ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಮಹತ್ವದ ನಿರ್ಣಯ,

*ಪೆ*ಟ್ರೋಲ್ ಹಾಗೂ ಡೀಸೆಲ್ ಬೆಲೆ ದಿನದಿಂದ ದಿನಕ್ಕೆ
ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪರ್ಯಾಯ ಇಂಧನ ಬಳಕೆಗೆ ಒತ್ತು ನೀಡಬೇಕು ಎಂಬ
ಸಮಯೋಚಿತ ಆಗ್ರಹ ಬಲವಾಗಿ ಕೇಳಿಬರುತ್ತಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಈ
ನಿಟ್ಟಿನಲ್ಲಿ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಹೊಸ ಎಥನಾಲ್ ನೀತಿ ಅಂಗೀಕರಿಸಿದೆ.
ಈಗಾಗಲೇ ನಿಗದಿತ ಗುರಿಗಿಂತ ಹೆಚ್ಚು ಸಕ್ಕರೆಯನ್ನು ಕಾರ್ಖಾನೆಗಳು ಉತ್ಪಾದಿಸುತ್ತಿದ್ದು,
ಅವುಗಳು ಎಥನಾಲ್ ಉತ್ಪಾದನೆಗೆ ಮುಂದಾಗುವಂತೆ ಪ್ರೋತ್ಸಾಹಿಸಲು ಲೀಟರ್​ಗೆ 59.19 ರೂಪಾಯಿ
ನೀಡಲು ನಿರ್ಧರಿಸಲಾಗಿದೆ. ಈ ದರ ಮುಂಚೆ 47.5 ರೂ. ಇತ್ತು. ‘ನಮ್ಮ ದೇಶದಲ್ಲಿರುವ ಎಥನಾಲ್
ಘಟಕಗಳು ಗರಿಷ್ಠ ಉತ್ಪಾದನೆ ಮಾಡಿದರೆ ಮತ್ತು ಪರ್ಯಾಯ ಇಂಧನಗಳನ್ನು ಗರಿಷ್ಠ ಪ್ರಮಾಣದಲ್ಲಿ
ಬಳಸಿದರೆ ಡೀಸೆಲ್ ಬೆಲೆ ಲೀಟರ್​ಗೆ 50 ಮತ್ತು ಪೆಟ್ರೋಲ್ 55 ರೂ. ಆಗಲು ಸಾಧ್ಯವಿದೆ’ ಎಂದು
ಇತ್ತೀಚೆಗಷ್ಟೇ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದು ಇಲ್ಲಿ ಸ್ಮರಣೀಯ.

ಈ ಕ್ರಮದಿಂದ ಎಥನಾಲ್ ಉತ್ಪಾದನೆ ಹೆಚ್ಚಿ, ಭವಿಷ್ಯದ ದಿನಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್
ಆಮದು ಪ್ರಮಾಣ ಒಂದಿಷ್ಟಾದರೂ ತಗ್ಗಿಸಲು ನೆರವಾಗಲಿದೆ. 2013-14ರಲ್ಲಿ ನಮ್ಮಲ್ಲಿ 38 ಕೋಟಿ
ಲೀಟರ್ ಇದ್ದ ಎಥನಾಲ್ ಉತ್ಪಾದನೆ 2017-18ರ ವೇಳೆಗೆ 140 ಕೋಟಿ ಲೀಟರ್​ಗೆ ಹೆಚ್ಚಿದೆ.
ಆದರೂ, ನಮ್ಮಲ್ಲಿ ಕಬ್ಬು ಬೆಳೆಯುವ ಪ್ರಮಾಣ, ಸಕ್ಕರೆ ಕಾರ್ಖಾನೆಗಳ ಸಂಖ್ಯೆಗೆ ಹೋಲಿಸಿದರೆ
ಎಥನಾಲ್ ಉತ್ಪಾದನೆಯನ್ನು ಗಣನೀಯವಾಗಿ ಹೆಚ್ಚಿಸುವ ಅವಕಾಶಗಳಿವೆ. ಅಲ್ಲದೆ, ಹೊಸನೀತಿಯಿಂದ
ಸಕ್ಕರೆ ಕಾರ್ಖಾನೆಗಳ ಪುನಶ್ಚೇತನವೂ ಸಾಧ್ಯವಾಗಲಿದೆ ಎಂಬುದು ಗಮನಾರ್ಹ. ಸಾಂಪ್ರದಾಯಿಕ
ಕ್ರಮಗಳನ್ನೇ ನೆಚ್ಚಿಕೊಂಡಿರುವ ಸಕ್ಕರೆ ಕಾರ್ಖಾನೆಗಳು ಉಪ ಉತ್ಪನ್ನಗಳ ತಯಾರಿಕೆಗೆ ಆದ್ಯತೆ
ನೀಡದೆ ನಷ್ಟದ ಸುಳಿಗೆ ಸಿಲುಕುತ್ತಿವೆ. ಅಲ್ಲದೆ, ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆ ಕುಸಿದಾಗ
ರೈತರಿಗೆ ಸಕಾಲಕ್ಕೆ ಕಬ್ಬಿನ ಬಿಲ್ ಪಾವತಿ ಮಾಡದೆ ಸತಾಯಿಸುವುದೂ ಇದೆ. ಎಥನಾಲ್ ಉತ್ಪಾದನೆ
ಹೆಚ್ಚಿಸಿದಷ್ಟೂ ಸಕ್ಕರೆ ಕಾರ್ಖಾನೆಗಳ ಆರ್ಥಿಕತೆಯೂ ಉತ್ತಮಗೊಳ್ಳಲಿದೆ. ಆದರೆ, ಇದರ
ಲಾಭವನ್ನು ಪ್ರಾಮಾಣಿಕವಾಗಿ ರೈತರಿಗೂ ತಲುಪಿಸಲು ಕಾರ್ಖಾನೆಗಳು ಬದ್ಧವಾಗಬೇಕು.

ಮತ್ತೊಂದು ಮಹತ್ವದ ನಿರ್ಧಾರದಲ್ಲಿ, ಮುಂಗಾರು ಮತ್ತು ಹಿಂಗಾರಿನ ಪ್ರಮುಖ ಬೆಳೆಗಳ ಕನಿಷ್ಠ
ಬೆಂಬಲ ಬೆಲೆಯನ್ನು ರೈತರಿಗೆ ಸಮರ್ಪಕವಾಗಿ ತಲುಪಿಸಲು ಮತ್ತು ಎಣ್ಣೆಕಾಳುಗಳ ಖರೀದಿಗೆ
ಖಾಸಗಿಯವರಿಗೂ ಅವಕಾಶ ಮಾಡಿಕೊಡಲು ಸರ್ಕಾರ ಮುಂದಾಗಿದೆ. ಈ ವರ್ಷದ ಜುಲೈನಲ್ಲಿ ಪ್ರಮುಖ
ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಿದ್ದ ಸರ್ಕಾರ, ಈಗ ಅದರ ಅನುಷ್ಠಾನದತ್ತ ಗಮನ
ಹರಿಸಿದೆ. ಎಣ್ಣೆಕಾಳುಗಳ ಖರೀದಿಗೆ ಖಾಸಗಿಯವರಿಗೆ ಅವಕಾಶ ಮಾಡಿಕೊಡುವುದರಿಂದ,
ಸಂಗ್ರಹಾಗಾರಗಳಲ್ಲಿ ಅವು ಹಾಳಾಗುವುದನ್ನು ತಡೆಗಟ್ಟಿ, ಬೆಲೆಸಮರವನ್ನೂ ನಿಯಂತ್ರಿಸಬಹುದು.
ಹೊಸ ನೀತಿ ಪ್ರಕಾರ, ಮಾರುಕಟ್ಟೆ ಬೆಲೆ ಸರ್ಕಾರ ನಿಗದಿ ಮಾಡಿರುವ ಕನಿಷ್ಠ ಬೆಂಬಲ
ಬೆಲೆಗಿಂತಲೂ ಕುಸಿತವಾದಲ್ಲಿ ಆ ನಷ್ಟವನ್ನು ಸರ್ಕಾರವೇ ಸರಿದೂಗಿಸಿ ಕೊಡಲಿದೆ. ಈ ಕ್ರಮಗಳು
ರೈತರ ಹಿತದೃಷ್ಟಿಗೆ ಪೂರಕವಾಗಿವೆ ಎನ್ನಬೇಕು. ಇವುಗಳ ಸಮರ್ಪಕ ಅನುಷ್ಠಾನದ ಆಧಾರದ ಮೇಲೆ
ಹೊಸನೀತಿಗಳ ಯಶಸ್ಸು ನಿರ್ಧಾರವಾಗಲಿದ್ದು, ಸರ್ಕಾರ ಈ ನಿಟ್ಟಿನಲ್ಲಿ ಆದ್ಯ ಗಮನ ನೀಡಬೇಕು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...