ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ವಿಶ್ವಸಂಸ್ಥೆ ಪ್ರಶಸ್ತಿ ರೈತರಿಗೆ ಸಮರ್ಪಣೆ,

ವಿಶ್ವಸಂಸ್ಥೆಯ ಪರಿಸರ ವಿಭಾಗ ನೀಡುವ ಚಾಂಪಿಯನ್ಸ್ ಆಫ್ ದ ಅರ್ಥ್ ಪ್ರಶಸ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ಸ್ವೀಕರಿಸಿದರು. ದೆಹಲಿಯಲ್ಲಿ ಆಯೋಜನೆಗೊಂಡಿದ್ದ ವಿಶೇಷ ಸಮಾರಂಭದಲ್ಲಿ ವಿಶ್ವಸಂಸ್ಥೆ ಮಹಾಪ್ರಧಾನ ಕಾರ್ಯದರ್ಶಿ ಅಂಟೋನಿಯೋ ಗುಟೆರೆಸ್ ಈ ಪ್ರಶಸ್ತಿ ಪ್ರದಾನ ಮಾಡಿದರು.
ಸ್ಥಿರ ಅಭಿವೃದ್ಧಿ ಮತ್ತು ಹವಾಮಾನ ಬದಲಾವಣೆ ಪರಿಣಾಮಗಳನ್ನು ತಡೆಗಟ್ಟಲು ದೂರದೃಷ್ಟಿ ನಿಲುವು ತಳೆದಿರುವ ಕಾರಣ ಪ್ರಧಾನಿ ಮೋದಿ ಅವರಿಗೆ ವಿಶ್ವಸಂಸ್ಥೆಯ ಈ ಪ್ರಶಸ್ತಿ ಲಭಿಸಿದೆ. ಅಂತಾರಾಷ್ಟ್ರೀಯ ಸೌರ ಮಹಾಒಕ್ಕೂಟ (ಐಎಸ್​ಎ) ರಚನೆಯಲ್ಲಿ ಮೋದಿ ಪ್ರಮುಖ ಪಾತ್ರ ವಹಿಸಿದ್ದರು. 2022ರ ವೇಳೆಗೆ ಭಾರತದಲ್ಲಿ ಒಮ್ಮೆ ಬಳಸಬಹುದಾದ ಪ್ಲಾಸ್ಟಿಕ್​ನ್ನು ಸಂಪೂರ್ಣ ನಿಷೇಧಿಸುವುದಾಗಿ ಪ್ರಧಾನಿ ಘೋಷಿಸಿದ್ದರು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪ್ರಧಾನಿ, ಹವಾಮಾನ ವೈಪರೀತ್ಯ ನಿಯಂತ್ರಿಸಲು ಶ್ರಮಿಸುತ್ತಿರುವ ಅಸಂಖ್ಯಾತ ಭಾರತೀಯರು, ವಿಶೇಷವಾಗಿ ರೈತ ಸಮುದಾಯದವರಿಗೆ ಈ ಪ್ರಶಸ್ತಿಯನ್ನು ಸಮರ್ಪಿಸುತ್ತಿರುವುದಾಗಿ ಹೇಳಿದರು. ಹವಾಮಾನ ಮತ್ತು ವಿಪತ್ತು ನಮ್ಮ ಸಂಸ್ಕೃತಿಯೊಂದಿಗೆ ತಳಕು ಹಾಕಿಕೊಂಡಿವೆ. ನಮ್ಮೆಲ್ಲ ಆಚರಣೆಗಳಲ್ಲಿ ಈ ಅಂಶಗಳು ಸ್ಪಷ್ಟವಾಗಿವೆ ಎಂದರು.
ನ್ಯೂಯಾರ್ಕ್​ನಲ್ಲಿ ಸೆ. 26ರಂದು ನಡೆದ ವಿಶ್ವಸಂಸ್ಥೆಯ 73ನೇ ಮಹಾಧಿವೇಶನದಲ್ಲಿ ಅಂತಾರಾಷ್ಟ್ರೀಯ ಸೌರ ಮಹಾಒಕ್ಕೂಟ ರೂಪಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಇಮಾನ್ಯುಯಲ್ ಮ್ಯಾಕ್ರಾನ್ ಅವರಿಗೆ ಜಂಟಿಯಾಗಿ ಚಾಂಪಿಯನ್ಸ್ ಆಫ್ ದ ಅರ್ಥ್ ಅವಾರ್ಡ್ ಘೋಷಿಸಲಾಗಿತ್ತು.
ಹವಾಮಾನ ಬದಲಾವಣೆಯಿಂದಾಗಿ ಮಾನವನ ಅಸ್ತಿತ್ವಕ್ಕೆ ಒದಗಬಹುದಾದ ಆಪತ್ತಿನ ಅರಿವು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗಿದೆ. ಇಂತಹ ವಿಪತ್ತನ್ನು ನಿವಾರಿಸುವ ಮಾಗೋಪಾಯವೂ ಅವರಿಗೆ ತಿಳಿದಿದೆ. ಸೂಕ್ತ ಕಾರ್ಯಯೋಜನೆ ರೂಪಿಸಿ ಅವುಗಳನ್ನು ಅನುಷ್ಠಾನಗೊಳಿಸುವ ಮೂಲಕ ವಿಶ್ವದ ಇತರೆ ನಾಯಕರಿಗಿಂತ ಅವರು ಭಿನ್ನವಾಗಿ ನಿಲ್ಲುತ್ತಾರೆ.
| ಅಂಟೋನಿಯೋ ಗುಟೆರೆಸ್ ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...