ವಿಷಯಕ್ಕೆ ಹೋಗಿ

ಜ್ಞಾನ ಕಾರಂಜಿ::: ಹತ್ಯೆಗೀಡಾದರೂ ಉಂಟು ವಿಮೆ ಪರಿಹಾರ!, ಕೊಲೆ ಕೂಡ ಆಕಸ್ಮಿಕ ಸಾವು, ಎನ್​ಸಿಡಿಆರ್​ಸಿ ಮಹತ್ವದ ತೀರ್ಪು

| ಕೆ. ರಾಘವ ಶರ್ಮ
ನವದೆಹಲಿ: ಆಕಸ್ಮಿಕ ಸಾವಿಗೆ ಜೀವವಿಮೆ ಮಾಡಿಸಿಕೊಂಡ ವ್ಯಕ್ತಿ ಒಂದೊಮ್ಮೆ ಹತ್ಯೆಗೊಳಗಾದರೂ ವಿಮಾ ಕಂಪನಿಗಳು ಜೀವವಿಮೆಯ ಹಕ್ಕಿನ ಹಣವನ್ನು ಆತನ ಕುಟುಂಬಸ್ಥರಿಗೆ ಪಾವತಿಸುವುದು ಕಡ್ಡಾಯ ಎಂದು ರಾಷ್ಟ್ರೀಯ ಗ್ರಾಹಕರ ಬಿಕ್ಕಟ್ಟು ಪರಿಹಾರ ಆಯೋಗ (ಎನ್.ಸಿ.ಡಿ.ಆರ್.ಸಿ) ಮಹತ್ವದ ತೀರ್ಪಿತ್ತಿದೆ. ಈ ಆದೇಶ ವಿಮಾ ಹಣ ನೀಡಲು ಹತ್ತು ಹಲವು ನೆಪ ಹೇಳಿ ನುಣುಚಿಕೊಳ್ಳುವ ವಿಮಾ ಕಂಪನಿಗಳಿಗೆ ಮುಟ್ಟಿಸಿರುವ ಬಿಸಿ ಎಂದೇ ವಿಶ್ಲೇಷಿಸಲಾಗುತ್ತಿದೆ.
ಆದೇಶವೇನು?: ವಿಮಾ ಕಂಪನಿಗಳು ತಮ್ಮ ನಿಯಮಾವಳಿಗಳಲ್ಲಿ ಹತ್ಯೆಯೆಂಬುದು ಆಕಸ್ಮಿಕ ಸಾವಿನ ವ್ಯಾಪ್ತಿಯಲ್ಲಿಲ್ಲ ಎಂಬ ಬಗ್ಗೆ ಸಮರ್ಪಕ ವಿವರಣೆ ನಮೂದಿಸಿದ್ದರಷ್ಟೇ ಹಣ ಪಾವತಿಯಿಂದ ವಿನಾಯಿತಿ ಪಡೆಯಬಹುದು. ಆದರೆ, ಈ ಅಂಶ ಇಲ್ಲದಿದ್ದರೆ ವಿಮೆ ಹಣ ಪಡೆಯುವುದು ಗ್ರಾಹಕರ ನ್ಯಾಯಬದ್ಧ ಹಕ್ಕಾಗುತ್ತದೆ. ಗ್ರಾಹಕರ ಮನವಿಯನ್ನು ಕಂಪನಿಗಳು ತಿರಸ್ಕರಿಸಲಾಗದೆಂದು ಆಯೋಗದ ನ್ಯಾಯಾಧೀಶ ಎಸ್.ಎಂ. ಕಂಠೀಕರ್ ಮತ್ತು ನ್ಯಾ. ದಿನೇಶ್ ಸಿಂಗ್ ಒಳಗೊಂಡ ದ್ವಿಸದಸ್ಯ ಪೀಠ ತಿಳಿಸಿದೆ.
ನಿಯಮ ಬದಲಾಗಲಿ
ವಿಮೆ ಹಣದ ಆಸೆಗಾಗಿ ಆತ್ಮಹತ್ಯೆಗೆ ಶರಣಾಗುವಂತಹ ಪ್ರಕರಣ ಬಿಟ್ಟು ಇತರ ಹಲವು ಕಾರಣಕ್ಕಾಗಿಯೂ ಜನರು ಆತ್ಮಹತ್ಯೆಗೆ ಶರಣಾಗುತ್ತಾರೆ. ಇಂತಹ ಪ್ರಕರಣಗಳನ್ನೂ ವಿಮೆ ವ್ಯಾಪ್ತಿಗೆ ತರಬೇಕೆಂಬ ಒತ್ತಾಯ ಹಲವು ದಿನಗಳಿಂದಲೂ ಕೇಳಿಬರುತ್ತಿದೆ. ಎನ್​ಸಿಡಿಆರ್​ಸಿನ ಆದೇಶದ ಬಳಿಕವಾದರೂ ವಿಮಾ ಕಂಪನಿಗಳು ನಿಯಮ ತಿದ್ದುಪಡಿ ಮಾಡಿಕೊಳ್ಳಬೇಕೆಂಬುದು ಗ್ರಾಹಕರ ಒತ್ತಾಸೆ.
ಏನಿದು ಪ್ರಕರಣ?
ಮಹಾರಾಷ್ಟ್ರ ಮೂಲದ ಬಲರಾಮ್ ಮುಲ್ಚಂದಾನಿ 2009ರ ಜನವರಿಯಲ್ಲಿ ಹತ್ಯೆಗೀಡಾಗಿದ್ದರು. ಇದಕ್ಕೂ ಮುನ್ನ 2008 ಮತ್ತು 2009ರ ನವೆಂಬರ್ ಅವಧಿಗೆ ಅನ್ವಯಿಸುವಂತೆ ರಾಯಲ್ ಸುಂದರಮ್ ಅಲಯನ್ಸ್ ಇನ್ಸುರೆನ್ಸ್ ಕಂಪನಿಯಿಂದ ಆಕಸ್ಮಿಕ ಸಾವಿನ ವ್ಯಾಪ್ತಿಯಲ್ಲಿ ವಿಮೆ ಮಾಡಿಕೊಂಡಿದ್ದರು. ಬಲರಾಮ್ ಹತ್ಯೆ ಬಳಿಕ ಅವರ ಪುತ್ರ ಪವನ್ ವಿಮೆ ಹಣಕ್ಕೆ ಮನವಿ ಮಾಡಿದ್ದರು. ಹತ್ಯೆಯನ್ನು ಆಕಸ್ಮಿಕ ಸಾವೆಂದು ಪರಿಗಣಿಸಲಾಗದೆಂದ ಕಂಪನಿ ಹಣ ನೀಡಲು ನಿರಾಕರಿಸಿತ್ತು. ಆಸ್ತಿ ವಿವಾದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಲರಾಮ್ ಹತ್ಯೆ ಆಗಿದೆ ಎಂಬುದು ಕಂಪನಿ ವಾದವಾಗಿತ್ತು. ಇದನ್ನು ಪ್ರಶ್ನಿಸಿ ಪವನ್ ಮಹಾರಾಷ್ಟ್ರ ರಾಜ್ಯ ಗ್ರಾಹಕರ ಬಿಕ್ಕಟ್ಟು ಪರಿಹಾರ ಆಯೋಗದ ಮೊರೆ ಹೋದಾಗ ವಿಚಾರಣೆ ನಡೆಸಿದ ಆಯೋಗ,ವಿಮಾ ಹಣ ಪಾವತಿಸುವಂತೆ ಕಂಪನಿಗೆ ಸೂಚಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ರಾಷ್ಟ್ರೀಯ ಗ್ರಾಹಕರ ಆಯೋಗದ ಮೊರೆ ಹೋಗಿದ್ದ ವಿಮಾ ಕಂಪನಿಯ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ ತೀರ್ಪಿನ ಅನುಷ್ಠಾನದ ಬಗ್ಗೆ 3 ತಿಂಗಳ ಒಳಗೆ ವರದಿ ಸಲ್ಲಿಸುವಂತೆ ಸೂಚಿಸಿದೆ.
ನಾಲ್ಕು ವಾರಗಳ ಗಡುವು
ಪವನ್​ಗೆ 4 ವಾರದಲ್ಲಿ 20 ಲಕ್ಷ ರೂ. ವಿಮೆ ಹಣದ ಜತೆಗೆ ಕಂಪನಿಯ ವಿಳಂಬ ಧೋರಣೆಯಿಂದಾಗಿ ಗ್ರಾಹಕ ಹತಾಶೆ ಅನುಭವಿಸಿದ್ದಕ್ಕಾಗಿ 2 ಲಕ್ಷ ರೂ ಪರಿಹಾರ ನೀಡಬೇಕೆಂದೂ ಆಯೋಗ ಸೂಚನೆ ನೀಡಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...