಿಟ್ಟಿದ್ದೇ ಇದಕ್ಕೆ ಕಾರಣ ಎಂದು ಆರೋಪಿಸಿದರು.
ವಿಶ್ವದಲ್ಲಿ ಅತಿ ಹೆಚ್ಚು ಮಿಲಿಟರಿ ವೆಚ್ಚ ಮಾಡುವ ದೇಶ ಅಮೆರಿಕ. ಬೇರೆ ದೇಶಗಳನ್ನು ರಕ್ಷಣೆ ಮಾಡುವುದಕ್ಕಾಗಿಯೇ ಬಹುತೇಕ ಖರ್ಚು ಮಾಡುತ್ತಿದ್ದೇವೆ. ನಮ್ಮನ್ನು ಯಾರು ಇಷ್ಟ ಪಡುವುದಿಲ್ಲವೋ ಅಂತಹ ದೇಶಗಳಿಗೂ ರಕ್ಷಣೆ ನೀಡುತ್ತಿದ್ದೇವೆ ಎಂದು ಪರೋಕ್ಷವಾಗಿ ಚೀನಾವನ್ನು ಟೀಕಿಸಿದರು.
ಚೀನಾ ವಿರುದ್ಧ ಮತ್ತೆ ವಾಣಿಜ್ಯ ಸಮರ
ಚೀನಾ ವಿರುದ್ಧ ವಾಣಿಜ್ಯ ಸಮರವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಹೇಳಿರುವ ಡೊನಾಲ್ಡ್ ಟ್ರಂಪ್, ಚೀನಾದಿಂದ ಆಮದಾಗುವ ಬಹುತೇಕ ಎಲ್ಲ ಸರಕಿನ ಮೇಲೆ ಸುಂಕ ಹೇರುವುದಾಗಿ ಎಚ್ಚರಿಕೆ ನೀಡಿದ್ದಾರೆ. -ಠಿ; 14.42 ಲಕ್ಷ ಕೋಟಿ (200 ಬಿಲಿಯನ್ ಡಾಲರ್) ಮೊತ್ತದ ಕ್ಯಾಮರಾ, ರೆಕಾರ್ಡಿಂಗ್ ಸಾಧನಗಳು, ಹ್ಯಾಂಡ್​ಬ್ಯಾಗ್, ಟೈರ್, ವಾಕ್ಯೂಮ್ ಕ್ಲೀನರ್, ಸೆಲ್ ಫೋನ್ ಇನ್ನಿತರ ಸರಕುಗಳ ಮೇಲೆ ಪ್ರಸ್ತುತ ಶೇ. 10 ತೆರಿಗೆ ಇದ್ದು, ಇದನ್ನು ಶೇ. 25ಕ್ಕೆ ಏರಿಸುವುದಾಗಿ ಟ್ರಂಪ್ ಹೇಳಿದ್ದಾರೆ.ಚ್ಡ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....