ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಅಂಗೈನಲ್ಲೇ ತಿಳಿಯಿರಿ ಸಿಡಿಲು, ಮಿಂಚು ಮಾಹಿತಿ,

ಭರತ್‌ರಾಜ್ ಸೊರಕೆ ಮಂಗಳೂರು
ಎಲ್ಲೆಲ್ಲಿ ಮಿಂಚು ಬರುವ ಸಾಧ್ಯತೆ ಇದೆ, ಯಾವ ಪ್ರದೇಶದಲ್ಲಿ ಗುಡುಗು ಸಂಭವಿಸಬಹುದು ಎಂಬ ಭವಿಷ್ಯವೀಗ ಅಂಗೈನಲ್ಲೇ ಸಿಗಲಿದೆ.!
ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಿಡಿಲು ಎಂಬ ಮೊಬೈಲ್ ಆ್ಯಪ್‌ನಲ್ಲಿ ಮಿಂಚು, ಗುಡುಗು ಸಾಧ್ಯತೆಗಳ ಬಗ್ಗೆ ಕ್ಷಣ ಕ್ಷಣದ ಅಲರ್ಟ್ ಸಿಗುತ್ತಿದೆ. ಈ ತಂತ್ರಜ್ಞಾನ ಮೂಲಕ ಸಂಭವನೀಯ ಅಪಾಯದಿಂದ ತಪ್ಪಿಸಿಕೊಳ್ಳಬಹುದಾಗಿದೆ. ಮಳೆ ಅಲರ್ಟ್ ಬಗ್ಗೆ ತಿಳಿದುಕೊಳ್ಳುವಂತೆಯೇ ಸಿಡಿಲು ಆ್ಯಪ್‌ನಲ್ಲಿ ಸಿಡಿಲಿನ ಮುನ್ಸೂಚನೆ ಪಡೆಯಬಹುದು. ಹವಾಮಾನ ಸಂಬಂಧಿತ ನೈಸರ್ಗಿಕ ಅಪಾಯಗಳ ನಿರ್ವಹಣೆ, ಮುನ್ಸೂಚನೆ, ಸ್ಥಳಗಳ ಗುರುತಿಸುವಿಕೆ ‘ಸಿಡಿಲು’ ಆ್ಯಪ್‌ನಲ್ಲಿ ಸಾಧ್ಯ. ವಿಪತ್ತು ನಿರ್ವಹಣೆ ವಿಜ್ಞಾನ ಮತ್ತು ತಂತ್ರಜ್ಞಾನದ ಮಾಹಿತಿ ಮೇಲೆ ಹೆಚ್ಚು ಅವಲಂಬಿತವಾಗಿ ಇರುವುದರಿಂದ ರೈತರಿಗೆ, ಜನಸಾಮಾನ್ಯರಿಗೆ ಪೂರ್ವಭಾವಿ ಮಾಹಿತಿ ಒದಗಿಸುವ ವೇದಿಕೆಯಾಗಿ ಸಿಡಿಲು ಆ್ಯಪ್ ಕಾರ್ಯನಿರ್ವಹಿಸುತ್ತದೆ.
ಮೂರು ಭಾಷೆಗಳಲ್ಲಿ ಮಾಹಿತಿ: ಆ್ಯಪ್‌ನಲ್ಲಿ ಹಿಂದಿ, ಇಂಗ್ಲಿಷ್, ಕನ್ನಡ ಈ ಮೂರು ಭಾಷೆಗಳಲ್ಲಿ ಮಾಹಿತಿ ಪಡೆಯಬಹುದು. ಆ್ಯಪ್‌ಗೆ ಪ್ರವೇಶಿಸುತ್ತಿದ್ದಂತೆ ಮಿಂಚು, ಗುಡುಗು, ಮಳೆ ಮೂರು ವಿಭಾಗಗಳು ತೆರೆದುಕೊಳ್ಳುತ್ತವೆ. ಪ್ರತಿ ವಿಭಾಗದಲ್ಲಿ ನಾವಿರುವ 5.ಕಿ.ಮೀ. ಮತ್ತು 15 ಕಿ.ಮೀ. ವ್ಯಾಪ್ತಿಯಲ್ಲಿನ ಎಚ್ಚರಿಕೆಗಳು ಪ್ರದರ್ಶನವಾಗುತ್ತವೆ. ಅದಕ್ಕಿಂತ ಹೊರಗಿನ ಎಚ್ಚರಿಕೆಗಳು ಸಹ ಅಪ್‌ಡೇಟ್ ಆಗುತ್ತವೆ. ವಿವಿಧ ಬಣ್ಣಗಳ ಮೂಲಕ ಸಿಡಿಲಿನ ಅಪಾಯದ ಮಟ್ಟ ತಿಳಿಯಲು ಸಾಧ್ಯ. ಮಾಹಿತಿ ವಿಭಾಗದಲ್ಲಿ ಸಿಡಿಲಾಘಾತವಾದಾಗ ಕೈಗೊಳ್ಳಬೇಕಾದ ಚಿಕಿತ್ಸೆ ಕುರಿತು ಮಾಹಿತಿಗಳಿವೆ. ಆಂಡ್ರಾಯ್ಡಾ ಮೊಬೈಲ್‌ಗಳಲ್ಲಿ ಪ್ಲೇಸ್ಟೋರ್‌ಗೆ ಹೋಗಿ ಸಿಡಿಲು ಆ್ಯಪ್ ಡೌನ್‌ಲೋಡ್ ಹಾಕಬಹುದು. ಡೌನ್‌ಲೋಡ್ ಹಾಕಿದಾಕ್ಷಣ ವ್ಯಕ್ತಿಯ ಮೊಬೈಲ್ ನಂಬರ್ ಹಾಕುವಂತೆ ಸೂಚನೆ ಬರುತ್ತದೆ. ಈ ಸಂಖ್ಯೆಗೆ ಬರುವ ಒಟಿಪಿಯನ್ನು ಎಂಟ್ರಿ ಮಾಡುತ್ತಿದ್ದಂತೆ ಆ್ಯಪ್ ತೆರೆದುಕೊಳ್ಳುತ್ತದೆ. ಜಿಪಿಎಸ್ ಮತ್ತು ಇಂಟರ್‌ನೆಟ್ ಸಂಪರ್ಕ ಏರ್ಪಟ್ಟು ಆ್ಯಪ್ ಕೆಲಸ ನಿರ್ವಹಿಸುತ್ತದೆ.
ಕಾರ್ಯನಿರ್ವಹಣೆ ಹೇಗೆ?:  ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಿಡಿಲು ಮುನ್ಸೂಚನೆಯ ಸೆನ್ಸರ್‌ಗಳಿವೆ. ಇವುಗಳು ಒಂದು ಗಂಟೆ ಮೊದಲೇ ಮಾಹಿತಿ ಪಡೆದು ಮುಖ್ಯ ಕಚೇರಿಗೆ ಮಾಹಿತಿ ರವಾನಿಸುತ್ತದೆ. ಇಲ್ಲಿಂದ ಆ್ಯಪ್‌ಗೆ ಮಾಹಿತಿ ಅಪ್‌ಲೋಡ್ ಆಗುತ್ತದೆ. ಅರ್ಧ, ಮುಕ್ಕಾಲು ಗಂಟೆ ಮೊದಲೇ ಜನರಿಗೆ ಮಾಹಿತಿ ರವಾನೆಯಾಗುವುದರಿಂದ ಮುಂದಾಗುವ ಹೆಚ್ಚಿನ ಅಪಾಯದಿಂದ ತಪ್ಪಿಸಿಕೊಳ್ಳಲು ಸಾಧ್ಯ.
ಸಿಡಿಲಿನಿಂದಾಗುವ ಅಪಾಯದ ಬಗ್ಗೆ ಮುನ್ನೆಚ್ಚರಿಕೆ ತೆಗೆದುಕೊಳ್ಳಲು ಸಿಡಿಲು ಆ್ಯಪ್ ರಚಿಸಲಾಗಿದೆ. ಯಾವ ಪ್ರದೇಶದಲ್ಲಿ ಸಿಡಿಲಾಘಾತ ಸಂಭವಿಸಬಹುದು ಎಂಬ ಮಾಹಿತಿ ಇದರಲ್ಲಿ ಆಗಿಂದಾಗ್ಗೆ ಅಪ್‌ಡೇಟ್ ಆಗುತ್ತದೆ. ರೈತರಿಗೆ, ಜನಸಾಮಾನ್ಯರಿಗೆ ಇದು ಅತ್ಯಂತ ಸಹಕಾರಿಯಾಗುವ ತಂತ್ರಜ್ಞಾನ.
| ಡಾ.ಎಸ್.ಎಸ್.ಎಂ.ಗಾವಸ್ಕರ್, ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವಿಜ್ಞಾನಿ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...