ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ದೂರಗಾಮಿ ಚಿಂತನೆಯಾಗಲಿ,

ದಿನಂಪ್ರತಿ ಏರುತ್ತಿರುವ ತೈಲ ದರವನ್ನು ನಿಯಂತ್ರಿಸಬೇಕು ಎಂಬ ಆಗ್ರಹ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಲೇ ಇದೆ. ಆದರೆ ಅಪಾರ ಪ್ರಮಾಣದ ತೆರಿಗೆ ಹಣ ಕೈತಪ್ಪುತ್ತದೆಂಬ ಕಾರಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ಬಗ್ಗೆ ಅರೆಮನಸ್ಸು ಹೊಂದಿದ್ದವು. ಹೀಗಿದ್ದರೂ, ಇನ್ನು ಒತ್ತಡ ತಡೆಯಲಾಗದು ಎನಿಸಿಯೋ ಏನೋ ಕೇಂದ್ರ ಸರ್ಕಾರ ತೈಲದ ಮೇಲಿನ ಅಬಕಾರಿ ಸುಂಕವನ್ನು ಒಂದೂವರೆ ರೂಪಾಯಿಯಷ್ಟು ತಗ್ಗಿಸಿದೆ ಮತ್ತು ಮಾರಾಟದ ಕಮಿಷನ್​ನಲ್ಲಿ ಒಂದು ರೂಪಾಯಿ ಕಡಿಮೆ ಮಾಡುವಂತೆ ತೈಲ ಮಾರಾಟ ಕಂಪನಿಗಳಿಗೆ ಸೂಚಿಸಿದೆ. ಹೀಗಾಗಿ ಒಟ್ಟು ಎರಡೂವರೆ ರೂಪಾಯಿ ತಗ್ಗಿದಂತಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಿಂದ ಬಸವಳಿದಿರುವ ಜನರಿಗೆ ಇದು ಸ್ವಲ್ಪ ಸಮಾಧಾನದ ಸಂಗತಿಯಾದರೂ, ತೈಲ ದರದ ಮೇಲೆ ಬಾಹ್ಯ ಪರಿಣಾಮಗಳೂ ಇರುವುದರಿಂದ ಈ ಖುಷಿ ತಾತ್ಕಾಲಿಕ ಎನ್ನಬಹುದು. ತೈಲೋತ್ಪನ್ನಗಳ ಮೇಲೆ ಕೇಂದ್ರ ಮತ್ತು ಆಯಾ ರಾಜ್ಯ ಸರ್ಕಾರಗಳು ಬಗೆ ಬಗೆ ತೆರಿಗೆ ವಿಧಿಸುತ್ತವೆ. ಈಗ ಅಬಕಾರಿ ಸುಂಕ ತಗ್ಗಿಸಿರುವ ಕೇಂದ್ರ, ರಾಜ್ಯಗಳಿಗೂ ತೆರಿಗೆ ತಗ್ಗಿಸುವಂತೆ ಸಲಹೆ ಮಾಡಿದೆ. ಕೆಲ ರಾಜ್ಯಗಳು ಈ ಮನವಿಗೆ ಓಗೊಟ್ಟು ತೆರಿಗೆಯಲ್ಲಿ ಕಡಿತ ಮಾಡಿವೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ, ಅಂತಾರಾಷ್ಟ್ರೀಯ ಆರ್ಥಿಕ ರಂಗದ ಬೆಳವಣಿಗೆಗಳು ಮುಂತಾದ ಸಂಗತಿಗಳು ತೈಲ ದರದ ಮೇಲೆ ಪರಿಣಾಮ ಬೀರುತ್ತವೆ. ಇನ್ನೊಂದೆಡೆ, ಈಗ ಭಾರತದ ರೂಪಾಯಿ ದುರ್ಬಲವಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಏರಿದರೆ ಇಲ್ಲಿಯೂ ಪೆಟ್ರೋಲ್, ಡೀಸೆಲ್ ದರ ಏರುತ್ತದೆ. ಹೀಗಾಗಿ ಈಗ ಸಿಕ್ಕಿರುವ ಬೆಲೆ ಇಳಿಕೆ ಸಮಾಧಾನ ಮುಂದೆಯೂ ಇರುತ್ತದೆ ಎನ್ನಲಾಗದು. ಆದ್ದರಿಂದ ಇಂಧನ ಅವಲಂಬನೆಯನ್ನು ಆದಷ್ಟು ತಗ್ಗಿಸುವುದು ಇದ್ದುದರಲ್ಲಿ ಕಾರ್ಯಸಾಧ್ಯ ಪರಿಹಾರವಾಗುತ್ತದೆ.
ಸಾರ್ವಜನಿಕ ಸಾರಿಗೆಗೆ ಮತ್ತಷ್ಟು ಒತ್ತು, ಎಥೆನಾಲ್ ಬಳಕೆಗೆ ಉತ್ತೇಜನ-ಪ್ರೋತ್ಸಾಹ ಮುಂತಾದ ಕ್ರಮಗಳ ಮೂಲಕ ಇಂಧನ ಅವಲಂಬನೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸರ್ಕಾರಗಳು ಮುಂದಡಿ ಇಡಬೇಕಾದುದು ಸದ್ಯದ ತುರ್ತ. ವಿದ್ಯುಚ್ಚಾಲಿತ ವಾಹನಗಳಿಗೆ ಕೇಂದ್ರ ಸರ್ಕಾರ ಈಗಾಗಲೇ ಕೆಲ ರಿಯಾಯಿತಿ ಪ್ರಕಟಿಸಿರುವುದು ಗಮನಾರ್ಹ. ಆದರೆ ಚಾರ್ಜಿಂಗ್ ಸ್ಟೇಷನ್​ಗಳ ಕೊರತೆಯಿಂದಾಗಿ ಇ-ವಾಹನಗಳು ನಿರೀಕ್ಷೆಯಷ್ಟು ರಸ್ತೆಗಿಳಿಯುತ್ತಿಲ್ಲ. ಇ-ವಾಹನಗಳು ದೊಡ್ಡ ಸಂಖ್ಯೆಯಲ್ಲಿ ಬಂದರೆ ವಿದ್ಯುತ್ ಉತ್ಪಾದನೆಯೂ ಹೆಚ್ಚಬೇಕಾಗುತ್ತದೆ. 2030ರ ವೇಳೆಗೆ, ಭಾರತಕ್ಕೆ ಅಗತ್ಯವಾದ ಶೇ.40 ವಿದ್ಯುತ್ತನ್ನು ನವೀಕರಿಸಬಹುದಾದ ಇಂಧನ ಮೂಲಗಳಿಂದಲೇ ಉತ್ಪಾದಿಸಲು ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿರುವುದು ಗಮನಾರ್ಹ. ಸದ್ಯ ಭಾರತ ಇಂಧನ ಆಮದಿಗಾಗಿ ವಾರ್ಷಿಕ ಸುಮಾರು 5 ಲಕ್ಷ ಕೋಟಿ ರೂ.ಗಳನ್ನು ತೆರುತ್ತಿದೆ. ಮತ್ತೊಂದೆಡೆ, ಸಾರ್ವಜನಿಕರು ಸಹ ಇಂಧನ ಬಳಕೆಗೆ ಸ್ವಯಂನಿಯಂತ್ರಣ ವಿಧಿಸಿಕೊಳ್ಳುವತ್ತ ಆಲೋಚಿಸಬೇಕು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...