ಡಿಸೆಂಬರ್ನಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ್ ಕಂಬಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಸಾಪ ರಾಜ್ಯಾಧ್ಯಕ್ಷ ಮನು ಬಳಿಗಾರ್ ಘೋಷಿಸಿದ್ದಾರೆ.
ಇಂದು ಗದಗ ನಗರದಲ್ಲಿ ನಡೆದ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸರ್ವಾನುಮತದಿಂದ ಚಂದ್ರಶೇಖರ ಕಂಬಾರ ಅವರನ್ನು ಆಯ್ಕೆ ಮಾಡಲಾಗಿದೆ. ಕನ್ನಡ ಸಾಹಿತ್ಯ ಸಮ್ಮೇಳನ ಡಿ.7, 8ರಂದು ನಡೆಯಲಿದೆ ಎಂದು ಸಭೆಯ ನಂತರದ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದ್ದಾರೆ.
ಚಂದ್ರಶೇಖರ್ ಕಂಬಾರ್ ಅವರು ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರೂ ಆಗಿದ್ದಾರೆ.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ