ಕಳೆದ ವರ್ಷ ಅಕ್ಟೋಬರ್ ಅಂತ್ಯದಲ್ಲಿ ರಾಜ್ಯಕ್ಕೆ ಹಿಂಗಾರು ಪ್ರವೇಶಿಸಿದ್ದು, ಈ ವರ್ಷ ಅವಧಿಗೆ ಮುನ್ನವೇ ಅಂದರೆ ಅ. 8ರಂದು ಪ್ರವೇಶಿಸುವ ಮುನ್ಸೂಚನೆ ಇದೆ. ಜತೆಗೆ ಅ.13ರ ಒಳಗೆ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಬೀಸುವುದರಿಂದ ಹಿಂಗಾರು ಮತ್ತಷ್ಟು ಚುರುಕಾಗುವ ನಿರೀಕ್ಷೆ ಇದ್ದು, ಬೆಂಗಳೂರು ನಗರ ಸೇರಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಬಹುದು. 2016ರಲ್ಲಿ ರಾಜ್ಯದಲ್ಲಿ ಹಿಂಗಾರು ತೀವ್ರ ಕೊರತೆಯಾಗಿತ್ತು. ಆದರೆ ಈ ವರ್ಷ ವಾಡಿಕೆ ಹಿಂಗಾರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅರಬ್ಬಿ ಸಮುದ್ರದ ಮಧ್ಯಭಾಗದಲ್ಲಿ ಅಬ್ಬರದ ಅಲೆಗಳು ಏಳುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಸಿದೆ. ಹೀಗಾಗಿ ಕಾರವಾರ, ಮುದಗಾ, ಬೇಲೆಕೇರಿ, ತದಡಿ, ಹೊನ್ನಾವರ, ಭಟ್ಕಳ ಮುಂತಾದ ಪ್ರಮುಖ ಬಂದರುಗಳಲ್ಲಿ ಕೆಲವು ಆಳ ಸಮುದ್ರ ದೋಣಿಗಳು ದಡದಲ್ಲೇ ಲಂಗರು ಹಾಕಿವೆ. ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣಕನ್ನಡ-ಉಡುಪಿ ಜಿಲ್ಲೆಯಲ್ಲಿ ಮೋಡ ಮುಸುಕಿದ ವಾತಾವರಣ ಮುಂದುವರಿದಿದ್ದು, ಕೆಲವೆಡೆ ಉತ್ತಮ ಮಳೆಯಾಗಿದೆ.
ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ