ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಏರ್ ನೇವಿಗೇಷನ್ ಸರ್ವಿಸ್ನ (ಎಎಐ) ಸದಸ್ಯರಾಗಿ ವಿನೀತ್ ಗುಲಾಟಿ ನೇಮಕವಾಗಿದ್ದಾರೆ. ಕಳೆದ ಶುಕ್ರವಾರ ಅವರು ಅಧಿಕಾರ ವಹಿಸಿಕೊಂಡರು. ಇದಕ್ಕೂ ಮುನ್ನ ಅವರು ಎಎಐನಲ್ಲಿ ಕಾರ್ಯಕಾರಿ ನಿರ್ದೇಶಕ (ವೈಮಾನಿಕ ಸಾರಿಗೆ ನಿರ್ವಹಣೆ), ಪ್ರಧಾನ ವ್ಯವಸ್ಥಾಪಕ (ವೈಮಾನಿಕ ಸಾರಿಗೆ ಸಂಚಾರ ನಿರ್ವಹಣೆ) ಮತ್ತು ವಿವಿಧ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ವೈಮಾನಿಕ ಸಾರಿಗೆ ನಿಯಂತ್ರಕರಾಗಿ ಕಾರ್ಯನಿರ್ವಹಿಸಿದ್ದಾರೆ. 1985ರಲ್ಲಿ ಏರೋಡ್ರೋಮ್ ಆಫೀಸರ್ ಆಗಿ ನೇಮಕಗೊಂಡ ನಂತರದ ಮೂರು ದಶಕಗಳಲ್ಲಿ ವೈಮಾನಿಕ ಸಾರಿಗೆ ಸೇವೆಗಳು, ವಿಮಾನ ನಿಲ್ದಾಣ ಕಾರ್ಯಾಚರಣೆ ಮತ್ತು ನಿರ್ವಹಣೆ ಕ್ಷೇತ್ರದಲ್ಲಿ ಅನುಭವ ಪಡೆದಿದ್ದಾರೆ. ಭಾರತದ ಏರ್ ನೇವಿಗೇಷನ್ ಸ್ಟ್ರಾಟಜಿಕ್ ಪ್ಲಾನ್ 2020 ರೂಪಿಸಿದವರಲ್ಲಿ ಇವರು ಪ್ರಮುಖರು.
ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ