ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ರಾಜ್ಯದ 24 ಜಿಲ್ಲೆಗಳ 100 ತಾಲ್ಲೂಕು ಬರಪೀಡಿತ: ₹16,662 ಕೋಟಿ ನಷ್ಟ

ಬೆಂಗಳೂರು: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 24 ಜಿಲ್ಲೆಗಳ 100 ಬರಪೀಡಿತ ತಾಲ್ಲೂಕುಗಳಲ್ಲಿ
₹ 16,662.48 ಕೋಟಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
ಕಂದಾಯ ಸಚಿವ ಆರ್‌.ವಿ. ದೇಶಪಾಂಡೆ ಮತ್ತು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗಂಗಾರಾಂ ಬಡೇರಿಯಾ ದೆಹಲಿಯಲ್ಲಿ ಸೋಮವಾರ ಕೇಂದ್ರ ಸಚಿವರನ್ನು ಭೇಟಿ ಮಾಡಿ, ರಾಷ್ಟ್ರೀಯ ವಿಪತ್ತು ಪರಿಹಾರ ನಿಥಿಯಿಂದ (ಎನ್‌ಡಿಆರ್‌ಎಫ್‌) ಪರಿ
ಹಾರ ನೀಡುವಂತೆ ಮನವಿ ಸಲ್ಲಿಸಲಿದ್ದಾರೆ.
ಮುಂಗಾರು ಅವಧಿಯಲ್ಲಿ 74.69 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ನಿರೀಕ್ಷಿಸಲಾಗಿತ್ತು. ಸೆಪ್ಟೆಂಬರ್‌ ಅಂತ್ಯದದವರೆಗೆ 66.36 ಲಕ್ಷ ಹೆಕ್ಟೇರ್‌ (ಶೇ 89ರಷ್ಟು) ಪ್ರದೇಶದಲ್ಲಿ ಬಿತ್ತನೆ ಆಗಿದೆ. ಕೃಷಿ, ತೋಟಗಾರಿಕೆ ಮತ್ತು ಕಂದಾಯ ಇಲಾಖೆಯ ಜಂಟಿ ಸರ್ವೆ ಬಳಿಕ, ಬರ ಪೀಡಿತ ತಾಲ್ಲೂಕುಗಳಲ್ಲಿ ತೇವಾಂಶ ಕೊರತೆಯಿಂದ 27.32 ಲಕ್ಷ ಹೆಕ್ಟೇರ್‌ (ಶೇ 41 ಬಿತ್ತನೆ ಪ್ರದೇಶ)  ಹಾನಿಗೆ ಒಳಗಾಗಿರುವುದನ್ನು ಗುರುತಿಸಲಾಗಿದೆ. ಈ ಪೈಕಿ, 26.19 ಲಕ್ಷ ಹೆಕ್ಟೇರ್‌ನಲ್ಲಿ ಶೇ 33ಕ್ಕೂ ಹೆಚ್ಚು ಪ್ರಮಾಣದಲ್ಲಿ ಬೆಳೆ ಹಾನಿ ಉಂಟಾಗಿದೆ ಎಂದು ಕಂದಾಯ ಇಲಾಖೆ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿದೆ.
ಟ್ಯಾಂಕರ್‌ ನೀರು: ಗ್ರಾಮೀಣ ಪ್ರದೇಶಗಳ 159 ಗ್ರಾಮಗಳಿಗೆ ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರು ಪೂರೈಸಲಾಗುತ್ತಿದೆ. 203 ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆಗೆ ಪಡೆಯಲಾಗಿದೆ. ನಗರ ಪ್ರದೇಶಗಳಲ್ಲಿ 136 ವಾರ್ಡ್‌ಗಳಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಸ್ಥಿತಿ ಇದೇ ರೀತಿ ಮುಂದುವರಿದರೆ ಬೇಸಿಗೆಯಲ್ಲಿ ಈ ಪ್ರದೇಶಗಳಲ್ಲಿ ಕುಡಿಯುವ ನೀರು ಸಮಸ್ಯೆ ಮತ್ತಷ್ಟು ಬಿಗಡಾಯಿಸುವ ಆತಂಕ ಇದೆ. ಅಂತರ್ಜಲ ಮಟ್ಟ ಕುಸಿಯುತ್ತಿರುವುದರಿಂದ ಚಾಲ್ತಿಯಲ್ಲಿರುವ ಕುಡಿಯುವ ನೀರು ಪೂರೈಕೆ ಯೋಜನೆಗಳನ್ನು ಮತ್ತಷ್ಟು ಚುರುಕುಗೊಳಿಸಲು ನಿರ್ಧರಿಸಲಾಗಿದೆ.
ಬರಪೀಡಿತಗಳಲ್ಲಿ ತಾಲ್ಲೂಕುಗಳಲ್ಲಿ ಮೇವು ಅವಲಂಬಿಸಿದ 11.43 ಲಕ್ಷ  ಜಾನುವಾರುಗಳಿವೆ. 98.26 ಲಕ್ಷ ಟನ್‌ ಒಣ ಮೇವು ಲಭ್ಯ ಇದ್ದು, ಇದು ಸುಮಾರು 16 ವಾರಗಳಿಗೆ ಮಾತ್ರ ಸಾಕಾಗಲಿವೆ. ಬರ ಸ್ಥಿತಿ ಇದೇ ರೀತಿ ಮುಂದುವರಿದರೆ, ಮೇವಿನ ಕೊರತೆ ಉಂಟಾಗ
ಲಿದೆ. ಇದನ್ನು ನಿಭಾಯಿಸಲು ಹಸಿರು ಮೇವು ಬೆಳೆಯಲು ಮೇವಿನ ಬೀಜಗಳ 8.11 ಲಕ್ಷ ಕಿಟ್‌ಗಳನ್ನು ನೀರಾವರಿ ಸೌಲಭ್ಯ ಇರುವ ರೈತರಿಗೆ ವಿತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಬರ ನಿರ್ವಹಣೆ ಹಾಗೂ ವಲಸೆ ತಡೆಯಲು ನರೇಗಾ ಯೋಜನೆಯಡಿ ವೈಯಕ್ತಿಕ ಮತ್ತು ಸಮುದಾಯ ಆಧಾರಿತ ಕಾಮಗಾರಿ ಕೈಗೆತ್ತಿಕೊಳ್ಳಲು ಗ್ರಾಮ ಪಂಚಾಯಿತಿಗಳಿಗೆ ಸೂಚಿಸಲಾಗಿದೆ. ಸೆ. 22ರವರೆಗೆ ಬರ ಪೀಡಿತ ತಾಲ್ಲೂಕುಗಳಲ್ಲಿ 4.69 ಲಕ್ಷ ಕಾಮಗಾರಿಗಳನ್ನು ಕೈಗೆತ್ತಿ ಕೊಳ್ಳಲಾಗಿದೆ. 2.10 ಕೋಟಿ ಮಾನವ ದಿನಗಳ ಕೆಲಸ ನಡೆದಿದೆ. ಈ ಅವಧಿಯಲ್ಲಿ 6.36 ಲಕ್ಷ ಕುಟುಂಬಗಳಿಗೆ ಉದ್ಯೋಗ ಒದಗಿಸಲಾಗಿದೆ. 2,238 ಕುಟುಂಬಗಳು 100 ದಿನಗಳ ಕೆಲಸ ಪಡೆದಿವೆ. ಇದಕ್ಕಾಗಿ 142.93 ಕೋಟಿ ವೆಚ್ಚ ಮಾಡಲಾಗಿದೆ. ಅಲ್ಲದೆ, ರೈತರಿಗೆ ನೆರವಾಗಲು ರಾಜ್ಯ ಸರ್ಕಾರ ₹ 2 ಲಕ್ಷದವರೆಗಿನ ಬೆಳೆ ಸಾಲ ಮನ್ನಾ ಮಾಡಿದೆ. ಈ ಮೂಲಕ ಬೊಕ್ಕಸಕ್ಕೆ 48 ಸಾವಿರ ಕೋಟಿ ಹೊರೆಯಾಗಿದೆ ಎಂದೂ ಮೂಲಗಳು ಹೇಳಿವೆ.
ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ  ₹ 50 ಕೋಟಿ ಬಿಡುಗಡೆ ಮಾಡಲಾಗಿದೆ. ಬರ ಪೀಡಿತ ತಾಲ್ಲೂಕಿಗೆ ಕುಡಿಯುವ ನೀರು ಪೂರೈಕೆ ಮತ್ತು ಹಸಿರು ಮೇವು ಬೆಳೆಯಲು ₹ 5 ಲಕ್ಷದಂತೆ ಆರ್ಥಿಕ ನೆರವು ಒದಗಿಸಲಾಗಿದೆ. ಜಿಲ್ಲಾಧಿಕಾರಿಗಳ ವೈಯಕ್ತಿಕ ಖಾತೆಗಳಲ್ಲಿ (‍ಪಿ.ಡಿ) ಸಾಕಷ್ಟು ಹಣ ಇರುವಂತೆ ನೋಡಿಕೊಳ್ಳಲಾಗಿದೆ ಎಂದೂ ಮೂಲಗಳು ತಿಳಿಸಿವೆ.
ಕುಸಿದ ಅಂತರ್ಜಲ: ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಭಾರಿ ಮಳೆಯಿಂದಾಗಿ ಜಲಾಶಯಗಳ ನೀರಿನ ಮಟ್ಟ ಉತ್ತಮವಾಗಿದೆ. ಆದರೂ 3,611 ಸಣ್ಣ ನೀರಾವರಿ ಕೆರೆಗಳ ಪೈಕಿ ಶೇ 53ರಷ್ಟು ಕೆರೆಗಳ ನೀರಿನ ಮಟ್ಟ ವಾಡಿಕೆಗಿಂತ ಕಡಿಮೆ ಇದೆ. ಇದರಿಂದ ಅಂತರ್ಜಲ ಮಟ್ಟ ಕುಸಿದಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...