ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಕೋಮಲ ಕಣ್ಣಿನ ಬಗ್ಗೆ ಇರಲಿ ಕಾಳಜಿ,

ಬಾಹ್ಯ ಜಗತ್ತಿನ ಸೌಂದರ್ಯ ಆಸ್ವಾದಿಸಲು ದೃಷ್ಟಿ ಅನಿವಾರ್ಯ. ಆದರೆ, ದೇಶದಲ್ಲಿ ಶೇ. 40 ಮಂದಿ ಕಣ್ಣಿನ ಸಮಸ್ಯೆ ಎದುರಿಸುತ್ತಿದ್ದು, ಕೋಟ್ಯಂತರ ಜನರು ಕತ್ತಲೆಯಲ್ಲಿ ಜೀವನ ಸಾಗಿಸುತ್ತಿದ್ದಾರೆ. ಅತ್ಯಂತ ಸೂಕ್ಷ್ಮ ಅಂಗವಾದ ಕಣ್ಣಿನ ಬಗ್ಗೆ ಕಾಳಜಿ ವಹಿಸುವುದು ಅತ್ಯವಶ್ಯಕ. ಈ ಉದ್ದೇಶದಿಂದಲೇ ಪ್ರತಿವರ್ಷ ವಿಶ್ವ ಆರೋಗ್ಯ ಸಂಸ್ಥೆೆ ‘ವಿಶ್ವ ದೃಷ್ಟಿ ದಿನ’ ಆಚರಿಸುತ್ತಿದೆ. ರಾಷ್ಟ್ರೀಯ ಅಂಧತ್ವ ನಿಯಂತ್ರಣಾ ಕಾರ್ಯಕ್ರಮವನ್ನು 1976ರಿಂದ ಜಾರಿಗೊಳಿಸಲಾಗಿದ್ದು, ಅಂಧತ್ವ ಪ್ರಮಾಣವನ್ನು 2020ರೊಳಗೆ ಶೇ.0.3ಕ್ಕೆ ಇಳಿಸುವ ಗುರಿಯನ್ನು ಹಾಕಿಕೊಳ್ಳಲಾಗಿದೆ. ವಕ್ರೀಕಾರಕ ದೋಷ, ಕಣ್ಣಿನ ನವೆ, ಬಾಲ್ಯ ಕುರುಡುತನ, ದೃಷ್ಟಿ ದೋಷ, ಗ್ಲಾಕೋಮಾ, ಮಧುಮೇಹ ರೆಟಿನೋಪತಿ, ವಯಸ್ಸಿಗೆ ಸಂಬಂಧಿಸಿದ ಅಂಧತ್ವವನ್ನು ಮುಖ್ಯವಾಗಿ ಕೇಂದ್ರೀಕರಿಸಲಾಗಿದೆ. 2020ಕ್ಕೆ ಕಾರ್ನಿಯಾ ಅಂಧತ್ವಮುಕ್ತ
ಪ್ರತಿವರ್ಷ ಅಂದಾಜು 20,000 ಜನ ಕಾರ್ನಿಯ ಅಂಧತ್ವ ಪೀಡಿತರಾಗುತಿದ್ದಾರೆ. ಶೇ.60 ಕಾರ್ನಿಯ ಅಂಧರು 12 ವರ್ಷಕ್ಕಿಂತ ಕೆಳಗಿನ ಮಕ್ಕಳು. ಕಣ್ಣಿನ ಸಮಸ್ಯೆಗೆ ಪರಿಹಾರಕ್ಕೆ ನೇತ್ರದಾನದ ಬಗ್ಗೆ ಸಹ ಜಾಗೃತಿ ಮೂಡಿಸಲಾಗುತ್ತಿದೆ. ದೇಶದಲ್ಲಿ ಪ್ರಸ್ತುತ 50ಲಕ್ಷ ಜನ ದೃಷ್ಟಿ ದೋಷ ಸಮಸ್ಯೆ ಎದುರಿಸುತ್ತಿದ್ದಾರೆ. ಇನ್ನು 15 ಲಕ್ಷ ಜನ ಕಾರ್ನಿಯಾ ಅಂಧತ್ವದಿಂದ ಬಳಲುತ್ತಿದ್ದಾರೆ. 2015ರ ಅಂಕಿ ಅಂಶ ಪ್ರಕಾರ ಜಗತ್ತಿನ ಜನಸಂಖ್ಯೆ 730 ಕೋಟಿ. ಈ ಪೈಕಿ 3.6 ಕೋಟಿ ಜನ ಅಂಧರಾಗಿದ್ದು, 21.7 ಕೋಟಿ ಮಂದಿಗೆ ದೃಷ್ಟಿ ದೋಷವಿದೆ.
ನೇತ್ರದಾನ ಮಾಡಿ…
ಯಾವುದೇ ವಯಸ್ಸು ಅಥವಾ ಲಿಂಗ ಭೇದ ಇಲ್ಲದೇ ನೇತ್ರದಾನ ಮಾಡಬಹುದು. ನಿಧನ ಹೊಂದಿದ 6 ಗಂಟೆಯೊಳಗೆ ನೇತ್ರದಾನ ಮಾಡಬೇಕು. ನೇತ್ರದಾನ ಸರಳವಾದ ಪ್ರಕ್ರಿಯೆಯಾಗಿದ್ದು,10 ರಿಂದ 15 ನಿಮಿಷ ಸಾಕು. ಕಣ್ಣಿನ ತಪಾಸಣೆ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಣ್ಣಿ್ಣ ಸಮಸ್ಯೆ ನಿವಾರಣೆಗೆ ಹಲವು ಕಾರ್ಯಕ್ರಮ ಹಮ್ಮಿಕೊಂಡಿದೆ. ಸರ್ಕಾರಿ ಆಸ್ಪತ್ರೆ, ಜಿಲ್ಲಾ ಆರೋಗ್ಯ ಸೊಸೈಟಿ ಹಾಗೂ ಕರಾರು ಮಾಡಿಕೊಂಡಿರುವ ಸರ್ಕಾರೇತರ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗುತ್ತದೆ. ಮಕ್ಕಳಲ್ಲಿನ ಕುರುಡುತನಕ್ಕೆ ಸರ್ಕಾರಿ ಹಾಗೂ ನೊಂದಾಯಿತ ಸರ್ಕಾರೇತರ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ದೊರೆಯಲಿದೆ. ಶಾಲಾ ಮಕ್ಕಳಿಗೆ ಕಣ್ಣಿನ ತಪಾಸಣೆ ನಡೆಸಿ, ಉಚಿತವಾಗಿ ಕನ್ನಡಕ ವಿತರಿಸಲಾಗುತ್ತದೆ. ಹಿರಿಯ ನಾಗರಿಕರಿಗೂ ಕೂಡ ಉಚಿತ ಕನ್ನಡಕ ನೀಡಲಾಗುತ್ತದೆ.
ಮಧುಮೇಹ, ವಿಟಮಿನ್ ಎ ಕೊರತೆ, ವಂಶವಾಹಿ ಸಹಿತ ವಿವಿಧ ಕಾರಣದಿಂದ ಕಣ್ಣಿನ ಸಮಸ್ಯೆ ಬರುತ್ತದೆ. ಶಾಲಾ ಹಂತದಲ್ಲಿಯೇ ಮಕ್ಕಳ ಕಣ್ಣನ್ನು ಪರೀಕ್ಷೆ ಮಾಡಿಸಬೇಕು. ಸುದೀರ್ಘವಾಗಿ ಇಲೆಕ್ಟ್ರಾನಿಕ್ ಡಿವೈಸ್ ವೀಕ್ಷಿಸುವುದರಿಂದ ಕಾರ್ನಿಯಾಕ್ಕೆ ಹಾನಿಯಾಗುತ್ತದೆ. ಹಬ್ಬಗಳ ಸಂದರ್ಭದಲ್ಲಿ ಪಟಾಕಿ ಹೊಡೆಯುವಾಗ ಜಾಗೃತೆ ವಹಿಸಬೇಕು.
| ಡಾ. ಸುಜಾತಾ ರಾಥೋಡ್
ಮಿಂಟೋ ಕಣ್ಣಿನ ಆಸ್ಪತ್ರೆ ನಿರ್ದೇಶಕಿ ದಿನಾಚರಣೆಯ ಉದ್ದೇಶ
ವಿಶ್ವ ದೃಷ್ಟಿ ದಿನಾ ಚರಣೆಯನ್ನು ಪ್ರತಿ ವರ್ಷ ಅಕ್ಟೋಬರ್ ತಿಂಗಳ ಎರಡನೇ ಗುರುವಾರ ಆಚರಿಸಲಾಗುತ್ತದೆ. ಲಯನ್ಸ್ ಕ್ಲಬ್ ಇಂಟರ್​ನ್ಯಾಷನಲ್ ಫೌಂಡೇಷನ್ ಮೊಟ್ಟ ಮೊದಲ ಬಾರಿಗೆ ‘ಸೈಟ್ ಫಸ್ಟ್ ಕ್ಯಾಂಪೇನ್’ ಮೂಲಕ ‘ವಿಶ್ವ ದೃಷ್ಟಿ ದಿನ’ ಆಚರಿಸಿತ್ತು. 2004ನೇ ಇಸವಿ ತನಕವೂ ಈ ಆಚರಣೆಗೆ ಯಾವುದೇ ನಿರ್ದಿಷ್ಟ ವಿಷಯಗಳು ಇರಲಿಲ್ಲ. 2005ರಲ್ಲಿ ‘ದೃಷ್ಟಿಯ ಹಕ್ಕು’ ಎಂಬ ವಿಷಯದಡಿ ಜಾಗೃತಿ ಮೂಡಿಸುವ ಆಚರಣೆ ನಡೆದಿತ್ತು. ವಿಶ್ವ ಆರೋಗ್ಯ ಸಂಸ್ಥೆಯ ನೆರವಿನೊಂದಿಗೆ ಪ್ರತಿವರ್ಷ ಇದನ್ನು ಮುಂದುವರಿಸಲಾಗುತ್ತಿದೆ. ‘ಎಲ್ಲೆಡೆ ಕಣ್ಣಿನ ಆರೈಕೆ’ ಎಂಬುದು ಈ ವರ್ಷದ ಆಚರಣೆಯ ಧ್ಯೇಯ ವಾಕ್ಯವಾಗಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...