ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಬರಲಿದೆ ಕೃಷಿಗೊಂದು ಕ್ಯಾಬಿನೆಟ್!,

ರುದ್ರಣ್ಣ ಹರ್ತಿಕೋಟೆ, ಬೆಂಗಳೂರು
ಜಾಗತಿಕ ಹವಾಮಾನ ವೈಪರೀತ್ಯಕ್ಕೆ ತಡೆ ಹಾಕದಿದ್ದಲ್ಲಿ 2030ರ ವೇಳೆಗೆ ಭೂಮಿಯೇ ಸರ್ವನಾಶವಾಗಬಹುದೆಂಬ ವಿಶ್ವಸಂಸ್ಥೆಯ ಗಂಭೀರ ಎಚ್ಚರಿಕೆ ಬೆನ್ನಲ್ಲೇ ರಾಜ್ಯ ಸರ್ಕಾರ ಪರಿಸರ ರಕ್ಷಣೆಯತ್ತ ಚಿತ್ತ ಹರಿಸಿದೆ. ತಾಪಮಾನ ಸವಾಲು, ಅದರಿಂದ ಕೃಷಿ ವಲಯದ ಮೇಲಾಗುವ ಪರಿಣಾಮ ಎದುರಿಸುವುದಕ್ಕಾಗಿ ಸೂಕ್ತ ತೀರ್ಮಾನ ಕೈಗೊಳ್ಳಲು ಇದೇ ಮೊದಲ ಬಾರಿ ಕೃಷಿ ಕ್ಯಾಬಿನೆಟ್ ಅಸ್ತಿತ್ವಕ್ಕೆ ತರಲು ತೀರ್ಮಾನಿಸಿದೆ.

ಹವಾಮಾನ ವೈಪರೀತ್ಯದಿಂದಾಗುವ ಪರಿಣಾಮಗಳ ಕುರಿತಂತೆ ತಜ್ಞರ ಸಮಿತಿ 2011ರಲ್ಲೇ ಸರ್ಕಾರಕ್ಕೆ ಕ್ರಿಯಾ ಯೋಜನೆಯ ವರದಿ ನೀಡಿದೆ. ಕೃಷಿ, ಅರಣ್ಯ, ಜಲ ಸಂಪನ್ಮೂಲ, ಇಂಧನ ಹೀಗೆ ವಿವಿಧ ಕ್ಷೇತ್ರಗಳ ಮೇಲೆ ಆಗುವ ಪರಿಣಾಮ ಹಾಗೂ ಕೈಗೊಳ್ಳಬೇಕಾದ ಕ್ರಮಗಳೇನೆಂಬ ಶಿಫಾರಸುಗಳನ್ನು ವರದಿ ಒಳಗೊಂಡಿದೆ.
ಕಳೆದ ಎಂಟು ವರ್ಷಗಳ ಅವಧಿಯಲ್ಲಿ ಮಂದಗತಿಯಲ್ಲಿ ಸಾಗಿರುವ ಅನುಷ್ಠಾನ ಪ್ರಕ್ರಿಯೆಯನ್ನು ಮತ್ತಷ್ಟು ಚುರುಕುಗೊಳಿಸಿ 2030ರ ವೇಳೆಗೆ ಎದುರಾಗಲಿರುವ ಅಪಾಯವನ್ನು ಸಾಧ್ಯವಾದಷ್ಟು ತಡೆಯುವ ಬಗ್ಗೆ ರ್ಚಚಿಸಲಾಗುತ್ತದೆ.
ಕ್ರಿಯಾ ಯೋಜನೆ ಅಂಶವೇನು?: ಹವಾಮಾನ ಬದಲಾವಣೆಗೆ ಸಂಬಂಧಿಸಿದಂತೆ ನೀಡಿರುವ ಕ್ರಿಯಾ ಯೋಜನೆ ಪ್ರಕಾರ 1950 ರಿಂದ 2000 ತನಕ ರಾಜ್ಯದಲ್ಲಿ 0.7 ಡಿಗ್ರಿ ಸೆಲ್ಸಿಯಸ್ ತಾಪಮಾನ ಹೆಚ್ಚಳವಾಗಿದೆ. 2001ರ ಪರಿಸ್ಥಿತಿ ಗಮನಿಸಿದಾಗ ಇದು ಮುಂದಿನ ಕೆಲವು ವರ್ಷಗಳಲ್ಲಿ 3 ರಿಂದ 4 ಡಿಗ್ರಿ ಸೆಲ್ಸಿಯಸ್ ತನಕ ಹೆಚ್ಚಳವಾಗಬಹುದು ಎಂಬ ಆತಂಕ ಮೂಡಿದೆ.
ಜಾಗತಿಕ ಒಪ್ಪಂದದ ಪ್ರಕಾರ ಮುಂದಿನ ನೂರು ವರ್ಷಗಳ ಅವಧಿಯಲ್ಲಿ 1.5 ಡಿಗ್ರಿ ಸೆಲ್ಸಿಯಸ್​ಗಿಂತ ಹೆಚ್ಚಳವಾಗಬಾರದು. ರಾಜ್ಯದ ವಿವಿಧ ಭಾಗಗಳಲ್ಲಿ ಪರಿಸರ ಕಾಪಾಡುವುದು, ಕೃಷಿಯಲ್ಲಿ ನೀರಿನ ಮಿತ ಬಳಕೆ, ಬೋರ್​ವೆಲ್​ಗಳಿಗೆ ನಿಯಂತ್ರಣ, ಹಸಿರು ಇಂಧನ ಬಳಕೆಯ ಹೆಚ್ಚಳದ ಮೂಲಕ ಕಾರ್ಬನ್ ಕಡಿಮೆ ಮಾಡುವ ಬಗ್ಗೆ ವಿವರಿಸಲಾಗಿದೆ.
ಏನಿದು ಕೃಷಿ ಕ್ಯಾಬಿನೆಟ್?
ಕೃಷಿ ಕ್ಷೇತ್ರದಲ್ಲಾಗುತ್ತಿರುವ ಬದಲಾವಣೆ ಗಮನಿಸಿ, ಅದಕ್ಕೆ ಪೂರಕವಾಗಿ ಕೆಲವು ಕ್ರಮ ಕೈಗೊಳ್ಳುವ ಉದ್ದೇಶದಿಂದ ಕೃಷಿ ಹಾಗೂ ಕೃಷಿಗೆ ಸಂಬಂಧಿಸಿದ ಇಲಾಖೆಗಳ ಸಚಿವರನ್ನು ಒಳಗೊಂಡ ಸಮಿತಿ ಅಸ್ತಿತ್ವಕ್ಕೆ ಬರಲಿದೆ. ಇದೇ ಕೃಷಿ ಕ್ಯಾಬಿನೆಟ್. ಹವಾಮಾನ ವೈಪರೀತ್ಯ ತಡೆಯಬೇಕಾದರೆ ಇಲಾಖೆಗಳ ನಡುವೆ ಸಮನ್ವಯ ಮುಖ್ಯ. ಈಗ ಸಮನ್ವಯತೆ ಕೊರತೆ ಇದೆ. ಆದ್ದರಿಂದಲೇ ಕೃಷಿ ಕ್ಯಾಬಿನೆಟ್ ರಚಿಸಲಾಗುತ್ತಿದೆ. ಅದಕ್ಕೆ ಮುಖ್ಯಮಂತ್ರಿ ಅಧ್ಯಕ್ಷರಾಗಿರುತ್ತಾರೆ. ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಿ ಪರಿಶೀಲನೆ ಮಾಡಲಾಗುತ್ತದೆ. ಕೃಷಿ ಕ್ಯಾಬಿನೆಟ್ ರಚನೆ ಮಾಡುವ ಕಡತ ಸಚಿವ ಸಂಪುಟದಲ್ಲಿ ಮಂಡನೆಯಾಗಿ ಒಪ್ಪಿಗೆ ಸಿಕ್ಕಿದೆ. ಸದ್ಯದಲ್ಲೇ ಆದೇಶ ಹೊರಬೀಳಲಿದೆ.
ದಂಡಕ್ಕೆ ಶಿಫಾರಸು
ಪರಿಸರದ ಮೇಲಾಗುತ್ತಿರುವ ಹಾನಿಯನ್ನು ಗಂಭೀರವಾಗಿ ಪರಿಗಣಿಸಿರುವ ಪರಿಸರ ಇಲಾಖೆ ವಾಹನಗಳ ಮಾಲಿನ್ಯ ತಪಾಸಣೆಯನ್ನು ಕಡ್ಡಾಯ ಮಾಡುವುದರ ಜತೆಗೆ ದಂಡದ ಮೊತ್ತವನ್ನು ಶೇ. 100 ಹೆಚ್ಚಿಸುವುದು ಹಾಗೂ ವಾಹನಗಳ ಸಂಖ್ಯೆ ಕಡಿಮೆ ಮಾಡುವಂತೆ ಪೊಲೀಸ್ ಹಾಗೂ ಸಾರಿಗೆ ಇಲಾಖೆಗೆ ಶಿಫಾರಸು ಮಾಡಲು ಸಜ್ಜಾಗಿದೆ.
ಆಹಾರಕ್ಕೆ ಆತಂಕ
ಜಾಗತಿಕ ತಾಪಮಾನ ಹೆಚ್ಚಳ ಅನೇಕ ರೀತಿಯ ಪರಿಣಾಮ ಬೀರಲಿದೆ. ರಾಜ್ಯದಲ್ಲಿ 2030ರ ವೇಳೆಗೆ ಶೇ. 38 ಅರಣ್ಯ ಪ್ರದೇಶದ ಮೇಲೆ ಪರಿಣಾಮವಾದರೆ, ಆಹಾರ ಧಾನ್ಯದ ಉತ್ಪಾದನೆ ಶೇ. 45ರ ತನಕ ನಷ್ಟವಾಗಬಹುದೆಂಬ ಅಂದಾಜಿದೆ. ಪ್ರವಾಹ ಹಾಗೂ ಬರದ ಆತಂಕ ಇಮ್ಮಡಿಗೊಂಡಿದೆ.
ಶಿಫಾರಸುಗಳೇನು?
# ಮಣ್ಣು ಆರೋಗ್ಯ ಕಾಪಾಡುವುದು
# ನೀರಿನ ಮಿತ ಬಳಕೆ
# ಹೆಚ್ಚು ನೀರು ಬಳಸುವ ಕಬ್ಬು ಮತ್ತು ಭತ್ತ ನಿಯಂತ್ರಣ
# ಬೋರ್​ವೆಲ್ ನೀರು ಬಳಸಿ ವಾಣಿಜ್ಯ ಬೆಳೆ ಬೆಳೆಯದಂತೆ ನಿರ್ಬಂಧ
# ಸಿರಿಧಾನ್ಯಗಳ ಬೆಳೆಯುವುದು ಹೆಚ್ಚಿಸುವುದು
# ಬೆಳೆ ಪದ್ಧತಿಯಲ್ಲಿ ಬದಲಾವಣೆ ತರಬೇಕು
# ಕಬ್ಬು ಹಾಗೂ ಇತರೆ ಬೆಳೆಗಳಿಗೆ ಬೆಂಕಿ ಹಾಕುವುದನ್ನು ತಡೆಯುವುದು
# ಸಗಣಿಯಿಂದ ಮಿಥೇನ್ ಉತ್ಪಾದನೆ ಜಾಸ್ತಿಯಿದ್ದು ಅದರ ಸಂಸ್ಕರಣೆ
# ತೋಟಗಾರಿಕೆ ಬೆಳೆಗಳಿಗೂ ನೀರು ಬಳಕೆ ಹೆಚ್ಚಾಗದಂತೆ ನೋಡಿಕೊಳ್ಳುವುದು
# ವಾಹನಗಳ ಸಂಖ್ಯೆ ಕಡಿಮೆ ಮಾಡಬೇಕು,
# 10 ವರ್ಷ ಮೀರಿದ ಡೀಸೆಲ್ ವಾಹನನಿಯಂತ್ರಣ
# ಅರಣ್ಯೀಕರಣ ಹೆಚ್ಚಾಗಬೇಕು
# ಹಸಿರು ಇಂಧನ ಪ್ರೋತ್ಸಾಹಿಸಲು ಸೋಲಾರ್, ಪವನ ವಿದ್ಯುತ್​ಗೆ ಹೆಚ್ಚಿನ ಒತ್ತು
ಸಿರಿಧಾನ್ಯ ಬೆಳೆಯಲು ಪ್ರೋತ್ಸಾಹ ನೀಡಲು ನಿರ್ಧರಿಸಲಾಗಿದೆ. ಬೆಳೆ ಪದ್ಧತಿಯಲ್ಲಿ ಬದಲಾವಣೆಗೆ ರೂಪುರೇಷೆ ಸಿದ್ಧಪಡಿಸಲಾಗುತ್ತಿದೆ. ಇಲಾಖೆಗಳ ಸಮನ್ವಯ ತರುವ ಉದ್ದೇಶದಿಂದಲೇ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಅಗ್ರಿ ಕ್ಯಾಬಿನೆಟ್ ರಚನೆಯಾಗುತ್ತಿದೆ. ಮುಂದಿನ ತಿಂಗಳು ಮೊದಲ ಸಭೆ ನಡೆಸಲಾಗುತ್ತದೆ.
| ಎನ್.ಎಚ್. ಶಿವಶಂಕರರೆಡ್ಡಿ ಕೃಷಿ ಸಚಿವ
ಜಾಗತಿಕ ತಾಪಮಾನ ಬದಲಾವಣೆಯಿಂದಾಗುವ ಪರಿಣಾಮಗಳ ಬಗ್ಗೆ 2011ರಲ್ಲೇ ವರದಿ ನೀಡಲಾಗಿದೆ. ಆ ಕ್ರಿಯಾ ಯೋಜನೆಯ ಜಾರಿಗೆ ಸರ್ಕಾರ ಆದ್ಯತೆ ನೀಡಬೇಕಾಗಿದೆ. ಜಿಲ್ಲಾವಾರು ಕೃಷಿ ಬದಲಾವಣೆಗೆ ಶಿಫಾರಸು ಮಾಡಲಾಗಿದೆ.
| ಡಾ.ಎಂ.ಬಿ. ರಾಜೇಗೌಡ ಕೃಷಿ ಹವಾಮಾನ ತಜ್ಞ
ಹಸಿರೀಕರಣವೊಂದೇ ಹವಾಮಾನ ಬದಲಾವಣೆಗೆ ಪರಿಹಾರ ಎಂಬುದನ್ನು ಮನಗಂಡೇ 10 ಕೋಟಿ ಸಸಿಗಳನ್ನು ನೆಡುವ ನಿರ್ಧಾರಕ್ಕೆ ಬರಲಾಗಿದೆ. ರಸ್ತೆ ಬದಿಯಲ್ಲಿ ಮರಗಳನ್ನು ಬೆಳೆಸಲಾಗುತ್ತದೆ. ತಾಲೂಕುವಾರು ನರ್ಸರಿ ಸ್ಥಾಪಿಸಲಾಗುತ್ತದೆ.
| ಆರ್. ಶಂಕರ್ ಅರಣ್ಯ ಸಚಿವ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...