ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ದೇಶದ ಸೇನೆಗೆ ತ್ರಿಶಕ್ತಿ,

ಸೈಬರ್, ಬಾಹ್ಯಾಕಾಶ, ವಿಶೇಷ ಕಾರ್ಯಪಡೆ ರಚನೆ >>
ನವದೆಹಲಿ: ದೇಶದ ರಕ್ಷಣಾ ವ್ಯವಸ್ಥೆಗೆ ಸವಾಲು ಒಡ್ಡುತ್ತಿರುವ ಆಧುನಿಕ ಬೆದರಿಕೆಗಳನ್ನು ಎದುರಿಸುವ ಉದ್ದೇಶದಿಂದ ಭಾರತೀಯ ಸೇನಾಪಡೆಯಲ್ಲಿ ಮೂರು ಹೊಸ ವಿಭಾಗಗಳನ್ನು ರಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಸೈಬರ್ ಏಜೆನ್ಸಿ (ಡಿಸಿಎ), ಬಾಹ್ಯಾಕಾಶ ಏಜೆನ್ಸಿ (ಡಿಎಸ್​ಎ) ಹಾಗೂ ವಿಶೇಷ ಕಾರ್ಯಪಡೆಗಳ (ಎಸ್​ಒಡಿ) ರಚನೆಗೆ ಭದ್ರತಾ ವಿಚಾರಗಳಿಗೆ ಸಂಬಂಧಿಸಿದ ಸಚಿವ ಸಂಪುಟ ಸಮಿತಿಯು ಸಮ್ಮತಿಸಿದೆ. ಅಮೆರಿಕ ಹಾಗೂ ಚೀನಾ ಬಳಿಕ ಆಧುನಿಕ ಭದ್ರತಾ ಸವಾಲುಗಳನ್ನು ಎದುರಿಸಲು ಈ 3 ವಿಶೇಷ ವಿಭಾಗಗಳನ್ನು ಹೊಂದುತ್ತಿರುವ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ.
2013ರಲ್ಲಿ ಶಿಫಾರಸು: ಐದು ವರ್ಷಗಳ ಹಿಂದೆ ಭದ್ರತಾ ಪಡೆಗಳ ಮುಖ್ಯಸ್ಥರ ಸಮಿತಿಯು ಕೇಂದ್ರ ಸರ್ಕಾರಕ್ಕೆ ಈ ವಿಭಾಗಗಳ ರಚನೆಗೆ ಶಿಫಾರಸು ಮಾಡಿತ್ತು. ಸೇನೆಗೆ ಆಧುನಿಕತೆಯ ಸ್ಪರ್ಶ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ಹೇಳಿದ್ದರು. ಇದರ ಭಾಗವಾಗಿ ಈ ಮೂರು ವಿಭಾಗಗಳನ್ನು ಆರಂಭಿಸಲಾಗುತ್ತಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಿಂದಲೇ ಈ ವಿಭಾಗಗಳು ಕಾರ್ಯನಿರ್ವಹಿಸಲಿವೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸೈಬರ್, ಬಾಹ್ಯಾಕಾಶ ಭದ್ರತೆ
ಆಧುನಿಕ ತಂತ್ರಜ್ಞಾನ ಹಾಗೂ ಬದಲಾದ ಯುದ್ಧ ಕಾರ್ಯತಂತ್ರಗಳಿಂದಾಗಿ ಸೈಬರ್ ಹಾಗೂ ಬಾಹ್ಯಾಕಾಶ ಭದ್ರತೆ ಆದ್ಯತೆಯ ವಿಚಾರವಾಗಿದೆ. ಶತ್ರುಪಡೆಯನ್ನು ನಿಯಂತ್ರಿಸಲು ವಿಶೇಷ ತರಬೇತಿ ಹೊಂದಿದ ಕಾರ್ಯಪಡೆ ಅವಶ್ಯಕವಾಗಿದೆ. ಹೀಗಾಗಿ ಭೂ, ನೌಕೆ ಹಾಗೂ ವಾಯು ಸೇನೆಯಲ್ಲಿನ ಮಾನವ ಸಂಪನ್ಮೂಲಗಳನ್ನು ಬಳಸಿಕೊಂಡು ಈ ಮೂರು ವಿಭಾಗಗಳನ್ನು ರಚಿಸಲಾಗುತ್ತಿದೆ. ನೆರೆ ದೇಶಗಳು ಹಾಗೂ ವಿದೇಶಗಳಿಂದ ಎದುರಾಗುವ ಸೈಬರ್ ದಾಳಿ ಹಾಗೂ ಇತರ ಅಂತರ್ಜಾಲ ಮೂಲದ ಆತಂಕಗಳ ಮೇಲೆ ರಕ್ಷಣಾ ಸೈಬರ್ ಏಜೆನ್ಸಿ ನಿಗಾ ಇರಿಸಲಿದೆ. ಇನ್ನೊಂದೆಡೆ ಪ್ರತಿಯೊಂದು ಮುಂದುವರಿದ ರಾಷ್ಟ್ರಗಳು ಬಾಹ್ಯಾಕಾಶದಲ್ಲಿ ತಮ್ಮ ಪ್ರಾಬಲ್ಯ ಸಾಧಿಸಲು ಉತ್ಸುಕವಾಗಿವೆ. ಚೀನಾ, ರಷ್ಯಾ ರಾಷ್ಟ್ರಗಳ ಬಾಹ್ಯಾಕಾಶ ಕ್ಷೇತ್ರದಲ್ಲಿನ ಅಭಿವೃದ್ಧಿ ಜಾಗತಿಕ ಆತಂಕಕ್ಕೂ ಕಾರಣವಾಗುತ್ತಿದೆ. ಈ ನಿಟ್ಟಿನಲ್ಲಿ ಇಸ್ರೋ ಹಾಗೂ ಡಿಆರ್​ಡಿಒ ಜತೆಗೆ ಬಾಹ್ಯಾಕಾಶ ಭದ್ರತೆ ವಿಚಾರವಾಗಿ ರಕ್ಷಣಾ ಬಾಹ್ಯಾಕಾಶ ಏಜೆನ್ಸಿ ಕಾರ್ಯನಿರ್ವಹಿಸಲಿದೆ. ಚೀನಾ ಹಾಗೂ ಆಮೆರಿಕ ಸೇನೆಯು ಈ ವಿಭಾಗಗಳನ್ನು ಹೊಂದಿದ್ದು, ಬೇರೆ ರಾಷ್ಟ್ರಗಳ ಬಾಹ್ಯಾಕಾಶ ಯೋಜನೆಯ ಮೇಲೆ ನಿಗಾ ಇಡುತ್ತವೆ.
ವಿಭಾಗ ರಚನೆ ಹೀಗೆ
ಮೂರೂ ಸೇನಾಪಡೆಗಳ ಮುಖ್ಯಸ್ಥರ ಸಮಿತಿ ಯೊಂದಿರುತ್ತದೆ. ಅದನ್ನು ಚೀಫ್ ಆಫ್ ಸ್ಟಾಫ್ ಕಮಿಟಿ ಎಂದು ಕರೆಯುತ್ತಾರೆ. ಈ ಕಮಿಟಿಯ ಮುಖ್ಯಸ್ಥರು ನೂತನ ವಿಭಾಗಗಳನ್ನು ಮುನ್ನಡೆಸಲಿದ್ದಾರೆ. ಮೂರು ಸೇನಾಪಡೆಗಳಲ್ಲಿನ ತಜ್ಞರನ್ನು ವಿಭಾಗಗಳಿಗೆ ಆಯ್ಕೆ ಮಾಡಲಾಗುತ್ತದೆ.
ಏನಿದು ವಿಶೇಷ ಕಾರ್ಯಪಡೆ?
ಪ್ರಸ್ತುತ ಭಾರತೀಯ ಸೇನಾಪಡೆಗಳಲ್ಲಿ ಪ್ಯಾರಾ ಕಮಾಂಡೊ, ಮರೀನ್ ಕಮಾಂಡೊ ಹಾಗೂ ಗರುಡ್ ಕಮಾಂಡೊ ಎಂಬ ವಿಭಾಗವಿದೆ. ಈ ಮೂರು ವಿಭಾಗಗಳು ಭೂ, ನೌಕೆ ಹಾಗೂ ವಾಯುಪಡೆಯ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸುತ್ತವೆ. ಇದರ ಬದಲಿಗೆ ಯುದ್ಧ ಮತ್ತು ತುರ್ತು ಸಂದರ್ಭಗಳಲ್ಲಿನ ವಿಶೇಷ ಕಾರ್ಯಾಚರಣೆಗೆಂದು ‘ವಿಶೇಷ ಕಾರ್ಯಪಡೆ(ಸ್ಪೆಷಲ್ ಆಪರೇಷನ್ ಡಿವಿಜನ್)’ ರಚಿಸಲಾಗುತ್ತಿದೆ. ಭೂ, ವಾಯು ಹಾಗೂ ಜಲ ಯುದ್ಧ ನಡೆಸಲು ಕಾರ್ಯಪಡೆಗೆ ತರಬೇತಿ ನೀಡಲಾಗುತ್ತದೆ. ಎನ್​ಎಸ್​ಜಿ ಕೂಡ ಇದರ ಭಾಗವಾಗಲಿದೆ.
ಎನ್​ಎಸ್​ಜಿ (ರಾಷ್ಟ್ರೀಯ ಭದ್ರತಾ ಪಡೆಯ ) ಅಗತ್ಯ ಹೆಚ್ಚುತ್ತಿರುವ ಸಂದರ್ಭ ದಲ್ಲಿ ರಕ್ಷಣಾ ಕ್ಷೇತ್ರದಲ್ಲಿ ಇಂತಹದೊಂದು ಬದಲಾವಣೆ ಅಗತ್ಯವಿತ್ತು. ಇದರಿಂದ ಸೇನೆಗೆ ಇನ್ನಷ್ಟು ಶಕ್ತಿ ದೊರೆಯಲಿದೆ.
| ಲೆಫ್ಟಿನೆಂಟ್ ಜನರಲ್ ಕೆ.ಜೆ.ಸಿಂಗ್, ಸೇನೆಯ ಮಾಜಿ ಕಮಾಂಡರ್

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...