ಕೇಂದ್ರ ಸರ್ಕಾರ ನೂತನವಾಗಿ ಸ್ಥಾಪಿಸಿರುವ ರಾಷ್ಟ್ರೀಯ ಹಣಕಾಸು ಲೆಕ್ಕಪರಿಶೋಧನಾ ಗುಣಮಟ್ಟ ಜಾರಿ ಪ್ರಾಧಿಕಾರದ (ಎನ್.ಎಫ್.ಆರ್.ಎ) ಮುಖ್ಯಸ್ಥರಾಗಿ ಕರ್ನಾಟಕ ಕೇಡರ್ನ ನಿವೃತ್ತ ಐಎಎಸ್ ಅಧಿಕಾರಿ ಆರ್. ಶ್ರೀಧರನ್ ಅವರನ್ನು ನೇಮಕಗೊಳಿಸಲಾಗಿದೆ. 1983ರ ಐಎಎಸ್ ಬ್ಯಾಚ್ನವರಾಗಿದ್ದ ಆರ್. ಶ್ರೀಧರನ್, ಮುಂದಿನ ಮೂರು ವರ್ಷಗಳ ಅವಧಿಗೆ ಈ ಪ್ರಾಧಿಕಾರದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಲೆಕ್ಕಪರಿಶೋಧನೆ ಕ್ಷೇತ್ರಗಳಲ್ಲಿ ಕಂಡುಬರುವ ಹಣಕಾಸು ಅವ್ಯವಹಾರ, ಹಗರಣಗಳ ಪರಿಶೀಲನೆ, ಸಮರ್ಪಕ ನೀತಿ ನಿಯಮಗಳ ಅಳವಡಿಕೆ ಸೇರಿ ಬೃಹತ್ ಕಂಪನಿಗಳ ಹಣಕಾಸು ಲೆಕ್ಕ ಪರಿಶೋಧನೆ ನಿಯಂತ್ರಣ ಅಗತ್ಯದ ಬಗ್ಗೆ ಕೇಂದ್ರ ಸರ್ಕಾರದ ವಲಯದಲ್ಲಿ ಚರ್ಚೆಗಳು ನಡೆದಿದ್ದವು. ಈ ನಿಟ್ಟಿನಲ್ಲಿ ಎನ್.ಎಫ್.ಆರ್.ಎ. ಸ್ಥಾಪಿಸುವ ಬಗ್ಗೆ ಕ್ರಮ ಕೈಗೊಂಡಿದ್ದ ಸರ್ಕಾರ, ಮಾರ್ಚ್ 1ರಂದು ಕೇಂದ್ರ ಸಚಿವ ಸಂಪುಟದಲ್ಲಿ ಪ್ರಾಧಿಕಾರ ರಚನೆಗೆ ಅನುಮೋದನೆ ನೀಡಿತ್ತು.
ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ