ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಟ್ರಂಪ್ ನಿರ್ಬಂಧ ಬೆದರಿಕೆ ಮಧ್ಯೆಯೇ ಟ್ರಯಂಫ್ ಒಡಂಬಡಿಕೆ,

ಅಮೆರಿಕದ ನಿರ್ಬಂಧ ಎಚ್ಚರಿಕೆ ನಡುವೆಯೂ ಭಾರತ ಹಾಗೂ ರಷ್ಯಾ ನಡುವೆ ಮಹತ್ವದ ಟ್ರಯಂಫ್ ಕ್ಷಿಪಣಿ ಖರೀದಿ ಒಪ್ಪಂದಕ್ಕೆ ಶುಕ್ರವಾರ ಸಹಿ ಬೀಳುವ ಸಾಧ್ಯತೆಯಿದೆ. ವಾರ್ಷಿಕ ದ್ವಿಪಕ್ಷೀಯ ಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ನವದೆಹಲಿಗೆ ಗುರುವಾರ ಆಗಮಿಸಿದ್ದು, ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಜತೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಈ ಮಧ್ಯೆ ರಷ್ಯಾದೊಂದಿಗಿನ ರಕ್ಷಣಾ ಒಪ್ಪಂದ ಅಮೆರಿಕದ ಕೆಂಗಣ್ಣಿಗೆ ಗುರಿಯಾಗಿದೆ.
ರಕ್ಷಣೆ ಜತೆಗೆ ಇಂಧನ, ಸಾರಿಗೆ, ಅಣುಶಕ್ತಿ, ಆರ್ಥಿಕ ಹಾಗೂ ಬಾಹ್ಯಾಕಾಶಕ್ಕೆ ಸಂಬಂಧಿಸಿದ 20ಕ್ಕೂ ಅಧಿಕ ಒಪ್ಪಂದಗಳಿಗೆ ಈ ಸಂದರ್ಭದಲ್ಲಿ ಸಹಿ ಬೀಳುವ ಸಾಧ್ಯತೆಯಿದೆ. ರಷ್ಯಾದಿಂದ ಭಾರತ ಖರೀದಿಸಲು ಮುಂದಾಗಿರುವ 36 ಸಾವಿರ ಕೋಟಿ ರೂ. ಗಳ ಟ್ರಯಂಫ್ ಕ್ಷಿಪಣಿ ವ್ಯವಸ್ಥೆ ವಿಶ್ವದ ಗಮನ ಸೆಳೆದಿದೆ.
ಅಮೆರಿಕ ಎಚ್ಚರಿಕೆ: ರಷ್ಯಾದಿಂದ ಟ್ರಯಂಫ್ ಕ್ಷಿಪಣಿ ವ್ಯವಸ್ಥೆ ಖರೀದಿಸಿದರೆ ಕ್ಯಾಸ್ಟಾ ಕಾಯ್ದೆ ಮೂಲಕ ನಿರ್ಬಂಧ ಎದುರಿಸಬೇಕಾಗಬಹುದು ಎಂದು ಈಗಾಗಲೇ ಅಮೆರಿಕ ಎಚ್ಚರಿಸಿದೆ. ಆದರೂ ಕ್ಷಿಪಣಿ ಖರೀದಿಗೆ ಭಾರತ ಮುಂದಾಗಿರುವುದು ಕುತೂಹಲ ಮೂಡಿಸಿದೆ. ‘ರಷ್ಯಾದೊಂದಿಗೆ ಯಾವುದೆ ದೇಶ ರಕ್ಷಣಾ ಒಪ್ಪಂದ ಮಾಡಿಕೊಂಡರೂ ಸುಮ್ಮನಿರುವುದಿಲ್ಲ. ಟ್ರಯಂಫ್ ಒಪ್ಪಂದ ಮಾಡಿಕೊಂಡರೆ ನಿರ್ಬಂಧ ಅಪ್ಪಿಕೊಂಡಂತೆ’ ಎಂದು ಅಮೆರಿಕ ವಿದೇಶಾಂಗ ಇಲಾಖೆ ವಕ್ತಾರರು ಎಚ್ಚರಿಸಿದ್ದಾರೆ.
ಭಾರತದ ರಕ್ಷಣಾ ವ್ಯವಸ್ಥೆ ಹಾಗೂ ಪಾಕ್ ವಾಯುಪಡೆ ನಿಯಂತ್ರಣಕ್ಕೆ ಟ್ರಯಂಫ್ ಕ್ಷಿಪಣಿ ವ್ಯವಸ್ಥೆ ಅನಿವಾರ್ಯವಾಗಿದೆ. ಇಂದಿಗೂ ರಷ್ಯಾದ ಜತೆಗೆ ಭಾರತ ಅತ್ಯಧಿಕ ಪ್ರಮಾಣದ ರಕ್ಷಣಾ ಒಪ್ಪಂದ ಹೊಂದಿದೆ. ಅಮೆರಿಕದ ಬೆದರಿಕೆ ಆಧರಿಸಿ ರಷ್ಯಾ ಜತೆಗಿನ ಸಂಬಂಧ ಕೆಡಿಸಿಕೊಂಡರೆ ರಕ್ಷಣಾ ವ್ಯವಸ್ಥೆ ಹದಗೆಡಲಿದೆ ಎನ್ನುವುದು ಭಾರತದ ಆತಂಕವಾಗಿದೆ.
ಏನಿದು ಕ್ಯಾಸ್ಟಾ ಕಾಯ್ದೆ?: ಉಕ್ರೇನ್ ಮೇಲೆ ರಷ್ಯಾ ಸೇನೆ ದಾಳಿ ಹಾಗೂ ಅಮೆರಿಕ ಚುನಾವಣೆಯಲ್ಲಿ ರಷ್ಯಾ ಹಸ್ತಕ್ಷೇಪದ ಹಿನ್ನೆಲೆಯಲ್ಲಿ ಕ್ಯಾಸ್ಟಾ ಕಾಯ್ದೆಯನ್ನು ಅಮೆರಿಕ ರಚಿಸಿದೆ. ಅಮೆರಿಕದೊಂದಿಗೆ ರಕ್ಷಣಾ ವ್ಯವಹಾರ ನಡೆಸುತ್ತಿರುವ ದೇಶಗಳು ರಷ್ಯಾದೊಂದಿಗೆ ರಕ್ಷಣಾ ವ್ಯವಹಾರ ಇರಿಸಿಕೊಳ್ಳಬಾರದು ಎನ್ನುವುದು ಈ ಕಾಯ್ದೆ ಅಂಶವಾಗಿದೆ. ಒಂದೊಮ್ಮೆ ಕಾಯ್ದೆ ಉಲ್ಲಂಘಿಸಿದರೆ ಆ ದೇಶದ ಮೇಲೆ ಅಮೆರಿಕ ನಿರ್ಬಂಧ ಹೇರಲಿದೆ. ಈಗಾಗಲೇ ಉತ್ತರ ಕೊರಿಯಾ, ಇರಾನ್, ಚೀನಾದ ಮೇಲೆ ಈ ನಿರ್ಬಂಧ ಜಾರಿಯಲ್ಲಿದೆ. ಇತ್ತೀಚೆಗೆ ಸುಖೋಯ್ ಯುದ್ಧ ವಿಮಾನವನ್ನು ಚೀನಾ ಖರೀದಿಸಿದ್ದರಿಂದ ನಿರ್ಬಂಧ ಹೇರಲಾಗಿತ್ತು.
ಟ್ರಂಪ್ ಅಂತಿಮ ನಿರ್ಧಾರ: ಅಮೆರಿಕ ಕಾಂಗ್ರೆಸ್​ನಲ್ಲಿ ಈ ಕಾಯ್ದೆ ರಚನೆಯಾಗಿದ್ದರೂ ನಿರ್ಬಂಧ ಹೇರುವ ಅಂತಿಮ ಅಧಿಕಾರ ಅಮೆರಿಕ ಅಧ್ಯಕ್ಷರಿಗಿದೆ. ಅನಿರೀಕ್ಷಿತ ತೀರ್ವನಗಳಿಗೆ ಖ್ಯಾತಿ ಹೊಂದಿರುವ ಡೊನಾಲ್ಡ್ ಟ್ರಂಪ್ ಈ ಕುರಿತು ಯಾವ ನಿರ್ಣಯ ಮಾಡುತ್ತಾರೆ ಎನ್ನುವುದು ಕುತೂಹಲದ ವಿಚಾರವಾಗಿದೆ.
ಅಮೆರಿಕದ ಒತ್ತಡ ತಂತ್ರ
ಭಾರತದ ಜತೆಗಿನ ವ್ಯವಹಾರದಲ್ಲಿ ಅಮೆರಿಕ ವಿತ್ತೀಯ ಕೊರತೆ ಎದುರಿಸುತ್ತಿದೆ. ಇದನ್ನು ತುಂಬಿಕೊಳ್ಳಬೇಕಾದರೆ, ರಕ್ಷಣಾ ವಲಯದಲ್ಲಿ ರಷ್ಯಾಗಿರುವ ಸ್ಥಾನವನ್ನು ಅಮೆರಿಕ ಪಡೆಯುವುದು ಅನಿವಾರ್ಯವಾಗಿದೆ. ಈ ಕಾರಣಕ್ಕಾಗಿ ಒತ್ತಡ ತಂತ್ರ ಹೇರಲಾಗುತ್ತಿದೆ. ಇತ್ತೀಚೆಗೆ ನಡೆದ 2+2 ಸಭೆಯಲ್ಲೂ ಭಾರತದ ಸಚಿವರು ಟ್ರಯಂಫ್ ವಿಚಾರ ಪ್ರಸ್ತಾಪಿಸಿದ್ದರು. ಆದರೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮೈಕ್ ಪಾಂಪಿಯೋ ಗೊಂದಲದ ಉತ್ತರ ನೀಡಿದ್ದರು. ರಷ್ಯಾ ಜತೆಗೆ ಸಾಕಷ್ಟು ವರ್ಷಗಳಿಂದ ರಕ್ಷಣಾ ಒಪ್ಪಂದ ಹೊಂದಿರುವ ಹಿನ್ನೆಲೆಯಲ್ಲಿ ಕೂಡಲೇ ನಿರ್ಬಂಧ ಹೇರುವುದು ಅಸಾಧ್ಯ. ಭಾರತಕ್ಕೆ ಕೆಲ ರಿಯಾಯಿತಿ ನೀಡಬೇಕಾಗುತ್ತದೆ ಎಂದಿದ್ದರು. ಆದರೆ ಆದರೆ ಈಗ ಅಮೆರಿಕ ಯೂ-ಟರ್ನ್ ಹೊಡೆಯುವ ಲಕ್ಷಣ ಕಾಣಿಸುತ್ತಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...