ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ ಗಡ ಮತ್ತು ಮಿಝೋರಾಂ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗೆ ಮತದಾನ ಎರಡು ಹಂತದಲ್ಲಿ ನಡೆಯಲಿದೆ ಎಂದು ಚುನಾವಣೆ ಆಯೋಗದ ಮುಖ್ಯ ಆಯುಕ್ತ ಓಂ ಪ್ರಕಾಶ್ ರಾವತ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಸೆಂಬರ್ 15ರೊಳಗೆ ಪಂಚ ರಾಜ್ಯಗಳ ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, ಡಿಸೆಂಬರ್ 11ಕ್ಕೆ ತೆಲಂಗಾಣ ಸೇರಿ ಐದು ರಾಜ್ಯಗಳ ಫಲಿತಾಂಶ ಪ್ರಕಟವಾಗಲಿದೆ. ಇಂದಿನಿಂದಲೇ ಚುನಾವಣೆ ನೀತಿಸಂಹಿತೆ ಜಾರಿಯಲ್ಲಿದೆ ಎಂದು ತಿಳಿಸಿದ್ದಾರೆ.
ಮಧ್ಯಪ್ರದೇಶ ಮತ್ತು ಮಿಝೋರಾಂನಲ್ಲಿ ಒಂದೇ ಹಂತದ ಮತದಾನ ನಡೆಯಲಿದ್ದು, ಛತ್ತೀಸ್ ಗಢದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಎಲ್ಲ ಚುನಾವಣೆಗಳು ನವೆಂಬರ್‌ನಲ್ಲಿಯೇ ನಡೆಯಲಿವೆ. ಮಧ್ಯಪ್ರದೇಶ ಮತ್ತು ವಿಝೋರಾಂನಲ್ಲಿ ನವೆಂಬರ್ 28ರಂದು ಮತದಾನ ನಡೆಯಲಿದ್ದು, ಛತ್ತೀಸ್‌ಗಢದಲ್ಲಿ ಮೊದಲನೇ ಹಂತವಾಗಿ ನವೆಂಬರ್ 12 ಮತ್ತು ಎರಡನೇ ಹಂತವಾಗಿ ನವೆಂಬರ್ 20ರಂದು ಮತದಾನ ನಡೆಯಲಿದೆ ಎಂದರು.
ರಾಜಸ್ತಾನ ಮತ್ತು ತೆಲಂಗಾಣದಲ್ಲಿ ಒಂದೇ ಹಂತದಲ್ಲಿ ಡಿಸೆಂಬರ್ 7ರಂದು ಚುನಾವಣೆ ನಡೆಯಲಿದೆ ಎಂದು ತಿಳಿಸಿದರು. (ಏಜೆನ್ಸೀಸ್)

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ