ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಚೀನಾ, ಪಾಕ್​ಗೆ ಹಿನ್ನಡೆ ಭಾರತಕ್ಕೆ ಮುನ್ನಡೆ,

ನವದೆಹಲಿ: ಚೀನಾದ ಮಹತ್ವಾಕಾಂಕ್ಷೆಯ ಮೂಲಸೌಕರ್ಯ ಯೋಜನೆ ಒನ್ ಬೆಲ್ಟ್ ಒನ್ ರೋಡ್ (ಒಬಿಒಆರ್) ವಿರುದ್ಧ ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಕ್ಷೇಪಣೆಗಳು ಕೇಳತೊಡಗಿವೆ. ಯೋಜನೆ ವ್ಯಾಪ್ತಿಯಲ್ಲಿ ಬರುವ ರಾಷ್ಟ್ರಗಳಿಗೆ ಹೆಚ್ಚಿನ ಬಡ್ಡಿದರದಲ್ಲಿ ಅಪಾರ ಮೊತ್ತದ ಸಾಲ ನೀಡುವ ಮೂಲಕ, ಆ ದೇಶವನ್ನು ಸಾಲದ ಸುಳಿಗೆ ಸಿಲುಕಿಸಲು ಚೀನಾ ಮುಂದಾಗಿದೆ ಎಂಬ ಟೀಕೆಗಳು ವ್ಯಾಪಕವಾಗಿವೆ.
ಯೋಜನೆ ಆರಂಭವಾದಾಗಿನಿಂದಲೂ ಭಾರತ ಇದನ್ನು ವಿರೋಧಿಸುತ್ತ ಬಂದಿದೆ. ಈಗ ಜಾಗತಿಕ ಮಟ್ಟದಲ್ಲಿ ಒಬಿಒಆರ್ ವಿರುದ್ಧ ಆಕ್ಷೇಪಣೆ ಕೇಳಿಬರುತ್ತಿರುವುದು ಭಾರತಕ್ಕೆ ಪರೋಕ್ಷವಾಗಿ ಅನುಕೂಲವಾಗಲಿದೆ.
2013ರಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್​ಪಿಂಗ್ ಈ ಯೋಜನೆಯನ್ನು ಘೋಷಿಸಿದ್ದರು. ನ್ಯೂ ಸಿಲ್ಕ್ ರೋಡ್ ಎಂದೂ ಈ ಯೋಜನೆಯನ್ನು ಕರೆಯಲಾಗುತ್ತಿದೆ. ವಿಶ್ವದಾದ್ಯಂತ ಸಂಪರ್ಕ ಕಲ್ಪಿಸಲು ಹೊಸ ರಸ್ತೆ, ರೈಲು, ಬಂದರುಗಳನ್ನು ನಿರ್ವಿುಸುವುದು ಈ ಯೋಜನೆಯ ಉದ್ದೇಶವಾಗಿತ್ತು. ಈ ಯೋಜನೆಯಲ್ಲಿ ಭಾಗಿಯಾಗುವ ದೇಶಗಳಿಗೆ ಹಲವು ಲಕ್ಷ ಕೋಟಿ ರೂಪಾಯಿಯನ್ನು ಸಾಲ ರೂಪದಲ್ಲಿ ನೀಡುವುದಾಗಿ ಚೀನಾ ಹೇಳಿತ್ತು.
ಯೋಜನೆ ಘೋಷಣೆಯಾಗಿ ಐದು ವರ್ಷ ಪೂರ್ಣಗೊಳ್ಳುತ್ತಿರುವ ಬೆನ್ನಲ್ಲೇ ಒಬಿಒಆರ್​ಗೆ ಆಕ್ಷೇಪಣೆಗಳು ಹೆಚ್ಚಾಗುತ್ತಿವೆ. ಅತ್ಯಧಿಕ ಬಡ್ಡಿದರದಲ್ಲಿ ಚೀನಾ ನೀಡುವ ದೀರ್ಘಾವಧಿ ಸಾಲವನ್ನು ತೀರಿಸಲು ಸಣ್ಣ ರಾಷ್ಟ್ರಗಳಿಗೆ ಸಾಧ್ಯವೇ ಆಗುವುದಿಲ್ಲ. ಹೀಗಾಗಿ ಇಂಥ ರಾಷ್ಟ್ರಗಳು ಭವಿಷ್ಯದಲ್ಲಿ ಚೀನಾದ ಗುಲಾಮನಾಗುವ ಸ್ಥಿತಿ ನಿರ್ವಣವಾಗಲಿದೆ ಎಂದು ಆರ್ಥಿಕ ತಜ್ಞರು, ಹಲವು ರಾಷ್ಟ್ರಗಳ ನಾಯಕರು ಬಹಿರಂಗವಾಗಿ ಹೇಳಲಾರಂಭಿಸಿದ್ದಾರೆ.ಇಂಥ ಆರೋಪಗಳನ್ನು ಚೀನಾ ಅಧ್ಯಕ್ಷ ಜಿನ್​ಪಿಂಗ್ ನಿರಾಕರಿಸುತ್ತ ಬಂದಿದ್ದಾರೆ. ಯೋಜನೆಗೆ ಭಾರಿ ಮೊತ್ತ ವೆಚ್ಚ ಮಾಡಬೇಕಾಗುತ್ತದೆ. ಆದರೆ ಇದರಿಂದ ಅಷ್ಟೇ ಪ್ರಮಾಣದ ಆದಾಯವೂ ಬರಲಿದೆ ಎಂದು ಇತ್ತೀಚೆಗೆ ಸ್ಪಷ್ಟೀಕರಣ ನೀಡುವ ಮೂಲಕ ವಿವಾದವನ್ನು ತಿಳಿಗೊಳಿಸಲು ಯತ್ನಿಸಿದ್ದಾರೆ.
ಮಲೇಷ್ಯಾ ಬಚಾವ್
ಚೀನಾ ಜತೆ ಆಪ್ತವಾಗಿದ್ದ ಮಲೇಷ್ಯಾ ಇದೇ ಮೊದಲ ಬಾರಿಗೆ ಶಾಕ್ ನೀಡಿದೆ. ಇತ್ತೀಚೆಗೆ ಚೀನಾಕ್ಕೆ ಭೇಟಿ ನೀಡಿದ್ದ ಮಲೇಷ್ಯಾ ಪ್ರಧಾನಿ ಮಹತೀರ್ ಮಹಮ್ಮದ್, ಚೀನಾ ಬೆಂಬಲಿತ ಮೂರು ಯೋಜನೆಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದ್ದಾರೆ. -ಠಿ; 1.4 ಲಕ್ಷ ಕೋಟಿ ಮೊತ್ತದ ರೈಲ್ವೆ ಯೋಜನೆ ಕೂಡ ಇದರಲ್ಲಿ ಸೇರಿದೆ. ಈ ಮೂಲಕ ಚೀನಾದ ಸಾಲದ ಸುಳಿಯಿಂದ ಅವರು ಜಾರಿಕೊಂಡಿದ್ದಾರೆ. ಜಾಗತಿಕ ಸಂಪರ್ಕ ಸಾಧಿಸಲು ಹಾಗೂ ದಕ್ಷಿಣ ಚೀನಾ ಸಮುದ್ರದಲ್ಲಿ ಪ್ರಾಬಲ್ಯ ಸಾಧಿಸಲು ಮಹತ್ವದ ರಾಷ್ಟ್ರವಾಗಿರುವ ಮಲೇಷ್ಯಾ ಯೋಜನೆಯಿಂದ ಹಿಂದೆ ಸರಿದಿರುವುದು ಚೀನಾಕ್ಕೆ ದೊಡ್ಡ ಹಿನ್ನಡೆಯಾಗಿದೆ.
ಪಾಕ್​ನಲ್ಲೂ ತಳಮಳ
ಪಾಕಿಸ್ತಾನ -ಚೀನಾ ಆರ್ಥಿಕ ಕಾರಿಡಾರ್ ಯೋಜನೆಯಿಂದಾಗಿ ಈಗಾಗಲೇ ಪಾಕ್ ಸಾಲದ ಸುಳಿಯಲ್ಲಿ ಸಿಲುಕಿದೆ. ಈ ಸಾಲವನ್ನು ಮರುಪಾವತಿ ಮಾಡುವುದು ಸವಾಲಿನ ಸಂಗತಿಯಾಗಿದೆ. ಇದಲ್ಲದೇ ಪಾಕಿಸ್ತಾನದ ಇನ್ನೂ ಹಲವು ಯೋಜನೆಗಳಿಗೆ ಚೀನಾ ಆರ್ಥಿಕ ನೆರವು ನೀಡಿದೆ. ಪಾಕಿಸ್ತಾನದ ನೂತನ ಪ್ರಧಾನಿ ಇಮ್ರಾನ್ ಖಾನ್​ಗೆ ಇದು ತಲೆನೋವು ಉಂಟುಮಾಡಿದೆ. ಕಾರಿಡಾರ್ ಯೋಜನೆ ಇನ್ನಷ್ಟು ಪಾರದರ್ಶಕವಾಗಿ ನಡೆಯಬೇಕಿದೆ ಎಂದು ಅವರು ಇತ್ತೀಚೆಗೆ ಆತಂಕ ಹೊರಹಾಕಿದ್ದಾರೆ. ಈ ಯೋಜನೆಯಲ್ಲಿ ಹೆಚ್ಚಿನ ವೆಚ್ಚ ಭದ್ರತೆ ಹಾಗೂ ಭ್ರಷ್ಟಾಚಾರಕ್ಕೆ ವ್ಯಯವಾಗಿದೆ ಎಂಬ ಆರೋಪವೂ ಕೇಳಿಬರುತ್ತಿದೆ.
ಮಾಲ್ಡೀವ್ಸ್ ವಿರೋಧ
ದ್ವೀಪ ರಾಷ್ಟ್ರ ಮಾಲ್ಡೀವ್ಸ್ ತನ್ನ ಅಭಿವೃದ್ಧಿ ಯೋಜನೆಗಳಿಗೆ ಒಟ್ಟು ಮೊತ್ತದ ಶೇ. 80ನ್ನು ಚೀನಾದಿಂದ ಸಾಲದ ರೂಪದಲ್ಲಿ ಪಡೆದಿದೆ. ಈಗ ಮಾಲ್ಡೀವ್ಸ್ ನಾಯಕರು ಚೀನಾದ ನೀತಿಯನ್ನು ವಿರೋಧಿಸುತ್ತಿದ್ದಾರೆ. ದಕ್ಷಿಣ ಚೀನಾ ಸಮುದ್ರದ ದ್ವೀಪ ಸಮೂಹವನ್ನು ಒತ್ತುವರಿ ಮಾಡಲು ಚೀನಾ ಹವಣಿಸುತ್ತಿದೆ. ಇದು ವಸಾಹತುಶಾಹಿ ನೀತಿಯನ್ನು ತೋರಿಸುತ್ತದೆ ಎಂದು ಮಾಲ್ಡೀವ್ಸ್​ನ ಪದಚ್ಯುತ ನಾಯಕ ಮೊಹಮ್ಮದ್ ಆರೋಪಿಸಿದ್ದಾರೆ.
ಅಡಕತ್ತರಿಯಲ್ಲಿ ಶ್ರೀಲಂಕಾ
ವಿವಿಧ ಯೋಜನೆಗಳಿಗೆ ಅಪಾರ ಸಾಲ ಮಾಡಿಕೊಂಡಿರುವ ಶ್ರೀಲಂಕಾ, ಅದನ್ನು ಮರುಪಾವತಿ ಮಾಡಲಾಗದೇ ಈಗ ಅಡಕತ್ತರಿಯಲ್ಲಿ ಸಿಲುಕಿದೆ. ಸುಮಾರು -ಠಿ; 10,000 ಕೋಟಿ ಸಾಲ ತೀರಿಸಲು ಸಾಧ್ಯವಾಗದೇ ಕಳೆದ ವರ್ಷ ಒಂದು ಬಂದರನ್ನು ಚೀನಾಕ್ಕೆ 99 ವರ್ಷ ಭೋಗ್ಯಕ್ಕೆ ನೀಡಿದೆ. ಭದ್ರತೆ ದೃಷ್ಟಿಯಿಂದ ಈ ಬಂದರು ಮಹತ್ವದ್ದಾಗಿದೆ. ಈಗ ಇದು ಚೀನಾದ ಕೈಗೆ ಸಿಕ್ಕಿರುವುದು ಭಾರತಕ್ಕೆ ಭದ್ರತಾ ಆತಂಕ ತಂದೊಡ್ಡಿದೆ.
ಚೀನಾಕ್ಕೆ ಮಾತ್ರ ಲಾಭ
ಅಪಾರ ಸಾಲ ನೀಡಿಕೆಯಿಂದ ಚೀನಾಕ್ಕೆ ದೊಡ್ಡ ಪ್ರಮಾಣದಲ್ಲಿ ಅನುಕೂಲವಾಗುತ್ತಿದೆ. ಸಾಲದ ಮೇಲೆ ದೊಡ್ಡ ಪ್ರಮಾಣದ ಬಡ್ಡಿ ವಿಧಿಸುವ ಮೂಲಕ ಅಪಾರ ಲಾಭಗಳಿಸಬಹುದು, ಸಾಲ ಪಡೆದ ರಾಷ್ಟ್ರಗಳನ್ನು ತನಗೆ ಬೇಕಾದಂತೆ ಬಳಸಿಕೊಳ್ಳಬಹುದು. ವಿವಿಧ ದೇಶಗಳಲ್ಲಿನ ಅಭಿವೃದ್ಧಿ ಕಾಮಗಾರಿಗೆ ಚೀನಾದಲ್ಲಿನ ಅಪಾರ ಕಚ್ಚಾ ವಸ್ತುಗಳು, ಮಾನವ ಸಂಪನ್ಮೂಲ, ತಂತ್ರಜ್ಞಾನ ಬಳಕೆಯಾಗುತ್ತದೆ. ಇದರಿಂದಲೂ ಚೀನಾ ದೊಡ್ಡ ಪ್ರಮಾಣದಲ್ಲಿ ಹಣ ಗಳಿಸುತ್ತದೆ.
ಭಾರತದ ವಿರೋಧ ಏಕೆ?
ದಕ್ಷಿಣ ಚೀನಾ ಸಮುದ್ರದ ಮೇಲೆ ಸಂಪೂರ್ಣ ಪ್ರಾಬಲ್ಯ ಸಾಧಿಸಲು ಚೀನಾ ಯತ್ನಿಸುತ್ತಿದೆ. ಇದಕ್ಕೆ ಒಬಿಒಆರ್ ಯೋಜನೆಯನ್ನು ದಾಳವಾಗಿ ಬಳಕೆ ಮಾಡಿಕೊಳ್ಳುತ್ತಿದೆ. ಹೀಗಾಗಿ ಭಾರತ ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದೆ. ಪಾಕ್-ಚೀನಾ ಕಾರಿಡಾರ್ ಯೋಜನೆ ಈಗಾಗಲೇ ಜಾರಿಯಾಗಿದೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಇದು ಹಾದುಹೋಗುತ್ತದೆ. ಹೀಗಾಗಿ ಭಾರತಕ್ಕೆ ಭದ್ರತಾ ಆತಂಕ ಏದುರಾಗಿದೆ. ಹಲವು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಭಾರತ ಈ ಯೋಜನೆಯನ್ನು ತೀವ್ರವಾಗಿ ವಿರೋಧಿಸಿದೆ.
ಸಾಲದ ಸುಳಿಯಲ್ಲಿ ದೇಶಗಳು
ಪಾಕಿಸ್ತಾನ
ಜಿಬೌಟಿ
ಮಾಲ್ಡೀವ್ಸ್
ಮಂಗೋಲಿಯಾ
ಲಾವೋಸ್
ಮಾಂಟೆನೆಗ್ರೋ
ತಜಕಿಸ್ತಾನ
ಕಿರ್ಗಿಸ್ತಾನ
ಶ್ರೀಲಂಕಾ
ತಾಲಿಬಾನ್​ಪರ ಪಾಕಿಸ್ತಾನಕ್ಕೆ ಅನುದಾನ ಕಡಿತದ ಶಾಕ್
ವಾಷಿಂಗ್ಟನ್: ತಾಲಿಬಾನ್ ಉಗ್ರರನ್ನು ಸದೆ  ಬಡಿಯುವಂತೆ ಪದೇಪದೆ ಎಚ್ಚರಿಸಿದರೂ ಕ್ರಮಕೈಗೊಳ್ಳದ ಪಾಕಿಸ್ತಾನಕ್ಕೆ -ಠಿ; 2130 ಕೋಟಿ ನೆರವು ರದ್ದು ಮಾಡಲು ಅಮೆರಿಕ ನಿರ್ಧರಿಸಿದೆ.
ಉಗ್ರರ ವಿರುದ್ಧ ಕ್ರಮಕೈಗೊಳ್ಳದೆ ಕಳ್ಳಾಟವಾಡುತ್ತಿರುವ ಪಾಕ್ ಬಗ್ಗೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಸಮಾಧಾನ ವ್ಯಕ್ತಪಡಿಸಿ ಸಂಯೋಜಿತ ಬೆಂಬಲ ನಿಧಿ (ಸಿಎಸ್​ಎಫ್)ಯ ನೆರವನ್ನು ತಡೆಹಿಡಿಯುವಂತೆ ಈ ವರ್ಷದ ಆರಂಭದಲ್ಲಿ ಸೂಚಿಸಿದ್ದರು. ಈಗ ಇದನ್ನು ರದ್ದು ಮಾಡಲು ಅಮೆರಿಕ ಸೇನೆ ನಿರ್ಧರಿಸಿದೆ. ಈ ಹಣವನ್ನು ಇನ್ನಿತರ ತುರ್ತು ಆದ್ಯತೆಯ ವಿಷಯಗಳಿಗೆ ಖರ್ಚು ಮಾಡಲಾಗುವುದು ಎಂದು ಅಮೆರಿಕದ
ರಕ್ಷಣಾ ಕಾರ್ಯಾಲಯ ಪೆಂಟಗಾನ್ ತಿಳಿಸಿದೆ.ಈ ಬೇಸಿಗೆಯಲ್ಲಿ ಪಾಕಿಸ್ತಾನಕ್ಕೆ ಸಿಎಸ್​ಎಫ್ ನೆರವು ಬಿಡುಗಡೆಯಾಗಬೇಕಿತ್ತು. ಆದರೆ, ಆ ರಾಷ್ಟ್ರ ಉಗ್ರರ ವಿಷಯದಲ್ಲಿ ಮೃದುವಾಗಿರುವ ಕಾರಣ ನೆರವು ರದ್ದು ಮಾಡದೆ ಅನ್ಯ ಮಾರ್ಗವಿಲ್ಲ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಜಿಮ್ ಮ್ಯಾಟಿಸ್ ಹೇಳಿದ್ದಾರೆ. ಒಂದೂವರೆ ದಶಕಕ್ಕೂ ಹೆಚ್ಚು ಕಾಲದಿಂದ ಅಫ್ಘಾನಿಸ್ತಾನದಲ್ಲಿ ಉಗ್ರರ ವಿರುದ್ಧ ಅಮೆರಿಕ ಹೋರಾಟ ಮಾಡುತ್ತಿದೆ. ಆದರೆ, ಪಾಕ್​ನಲ್ಲಿ ಆಶ್ರಯ ಪಡೆದಿರುವ ಭಯೋತ್ಪಾದಕರು ಮತ್ತೆ ಮತ್ತೆ ಆಫ್ಘನ್​ನಲ್ಲಿ ವಿಧ್ವಂಸಕ ಕೃತ್ಯ ನಡೆಸುತ್ತಿದ್ದಾರೆ. ಈ ಉಗ್ರರನ್ನು ಮಟ್ಟಹಾಕಲು ಪಾಕ್ ನೆರವು ಪಡೆಯುತ್ತಿದೆ. ಆದರೆ ಕ್ರಮ ಕೈಗೊಳ್ಳುತ್ತಿಲ್ಲ. ಇದೇ ಧೋರಣೆ ಮುಂದುವರಿದರೆ ಎಲ್ಲ ರೀತಿಯ ಸಹಾಯವನ್ನು ನಿಲ್ಲಿಸಬೇಕಾಗುತ್ತದೆ ಎಂದು ಅಧ್ಯಕ್ಷ ಟ್ರಂಪ್ ಆಡಳಿತ ಮೊದಲಿನಿಂದಲೂ ಹೇಳುತ್ತಿದೆ. -ಏಜೆನ್ಸೀಸ್

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...