ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಮತ್ತೆ ಬೊಫೋರ್ಸ್,

80 ದಶಕದಲ್ಲಿ ರಾಜೀವ್ ಗಾಂಧಿ ಪ್ರಧಾನಿಯಾಗಿದ್ದ ವೇಳೆ ರಾಜಕೀಯ ವಲಯದಲ್ಲಿ ಬಿರುಗಾಳಿ ಎಬ್ಬಿಸಿದ್ದ ಬೊಫೋರ್ಸ್ ಫಿರಂಗಿ ಖರೀದಿ ಹಗರಣದ ವಿಚಾರಣೆಯನ್ನು ಸುಪ್ರೀಂಕೋರ್ಟ್ ಅ. 12ರಂದು ವಿಚಾರಣೆ ಆರಂಭಿಸಲಿದೆ.
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮತ್ತು ಇತರರನ್ನು ದೆಹಲಿ ಹೈಕೋರ್ಟ್ 2004ರ ಫೆಬ್ರುವರಿಯಲ್ಲಿ ದೋಷಮುಕ್ತ ಗೊಳಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಮೇಲ್ಮನವಿ ವಿಚಾರಣೆಯನ್ನು ಸುಪ್ರೀಂAಕೋರ್ಟ್ ನಡೆಸಲಿದೆ. ದೆಹಲಿ ಹೈಕೋರ್ಟ್ ತೀರ್ಪು ನೀಡಿದ 14 ವರ್ಷಗಳ ನಂತರ ಈ ಪ್ರಕರಣ ಮತ್ತೆ ಕೋರ್ಟ್ ಮುಂದೆ ಬರುತ್ತಿದೆ.
ಆರೋಪಿಗಳಾದ ಹಿಂದುಜಾ ಸೋದರರ ವಿರುದ್ಧ ಪುರಾವೆಗಳು ದೊರೆತಿವೆ. ಆದ್ದರಿಂದ ಮೇಲ್ಮನವಿ ವಿಚಾರಣೆಯನ್ನು ಶೀಘ್ರ ಆರಂಭಿಸಬೇಕು ಎಂದು ಸಿಬಿಐ ಕೋರಿತ್ತು. ಬ್ರಿಟನ್ ಉದ್ಯಮಿಗಳಾದ ಶ್ರೀಚಂದ್, ಗೋಪಿಚಂದ್ ಮತ್ತು ಪ್ರಕಾಶ್ ಚಂದ್ ಹಿಂದುಜಾ ಸೋದರರ ಮೂಲಕ ಆಗಿನ ಪ್ರಧಾನಿ ರಾಜೀವ್ ಗಾಂಧಿಗೆ ಕಿಕ್​ಬ್ಯಾಕ್ (ಲಂಚ) ನೀಡಲಾಗಿತ್ತು ಎಂದು ಆರೋಪಿಸಲಾಗಿದೆ.
ಸಿಬಿಐ ತಡೆದಿದ್ದ ಕಾಂಗ್ರೆಸ್: ದೆಹಲಿ ಹೈಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಆಗ ಅಧಿಕಾರದಲ್ಲಿದ್ದ ಯುಪಿಎ ಸರ್ಕಾರ ಅವಕಾಶ ನೀಡಿರಲಿಲ್ಲ. ಹೀಗಾಗಿ ಮೇಲ್ಮನವಿ ಸಲ್ಲಿಸಿರಲಿಲ್ಲ ಎಂದು ಸಿಬಿಐ ಹೇಳಿಕೊಂಡಿದೆ. ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದ ನಾಲ್ಕು ವರ್ಷಗಳ ನಂತರ, ಅಂದರೆ ಕಳೆದ ಫೆಬ್ರುವರಿಯಲ್ಲಿ ಸಿಬಿಐ ಮೇಲ್ಮನವಿ ಸಲ್ಲಿಸಿತ್ತು.
ಹಗರಣದ ಹಿನ್ನೆಲೆ: 1986ರಲ್ಲಿ ಸ್ವೀಡನ್​ನ ಸೇನಾ ಶಸ್ತ್ರ ತಯಾರಿಕಾ ಕಂಪನಿ ಎಬಿ ಬೊಫೋರ್ಸ್​ನಿಂದ 155 ಎಂಎಂನ 410 ಬೊಫೋರ್ಸ್ ಫಿರಂಗಿಗಳನ್ನು ಭಾರತ ಖರೀದಿಸಿತ್ತು. ಇದು ಆಗಿನ ಕಾಲದಲ್ಲಿ ಸ್ವೀಡನ್​ಗೆ ಲಭಿಸಿದ ಅತಿ ದೊಡ್ಡ ರಕ್ಷಣಾ ಸಲಕರಣೆ ಪೂರೈಕೆ ಒಪ್ಪಂದ ಆಗಿತ್ತು. ಎಬಿ ಬೊಫೋರ್ಸ್ ಕಂಪನಿ ಭಾರತ ಮತ್ತು ಸ್ವೀಡನ್ ಸರ್ಕಾರಗಳ ಪ್ರಮುಖರಿಗೆ ಲಂಚ (ಕಿಕ್​ಬ್ಯಾಕ್) ನೀಡಿ, ಈ ಗುತ್ತಿಗೆ ಪಡೆದಿತ್ತು ಎಂಬ ವಿಚಾರ ಬೆಳಕಿಗೆ ಬಂದಿತ್ತು. ಭಾರತದ ಆಗಿನ ಪ್ರಧಾನಿ ರಾಜೀವ್ ಗಾಂಧಿ, ಹಿಂದುಜಾ ಸೋದರರು ಸೇರಿ ಇನ್ನಿತರರಿಗೆ -ಠಿ; 64 ಕೋಟಿ ಸಂದಾಯವಾಗಿದೆ ಎಂಬುದು ಹಗರಣದ ತಿರುಳು. ರಾಜೀವ್ ಗಾಂಧಿ ಕುಟುಂಬಕ್ಕೆ ಆಪ್ತರಾಗಿದ್ದ ಇಟಲಿ ಮೂಲದ ವ್ಯಾಪಾರಸ್ಥ ಒಟ್ಟಾವಿಯೋ ಕ್ವಾಟ್ರೋಚಿ ಒಪ್ಪಂದದ ಮಧ್ಯವರ್ತಿಯಾಗಿದ್ದವರು. ಇವರ ಮೂಲಕ ಭಾರತದ ಪ್ರಮುಖರಿಗೆ ಕಿಕ್​ಬ್ಯಾಕ್ ಸಂದಾಯವಾಗಿತ್ತು ಎಂದು ಆರೋಪಿಸಲಾಗಿತ್ತು.
2004ರ ತೀರ್ಪು ಏನಿತ್ತು..?
ಹಿಂದುಜಾ ಸೋದರರು ಲಂಚ ನೀಡಿದ್ದಾರೆಂಬ ಆರೋಪವನ್ನು ಸಾಬೀತು ಪಡಿಸಲು ತನಿಖಾ ಸಂಸ್ಥೆ ವಿಫಲವಾಗಿದೆ. ಆದ್ದರಿಂದ ಆರೋಪಿಗಳನ್ನು ದೋಷಮುಕ್ತಗೊಳಿಸಲಾಗಿದೆ ಎಂದು ದೆಹಲಿ ಹೈಕೋರ್ಟ್ 2004ರ ತೀರ್ಪಿನಲ್ಲಿ ಹೇಳಿತ್ತು. ಈ ತೀರ್ಪನ್ನು ಪ್ರಶ್ನಿಸಿ ವಕೀಲ ಅಜಯ್ ಅಗರ್ವಾಲ್ ಅರ್ಜಿ ಸಲ್ಲಿಸಿದ್ದರು. ಅಗರ್ವಾಲ್ 2014ರ ಚುನಾವಣೆಯಲ್ಲಿ ರಾಯ್ ಬರೇಲಿ ಕ್ಷೇತ್ರದಲ್ಲಿ ಸೋನಿಯಾ ಗಾಂಧಿ ವಿರುದ್ಧ ಸ್ಪರ್ಧಿಸಿದ್ದರು.
ಚುನಾವಣಾ ವಿಷಯ
ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಘೋಷಣೆಯಾದ ಬೆನ್ನಿಗೆ ಬೊಫೋರ್ಸ್ ಹಗರಣದ ಮೇಲ್ಮನವಿ ವಿಚಾರಣೆಗೆ ಬರುತ್ತಿರುವುದು ರಾಜಕೀಯ ಮಹತ್ವ ಪಡೆದುಕೊಂಡಿದೆ. ಚುನಾವಣೆಯಲ್ಲಿ ರಾಜಕೀಯ ಪಕ್ಷಗಳಿಗೆ ಇದು ಪ್ರಮುಖ ವಿಷಯವಾಗುವ ಸಾಧ್ಯತೆ ಇದೆ. ಕಾಂಗ್ರೆಸ್ ನಾಯಕರು ರಫೇಲ್ ಪ್ರಕರಣವನ್ನು ಪ್ರಮುಖವಾಗಿ ಪ್ರಸ್ತಾಪಿಸುತ್ತಿದ್ದು, ಇದಕ್ಕೆ ಪ್ರತಿಯಾಗಿ ಬಿಜೆಪಿಯವರು ಬೊಫೋರ್ಸ್ ಮೇಲ್ಮನವಿ ವಿಚಾರಣೆ ವಿಚಾರ ಮುಂದಿಟ್ಟುಕೊಂಡು ವಾಗ್ದಾಳಿ ನಡೆಸುವ ಸಾಧ್ಯತೆಯಿದೆ. ಬೊಫೋರ್ಸ್ ಹಗರಣದ ಪರಿಣಾಮ 1989ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿತು.
ತನಿಖೆ ಹಾದಿ
ಪ್ರಕರಣ ತನಿಖೆ ನಡೆಸಿದ ಸಿಬಿಐ, 1999ರ ಅಕ್ಟೋಬರ್​ನಲ್ಲಿ ಮೊದಲ ಆರೋಪ ಪಟ್ಟಿ ಸಲ್ಲಿಸಿತು. ಇದರಲ್ಲಿ ಕ್ವಾಟ್ರೋಚಿ, ಹಿಂದುಜಾ ಸೋದರರು, ವಿನ್ ಛಡ್ಡಾ, ರಾಜೀವ್ ಗಾಂಧಿ, ರಕ್ಷಣಾ ಕಾರ್ಯದರ್ಶಿ ಎಸ್.ಕೆ.ಭಟ್ನಾಗರ್ ಮತ್ತು ಇತರರನ್ನು ಹೆಸರಿಸಲಾಗಿತ್ತು. 2001ರಲ್ಲಿ ವಿನ್ ಛಡ್ಡಾ ಮತ್ತು ಭಟ್ನಾಗಾರ್ ಮೃತಪಟ್ಟರು. ಸಿಬಿಐ ಆರೋಪ ಪಟ್ಟಿ ಸಲ್ಲಿಸುವುದಕ್ಕೂ 8 ವರ್ಷ (1991ರ ಮೇ) ಮೊದಲು ಎಲ್​ಟಿಟಿಇ ನಡೆಸಿದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ರಾಜೀವ್ ಗಾಂಧಿ ಹತ್ಯೆಗೀಡಾಗಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....