ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ನಷ್ಟದ ಸುಳಿಯಲ್ಲಿ ಎಸ್ಕಾಂಗಳು

5002 ಕೋಟಿ ರೂ. ಖೋತಾ | ಮಂಗಳೂರು ಕಂಪನಿಗೆ ಮಾತ್ರ ಲಾಭ
|ರುದ್ರಣ್ಣ ಹರ್ತಿಕೋಟೆ
ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಗೆ ಕಲ್ಲಿದ್ದಲು ಸಮಸ್ಯೆ ಕಾಡುತ್ತಿರುವ ಬೆನ್ನಲ್ಲೇ ವಿದ್ಯುತ್ ಆಡಿಟ್​ಗಳು ಕಾಲಕಾಲಕ್ಕೆ ನಡೆಯದೆ ವಿದ್ಯುತ್ ಸರಬರಾಜು ಕಂಪನಿಗಳು (ಎಸ್ಕಾಂ) ತೀವ್ರ ನಷ್ಟದಲ್ಲಿವೆ. ಇದು ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿ ಣಮಿಸಿದೆ.
ಕೆಇ ಆರ್​ಸಿ ಇತ್ತೀಚೆಗೆ ತಾನೇ ಎರಡು ಬಾರಿ ದರ ಏರಿಕೆಗೆ ಅನುಮತಿ ನೀಡಿದರೂ ಅನುಕೂಲವಾಗಿಲ್ಲ. ಹೀಗಾಗಿ ಎಸ್ಕಾಂಗಳನ್ನು ನಷ್ಟದಿಂದ ಹೊರ ತರಲು ಸರ್ಕಾರ ದಾರಿ ಹುಡುಕುತ್ತಿದೆ. ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಹೊರತುಪಡಿಸಿ ಉಳಿದ ನಾಲ್ಕು ಕಂಪನಿಗಳು ಅನುಭವಿಸುತ್ತಿರುವ ನಷ್ಟ 5002 ಕೋಟಿ ರೂ. ಆಗಿದೆ.
ಎರಡು ಬಾರಿ ದರ ಏರಿಕೆ: ಪ್ರತಿ ವರ್ಷ ನಷ್ಟ ತೋರಿಸಿಯೇ ದರ ಏರಿಸಲಾಗುತ್ತದೆ. ಈ ವರ್ಷ ಎರಡು ಬಾರಿ ಏರಿಸಿದ್ದು, ಒಮ್ಮೆ ಪ್ರತಿ ಯೂನಿಟ್​ಗೆ 24 ಪೈಸೆ ಏರಿಕೆಯಾದರೆ, ಮತ್ತೊಮ್ಮೆ 15 ಪೈಸೆ ಏರಿಕೆಯಾಗಿದೆ. ವಿದ್ಯುತ್ ಸರಬರಾಜು ಕಂಪನಿಗಳು ಸಲ್ಲಿಸುವ ಪ್ರಸ್ತಾವನೆ ಆಧಾರದಲ್ಲಿಯೇ ಕೆಇಆರ್​ಸಿ ಒಪ್ಪಿಗೆ ನೀಡಿರುತ್ತದೆ. ಆದಾಯಕ್ಕೂ ಮೀರಿ ಖರ್ಚುಗಳಿವೆಯೇ ಎಂಬ ಪ್ರಶ್ನೆ27 ಮೂಡಿದೆ. ವಿದ್ಯುತ್ ಖರೀದಿ, ಹೊಸ ಯೋಜನೆಗಳಿಗೆ ಹೂಡಿಕೆ ಹೀಗೆ ವಿವಿಧ ಉದ್ದೇಶಗಳಿಂದ ನಷ್ಟವಾಗುತ್ತಿದೆ.
ಯಾವ ಸಂಸ್ಥೆ? ಎಷ್ಟು ನಷ್ಟ?: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ 234 ಕೋಟಿ ರೂ., ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ 2645 ಕೋಟಿ ರೂ., ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ 1512 ಕೋಟಿ ರೂ. ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿ 611 ಕೋಟಿ ರೂ.ಗಳ ನಷ್ಟದಲ್ಲಿವೆ. ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಮಾತ್ರ 131 ಕೋಟಿ ರೂ.ಗಳ ಲಾಭದಲ್ಲಿದೆ.
ಸಬ್ಸಿಡಿ ಖರೀದಿಗೆ: ಸರ್ಕಾರ ಕೃಷಿ ಪಂಪ್​ಸೆಟ್​ಗಳಿಗೆ ಸಬ್ಸಿಡಿ ನೀಡುತ್ತದೆ. ಈ ಸಾಲಿನಲ್ಲಿ 9000 ಕೋಟಿ ರೂ.ಗಳಿಗಿಂತ ಹೆಚ್ಚಿನ ಮೊತ್ತವನ್ನು ವಿದ್ಯುತ್ ಸಹಾಯ ಧನಕ್ಕಾಗಿ ಬಳಸುತ್ತಿದೆ. ಪ್ರತಿ ತಿಂಗಳು ಬಿಡುಗಡೆ ಮಾಡುವ ಈ ಮೊತ್ತವನ್ನು ಪೂರ್ತಿ ವಿದ್ಯುತ್ ಖರೀದಿಗಾಗಿ ಕೆಪಿಸಿ ಎಲ್​ಗೆ ಬಿಡುಗಡೆ ಮಾಡುವಂತೆ ಸೂಚನೆ ನೀಡಲಾಗಿದೆ ಎಂದು ಇಂಧನ ಇಲಾಖೆಯ ಮೂಲಗಳು ಹೇಳುತ್ತವೆ.
ವಿದ್ಯುತ್ ಆಡಿಟ್​ಗೆ ಸೂಚನೆ: ಕಾಲಕಾಲಕ್ಕೆ ವಿದ್ಯುತ್ ಆಡಿಟ್ ನಡೆಯದಿರುವುದೇ ನಷ್ಟಕ್ಕೆ ಮೂಲ ಕಾರಣವೆಂಬ ಅಭಿಪ್ರಾಯದ ಹಿನ್ನೆಲೆಯಲ್ಲಿ ಆಡಿಟ್ ಮಾಡಲು ನಿರ್ಧರಿಸಲಾಗಿದೆ.
ಜಲ ವಿದ್ಯುತ್ ಉತ್ಪಾದನೆ ಹೆಚ್ಚಳಕ್ಕೆ ಸೂಚನೆ
ಕಲ್ಲಿದ್ದಲು ಕೊರತೆಯಿಂದ ಶಾಖೋತ್ಪನ್ನ ವಿದ್ಯುತ್ ಹಾಗೂ ಗಾಳಿ ಕೊರತೆ ಯಿಂದ ಪವನ ವಿದ್ಯುತ್ ಉತ್ಪಾದನೆಯಲ್ಲಿ ಕುಸಿತವಾಗಿದ್ದು, ಜಲ ವಿದ್ಯುತ್ ಉತ್ಪಾದನೆ ಹೆಚ್ಚಿಸಲು ನಿರ್ಧರಿಸಲಾಗಿದೆ. ವಿದ್ಯುತ್ ಉತ್ಪಾದನಾ ಜಲಾಶಯಗಳಲ್ಲಿ ಇರುವ ನೀರಿನ ಮಟ್ಟದಿಂದ ಮೇ ಕೊನೆಯ ತನಕ ಪ್ರತಿ ನಿತ್ಯ 30 ದಶಲಕ್ಷ ಯೂನಿಟ್ ಉತ್ಪಾದಿಸಬಹುದು. ಆದರೆ, ಕಲ್ಲಿದ್ದಲು ಲಭ್ಯವಾಗುವವರೆಗೆ 40 ದಶಲಕ್ಷ ಯೂನಿಟ್ ವಿದ್ಯುತ್ ಉತ್ಪಾದನೆ ಮಾಡಲು ನಿರ್ಧರಿಸಲಾಗಿದೆ. ಬೇಡಿಕೆ ಹೆಚ್ಚುತ್ತಿದೆ. ಈಗ 207 ದಶಲಕ್ಷ ಯೂನಿಟ್​ಗೆ ಬೇಡಿಕೆ ಪ್ರಮಾಣ ಹೆಚ್ಚಿದೆ. ಪೀಕ್ ಅವರ್​ನಲ್ಲಿ 10 ಸಾವಿರ ಮೆಗಾ ವಾಟ್​ಗೆ ತಲುಪಿದೆ. ಬೇಡಿಕೆ ಇನ್ನಷ್ಟು ಹೆಚ್ಚಾಗಬಹುದೆಂದು ಅಂದಾಜು ಮಾಡಲಾಗಿದೆ.
ವಿದ್ಯುತ್ ಸರಬರಾಜು ಹಾಗೂ ವಿತರಣೆಯಲ್ಲಿನ ಸೋರಿಕೆ ನಷ್ಟ ತಡೆಯಲು ನಿರಂತರ ಜ್ಯೋತಿ ಯೋಜನೆ ಜಾರಿಗೆ ತರಲಾಗಿತ್ತು. ಈ ಯೋಜನೆಯಲ್ಲಿ ಸಾಕಷ್ಟು ಹಣ ವೆಚ್ಚವಾದರೂ ಸೋರಿಕೆಯ ನಷ್ಟ ಇನ್ನೂ ಶೇ. 10ರಿಂದ 30 ಉಳಿದಿದೆ. ಶೇ. 15ಕ್ಕಿಂತ ಕಡಿಮೆ ಇರಬೇಕು ಎಂಬುದು ನಿರಂತರ ಜ್ಯೋತಿ ರೂಪಿಸಿದಾಗ ಮಾಡಿಕೊಂಡಿದ್ದ ನಿಯಮ. ಬೇರೆ ಬೇರೆ ಉದ್ದೇಶದ ಬಳಕೆಗೆ ಬೇರೆ ಬೇರೆ ಫೀಡರ್​ಗಳಿರಬೇಕು. ಪ್ರತಿಯೊಂದು ಫೀಡರ್​ಗೂ ಮೀಟರ್ ಅಳವಡಿಸಿರಬೇಕು ಎಂಬ ಸೂಚನೆ ನೀಡಲಾಗಿತ್ತು. ಆದರೆ, ಇನ್ನೂ ಆ ನಿಯಮ ಜಾರಿಗೆ ಬಾರದಿದ್ದರಿಂದ 2 ತಿಂಗಳ ಗಡುವು ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...