ದೇಶದಲ್ಲಿ ದಿನೇದಿನೆ ಹೆಚ್ಚುತ್ತಿರುವ ವಾಯುಮಾಲಿನ್ಯ ಹಲವಾರು ಸಮಸ್ಯೆಗಳನ್ನು ತಂದೊಡ್ಡಿದೆ. ವಾಯುಮಾಲಿನ್ಯದಿಂದಾಗಿ ಜನರಲ್ಲಿ ಹಲವು ಆರೋಗ್ಯದ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿದ್ದು, ಅದರಲ್ಲೂ ಮುಖ್ಯವಾಗಿ ಹೃದಯ ಸಂಬಂಧಿ ಕಾಯಿಲೆಗಳಲ್ಲಿ ವಾಯುಮಾಲಿನ್ಯ ಪ್ರಮುಖ ಪಾತ್ರ ವಹಿಸುತ್ತಿದೆ ಎಂಬುದು ಸಂಶೋಧನೆಯಿಂದ ಬಹಿರಂಗವಾಗಿದೆ.
ಲಾನ್ಸೆಟ್ ಗ್ಲೋಬಲ್ ಹೆಲ್ತ್ ಎಂಬ ಅಂತಾರಾಷ್ಟ್ರೀಯ ವೈದ್ಯಕೀಯ ಪತ್ರಿಕೆ ಪ್ರಕಟಿಸಿರುವ ಸಂಶೋಧನಾ ವರದಿಯಲ್ಲಿ ಭಾರತದಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ಕಾರಣವಾಗುತ್ತಿರುವ ಅಂಶಗಳಲ್ಲಿ ವಾಯು ಮಾಲಿನ್ಯ ಮೂರನೇ ಸ್ಥಾನ ಪಡೆದಿದೆ ಎಂದು ತಿಳಿಸಿದೆ. ದೆಹಲಿ ಏಮ್ಸ್ ಆಸ್ಪತ್ರೆ ಮತ್ತು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಸಂಶೋಧಕರು ಭಾರತದಲ್ಲಿ ಕಳೆದ 25 ವರ್ಷಗಳಿಂದ ಹೃದಯ ಸಂಬಂಧಿ ರೋಗಗಳಿಗೆ ಕಾರಣವಾದ ಅಂಶಗಳ ಕುರಿತು ಸಮಗ್ರ ಮಾಹಿತಿ ಕಲೆ ಹಾಕಿ ವರದಿಯನ್ನು ಸಿದ್ಧಪಡಿಸಿದ್ದಾರೆ.
ಈ ವರದಿಯ ಪ್ರಕಾರ ಆಹಾರ ಸಂಬಂಧಿ ಸಮಸ್ಯೆಗಳಿಂದಾಗಿ ಶೇ. 56.4 ರಷ್ಟು ಜನರು ಹೃದಯ ಸಂಬಂಧಿ ರೋಗಗಳಿಗೆ ಮೃತಪಡುತ್ತಿದ್ದಾರೆ. ಶೇ. 54.6 ರಷ್ಟು ಜನರು ರಕ್ತದೊತ್ತಡ ಸಮಸ್ಯೆಯಿಂದ ಹಾಗೂ ಶೇ. 31.1 ರಷ್ಟು ಜನರು ವಾಯುಮಾಲಿನ್ಯದಿಂದ ಹೃದಯ ಸಂಬಂಧಿ ರೋಗಗಳಿಗೆ ತುತ್ತಾಗಿ ಮೃತಪಡುತ್ತಿದ್ದಾರೆ. 1990 ಕ್ಕೆ ಹೋಲಿಸಿದರೆ ವಾಯುಮಾಲಿನ್ಯದಿಂದ ಹೃದಯ ಸಂಬಂಧಿ ರೋಗಗಳು ಬರುವ ಸಾಧ್ಯತೆ ದ್ವಿಗುಣಗೊಂಡಿದೆ ಎಂದು ಏಮ್ಸ್ನ ವೈದ್ಯ ಡಾ. ಅಂಬುಜ್ ರಾಯ್ ತಿಳಿಸಿದ್ದಾರೆ.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ