ನಾಡಿನ ಪರಂಪರೆ ಮತ್ತು
ಸಾಂಪ್ರದಾಯಿಕ ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ
ಸುಧಾ ಮೂರ್ತಿ ಚಾಲನೆ ನೀಡಿದರು.
ಬುಧವಾರ ಬೆಳಗ್ಗೆ 7.05ರಿಂದ 7.35ಕ್ಕೆ ಸಲ್ಲುವ ತುಲಾ ಲಗ್ನದ ಶುಭ ಮುಹೂರ್ತದಲ್ಲಿ ಚಾಮುಂಡಿ
ಬೆಟ್ಟದಲ್ಲಿ ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ ನಂತರ ಚಾಮುಂಡೇಶ್ವರಿ
ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ವಿಧ್ಯುಕ್ತವಾಗಿ ದಸರಾ ಉತ್ಸವಕ್ಕೆ ಚಾಲನೆ ನೀಡಿದರು.
ಇದಕ್ಕೂ ಮುನ್ನ ಸುಧಾಮೂರ್ತಿ ಮತ್ತು ಅವರ ಕುಟುಂಬ ಸದಸ್ಯರು ಚಾಮುಂಡೇಶ್ವರಿ ದೇವಿಗೆ ವಿಶೇಷ
ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ದೇವಿಗೆ
ವಿಶೇಷ ಪೂಜೆ ಸಲ್ಲಿಸಿದರು.
ಉದ್ಘಾಟನಾ ಕಾರ್ಯಕ್ರಮದಲ್ಲಿ ಸಚಿವೆ ಜಯಮಾಲಾ, ಸಚಿವರಾದ ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್,
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್, ಸಂಸದ ಪ್ರತಾಪ್ ಸಿಂಹ ಪಾಲ್ಗೊಂಡಿದ್ದರು.
ನಾಡಹಬ್ಬ ದಸರಾ ಮಹೋತ್ಸವಕ್ಕೆ ಇಂದು ಚಾಲನೆ

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ