ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ತಲ್ಲಾಖ್ ತಲ್ಲಾಖ್ ತಲ್ಲಾಖ್

ತ್ರಿವಳಿ ತಲ್ಲಾಖ್ ನಿಷೇಧ ಒಂದು ಕ್ರಾಂತಿಕಾರಿ ಹೆಜ್ಜೆಯೇ ?
ಭಾರತದಲ್ಲಿ ಆಚರಿಸಲಾಗುತ್ತಿದ್ದ  ಸತಿ ಸಹಗಮನ - ಬಾಲ್ಯವಿವಾಹ ಮುಂತಾದ ಸಂಪ್ರದಾಯಗಳನ್ನು ನಿಷೇದಿಸಿದಷ್ಟೇ ಮಹತ್ವ ಇದಕ್ಕೂ ಇದೆಯೇ ?
ಈ ಪ್ರಶ್ನೆಗೆ ಹೌದು ಎನ್ನುವ ಮುನ್ನ ಒಂದು ವಿಷಯ ಸ್ಪಷ್ಟವಾಗಿ ಅರ್ಥಮಾಡಿಕೊಳ್ಳೋಣ....
ಯಾವುದೇ ಜಾತಿ ಧರ್ಮ, ಸಮುದಾಯ, ಪಂಗಡ, ಏನೇ ಇರಲಿ,
ಅವರ ನಂಬಿಕೆಗಳು, ಆಚರಣೆಗಳು, ಇತಿಹಾಸ ಏನೇ ಹೇಳಲಿ,
ಈ ಕ್ಷಣದಲ್ಲಿ ಮಹಿಳೆಗೆ ಆಕೆಯ ಸ್ವಾಭಾವಿಕ ಹಕ್ಕು ಸ್ವಾತಂತ್ರ್ಯ ಮತ್ತು ಸಮಾನತೆಗೆ ಧಕ್ಕೆ ಉಂಟುಮಾಡುವ ಎಲ್ಲವನ್ನೂ ನಿಷೇಧಿಸಲೇ ಬೇಕು.
ದೇವಸ್ಥಾನದ ಪ್ರವೇಶವೂ ಅಷ್ಟೆ ಅಥವಾ ಆಕೆಯನ್ನು ಮದುವೆಯಾಗಿ ಸರಿಯಾದ ಕಾರಣವಿಲ್ಲದೆ ಆಕೆಯ ಭವಿಷ್ಯದ ಬಗ್ಗೆ ಯೋಚಿಸದೆ ಕೇವಲ ಗಂಡಿನ ಏಕಮುಖದ ನಿರ್ಣಯದಂತೆ ಆಕೆಯನ್ನು ತ್ಯಜಿಸುವುದು ತಪ್ಪಾಗುತ್ತದೆ.
ಧರ್ಮದ ಮೂಲ ಆಶಯ ಏನೇ ಆಗಿದ್ದರೂ, ಈಗ ಅದರ ದುರುಪಯೋಗ ಆಗುತ್ತಿದ್ದರೆ ಅದನ್ನು ನಿಷೇಧಿಸಲೇಬೇಕು.
ಅದೇ ಸಂಧರ್ಭದಲ್ಲಿ ಒಂದು ವೇಳೆ ಹೊಸ ಕಾನೂನಿನಲ್ಲಿ ಪುರುಷ ದ್ವೇಷದ ಅಂಶವಿದ್ದರೆ ಅದನ್ನು ತೆಗೆದುಹಾಕಬೇಕು.
ಅಂದರೆ ಗಂಡು ಹೆಣ್ಣು ಇಬ್ಬರಿಗೂ ವಿಚ್ಚೇದನದ ಸಮಾನ ಅವಕಾಶ ಕೊಡಬೇಕು.
ಇಲ್ಲಿ ಇನ್ನು ಒಂದು ಜಿಜ್ಞಾಸೆ ಇದೆ. ಪಾಶ್ಚಿಮಾತ್ಯರಂತೆ ವ್ಯಕ್ತಿ ಸ್ವಾತಂತ್ರ್ಯದ ಹಿನ್ನೆಲೆಯಲ್ಲಿ ವಿಚ್ಛೇದನವನ್ನು ಸರಳ ಮತ್ತು ನಾಗರಿಕ ಪ್ರಜ್ಞೆಯ ರೀತಿಯಲ್ಲಿ ರೂಪಿಸಿದರೆ , ಮಹಿಳೆಯರು ಸಂಪ್ರದಾಯಗಳ ಬಂಧನದಿಂದ ಇತ್ತೀಚೆಗೆ ಅಷ್ಟೇ ಹೊರ ಬರುತ್ತಿರುವ  ಮತ್ತು ಆರ್ಥಿಕ ಸ್ವಾತಂತ್ರ್ಯ ಸಿಗುತ್ತಿರುವ ಸಂಧರ್ಭದಲ್ಲಿ ಕೌಟುಂಬಿಕ ವ್ಯವಸ್ಥೆ
ಆಧುನಿಕ ಹಿಂದು ಮತ್ತು ಮುಸ್ಲಿಂ ಇಬ್ಬರಲ್ಲೂ ತಾತ್ಕಾಲಿಕವಾಗಿ ಘರ್ಷಣೆ ಮತ್ತು ಶಿಥಿಲತೆಯೆಡೆಗೆ ಸಾಗುತ್ತದೆ. ಇದನ್ನು ಒಂದು ಹಂತಕ್ಕೆ ಬರುವವರೆಗೂ ಸಮಾಜ ಸಹಿಸಿಕೊಳ್ಳಲೇಬೇಕು. ಏಕೆಂದರೆ ಈ ನೆಪದಲ್ಲಿ ಮಹಿಳಾ ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಹತ್ತಿಕ್ಕುವುದು ಉಚಿತವಲ್ಲ.
ಎಂದಿನಂತೆ ಇಲ್ಲಿಯೂ ಅವಶ್ಯವಿರುವ ಮುಗ್ದ ಹೆಣ್ಣುಮಕ್ಕಳಿಗೆ ಇದರ ಪ್ರಯೋಜನ ಸರಿಯಾಗಿ ಸಿಗದೆ ಅಲ್ಲಿಯೂ ಕೆಟ್ಟ ಮನೋಭಾವದ ಪ್ರಬಲ ಹೆಣ್ಣು ಮಕ್ಕಳು ಅದನ್ನು ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆ ಎಲ್ಲಾ ವಿಷಯಗಳಂತೆ ಇಲ್ಲಿಯೂ ಇದೆ.
ಏನೇ ಆಗಲಿ, ಮಹಿಳೆಯರ ಸ್ವಾತಂತ್ರ್ಯ  ಮತ್ತು ಸಮಾನತೆ ಒದಗಿಸುವ ದೃಷ್ಟಿಯಿಂದ ತ್ರಿವಳಿ ತಲ್ಲಾಖ್ ನಿಷೇಧ ಒಂದು ಸ್ವಾಗತಾರ್ಹ ಬೆಳವಣಿಗೆ.
ಮುಸ್ಲಿಂ ಧರ್ಮದ ಸಂಪ್ರದಾಯವಾದಿಗಳು ಇದನ್ನು ವಿರೋಧಿಸಬಹುದು.
ಆದರೆ ನೆನಪಿಡಿ ,
ಇದು ಕೇವಲ ಘರ್ಷಣೆಯ ಕೌಟುಂಬಿಕ ಪರಿವಾರಗಳಿಗೆ ಮತ್ತು ನ್ಯಾಯಾಲಯದ ಮೆಟ್ಟಿಲು ಹತ್ತುವವರಿಗೆ ಅನ್ವಯವೇ ಹೊರತು ಸಹಜ ಹೊಂದಾಣಿಕೆಯ ಮತ್ತು ಮಾತುಕತೆಗಳ ಮುಖಾಂತರ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವ ಜನರಿಗೆ ಇದು ಯಾವುದೇ ತೊಂದರೆ ಮಾಡುವುದಿಲ್ಲ. ಆದ್ದರಿಂದ ಇದನ್ನು ಕ್ರಾಂತಿಕಾರಿ ನಿರ್ಧಾರವೇ ಎನ್ನಬಹುದು.
ಹೌದು, ಬಲಪಂಥೀಯ ಹಿನ್ನೆಲೆಯ ಧಾರ್ಮಿಕ ನಂಬಿಕೆಯ ಸಾಂಪ್ರದಾಯಿಕ ಪಕ್ಷದ ಸರ್ಕಾರ,
ದ್ವೇಷದ ಮತ್ತು ಓಟಿನ ರಾಜಕೀಯಕ್ಕಾಗಿ ಇದನ್ನು ಜಾರಿಗೆ ತಂದಿದೆ. ಹಿಂದುಗಳಿಗೆ ಹೋಲಿಸಿದರೆ ಮುಸ್ಲೀಮರಲ್ಲಿ ವಿಚ್ಚೇದನ ಪ್ರಮಾಣ ಬಹಳ ಕಡಿಮೆ ಇದೆ. ಇದು ನಮ್ಮ ಧಾರ್ಮಿಕ ನಂಬಿಕೆಯ ಮೇಲೆ ಮಾಡಿದ ಹಲ್ಲೆ ಎಂಬ ಆರೋಪ ಮಾಡುತ್ತಾರೆ.
ಆದರೂ,. ರಾಜಕೀಯ ಏನೇ ಇದ್ದರೂ ಮಹಿಳೆಯರ ಸಮಾನತೆ ಮತ್ತು ಸ್ವಾತಂತ್ರ್ಯ ರಕ್ಷಿಸುವ ಎಲ್ಲಾ ಸುಧಾರಣೆಗಳಿಗೂ ಪ್ರಬುದ್ಧ ಮನಸ್ಸುಗಳ ಬೆಂಬಲ ಸದಾ ಇರುತ್ತದೆ.
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಸ್ಸುಗಳ ಅಂತರಂಗದ ಚಳವಳಿ,

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...