ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಸುಬ್ರಹ್ಮಣ್ಯನ್ ಚಂದ್ರಶೇಖರ್

ಅಕ್ಟೋಬರ್ 19, ನೊಬೆಲ್ ಪ್ರಶಸ್ತಿ ಪಡೆದ ಭಾರತೀಯ ಮೂಲ ಸಂಜಾತ ಪ್ರಖ್ಯಾತ ವಿಜ್ಞಾನಿ ಸುಬ್ರಹ್ಮಣ್ಯನ್ ಚಂದ್ರಶೇಖರ್ ಅವರ ಜನ್ಮದಿನ.
ಸುಬ್ರಹ್ಮಣ್ಯನ್ ಚಂದ್ರಶೇಖರ್, ಭಾರತೀಯ ಮೂಲದ ಅಮೇರಿಕ ದೇಶದ ನೋಬೆಲ್ ಪ್ರಶಸ್ತಿ ವಿಜೇತ ಭೌತವಿಜ್ಞಾನಿ. ಗೆಳೆಯರೆಲ್ಲರು ಅವರನ್ನು ಪ್ರೀತಿಯಿಂದ 'ಚಂದ್ರ' ಎಂದೇ ಸಂಬೋಧಿಸುತ್ತಿದ್ದರು. 1985ರಲ್ಲಿ 'ಡಾ.ಚಂದ್ರ' ಮತ್ತು ಅಮೆರಿಕಾದ  'ವಿಲ್ಲಿಫೌಲರ್'  ಜಂಟಿಯಾಗಿ  'ನೋಬೆಲ್ ಪ್ರಶಸ್ತಿ'ಯನ್ನು ಹಂಚಿಕೊಂಡರು. ವಿಶ್ವದ ಶ್ರೇಷ್ಟ ವಿಜ್ಞಾನ ಬರಹಗಾರರಲ್ಲಿ ಒಬ್ಬರಾದ ಆರ್ಥರ್ ಮಿಲ್ಲರ್ ಹೇಳುವಂತೆ, ಅವರೊಬ್ಬ 'ಖಭೌತ ವಿಜ್ಞಾನಿ' - 'ನಕ್ಷತ್ರಲೋಕದ ಅನಭಿಷಕ್ತ ಚಕ್ರವರ್ತಿ'.
ಇವರು ನೊಬೆಲ್ ವಿಜ್ಞಾನಿ ಸರ್ ಸಿ.ವಿ.ರಾಮನ್‌ರ ಸಮೀಪ ಸಂಬಂಧಿ. ಜನನ ಅಕ್ಟೋಬರ್ 19, 1910 ಲಾಹೋರ್ನಲ್ಲಿ. ತಂದೆ ಸುಬ್ರಹ್ಮಣ್ಯಂ ಅಯ್ಯರ್ ವಾಯವ್ಯ ರೈಲ್ವೆಯಲ್ಲಿ 'ಸಹಾಯಕ ಆಡಿಟರ್ ಜನರಲ್' ಆಗಿದ್ದರು. ತಂದೆಯವರು ಚೆನ್ನೈಗೆ ವರ್ಗವಾಗಿ ಬಂದಾಗ, 'ಟ್ರಿಪ್ಲಿಕೇನ್‌'ನಲ್ಲಿ 'ಹಿಂದೂ ಹೈಸ್ಕೂಲ್' ಸೇರಿದರು. ಗಣಿತದಲ್ಲಿ ಅಪಾರ ಪ್ರತಿಭೆ, ಮತ್ತು ಅದ್ಭುತ ನೆನೆಪಿನ ಶಕ್ತಿಯನ್ನು ಹೊಂದಿದ್ದರು. ಅದಕ್ಕೆ ಪುಟವಿಟ್ಟಂತೆ ವಿಜ್ಞಾನದಲ್ಲಿ ತೀವ್ರವಾದ ಆಸಕ್ತಿ, ಉತ್ಸಾಹ.  1925ರಲ್ಲಿ ಪ್ರೆಸಿಡೆನ್ಸಿ ಕಾಲೇಜ್ ಸೇರಿದಾಗ ಭೌತಶಾಸ್ತ್ರವನ್ನು ಐಚ್ಛಿಕ ವಿಷಯವಾಗಿ ತೆಗೆದುಕೊಂಡರು. 1930ರಲ್ಲಿ ಪದವೀಧರರಾದರು. ಇಂಗ್ಲೀಷ್ ಸಾಹಿತ್ಯದಲ್ಲಿ ಅದರಲ್ಲೂ 'ವಿಕ್ಟೋರಿಯನ್ ಯುಗದ ಶೈಲಿಯ ಸುಂದರ-ಇಂಗ್ಲೀಷ್-ಸಾಹಿತ್ಯ'ದಲ್ಲಿ ಅತ್ಯಾಸಕ್ತರು. ಆಗಿನ ಕಾಲದ ಇಂಗ್ಲೀಷ್ ಭಾಷೆಯ ಪ್ರಕಾಂಡ ಪಂಡಿತರ ಸಾಹಿತ್ಯವನ್ನು ಚೆನ್ನಾಗಿ ಅರಗಿಸಿಕೊಂಡ 'ಚಂದ್ರ', ತಮ್ಮ ವೈಜ್ಞಾನಿಕ ಬರಹದಲ್ಲಿ ಸಾಹಿತ್ಯದ ಸೊಗಡನ್ನು ತುಂಬಿಡುತ್ತಿದ್ದರು. ಆಗಿನ ಕಾಲದ 'ನೋಬೆಲ್ ಪ್ರಶಸ್ತಿ ವಿಜೇತ', 'ಹ್ಯಾನ್ಸ್ ಬೇಥ್' ಹೇಳುವಂತೆ-ಚಂದ್ರಾರವರ ಬರಹವೆಂದರೆ, 'ವಿಕ್ಟೋರಿಯನ್ ಯುಗದ ಸೌಂದರ್ಯ'ವೆಲ್ಲವೂ ಅವರ ಸಾಹಿತ್ಯದಲ್ಲಿ ಮೇಳೈಸಿರುತ್ತಿತ್ತು. ವಿದ್ಯಾರ್ಥಿ ದೆಸೆಯಲ್ಲೇ 'ವೈಜ್ಞಾನಿಕ ವಿಷಯಗಳ ಮೇಲೆ ಪ್ರಬಂಧ' ಬರೆದಿದ್ದರು.
ಮದ್ರಾಸ್ ನ 'ಪ್ರೆಸಿಡೆನ್ಸಿ ಕಾಲೇಜಿ'ನಲ್ಲಿ ವಿದ್ಯಾಭ್ಯಾಸಮಾಡುತ್ತಿದ್ದಾಗ, ತಮಗಿಂತಾ ಒಂದು ವರ್ಷ ಜೂನಿಯರ್ ಆಗಿದ್ದ, 'ರಿಸರ್ಚ್ ಫೆಲೊ ಲಲಿತ ದೊರೈಸ್ವಾಮಿ' ಯವರ ಪರಿಚಯವಾಯಿತು. ಅವರಿಬ್ಬರೂ ಪರಸ್ಪರ ಒಪ್ಪಿಕೊಂಡು ಮದುವೆಯಾದರು.
1930ರ ಮೇನಲ್ಲಿ ಇಂಗ್ಲೆಂಡಿನಲ್ಲಿ ಸಂಶೋಧನೆ ಮಾಡಲು ಭಾರತ ಸರ್ಕಾರದ ವಿದ್ಯಾರ್ಥಿ ವೇತನ ಮಂಜೂರಾಯಿತು. ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ವಿದ್ಯಾರ್ಥಿಯಾದರು. 1931ರ ಮೇನಲ್ಲಿ ಲಂಡನ್‌ನ ರಾಯಲ್ ಅಸ್ಟ್ರಾನಾಮಿಕಲ್ ಸೊಸೈಟಿಯ ಸಭೆಗಳಲ್ಲಿ ಭಾಗವಹಿಸಿ, ತಮ್ಮ ಪ್ರಬಂಧಗಳನ್ನು ಓದಿದರು. 1931ರ ಜುಲೈನಲ್ಲಿ ಜರ್ಮನಿಗೆ ತೆರಳಿ, ವರ್ಗ ನಿಯಮ, ಕ್ವಾಂಟಮ್ ಮೆಕ್ಯಾನಿಕ್ಸ್ ಮತ್ತು ನಕ್ಷತ್ರಗಳ ಕುರಿತು ಅಧ್ಯಯನ ಮಾಡಿದರು. 1932ರ ಜನವರಿಯಲ್ಲಿ 'ಮಾದರಿ ದ್ಯುತಿಗೋಳ'ಗಳ ಬಗ್ಗೆ ರಾಯಲ್ ಅಸ್ಟ್ರನಾಮಿಕಲ್ ಸೊಸೈಟಿಯಲ್ಲಿ ವಿಶಿಷ್ಟ ಪ್ರಬಂಧ ಮಂಡಿಸಿ, ಎಡಿಂಗ್‌ಟನ್ ಮತ್ತು ಮಿಲ್ಸ್‌ರ ಮೆಚ್ಚುಗೆಗೆ ಪಾತ್ರರಾದರು. ಬೆಲ್ಜಿಯಂನ ಲೀಡ್ ವಿಶ್ವವಿದ್ಯಾನಿಲಯದಲ್ಲಿ 'ಖಭೌತಶಾಸ್ತ್ರ'ದ ಬಗ್ಗೆ ನೀಡಿದ ಸರಣಿ ಉಪನ್ಯಾಸಗಳು ಮುಂದೆ ಪುಸ್ತಕರೂಪದಲ್ಲಿ ಪ್ರಕಟವಾದವು.
ಅಮೆರಿಕಾ ಸಂಯುಕ್ತ ಸಂಸ್ಥಾನದ ವಿಸ್ಕಾನ್ಸಿನ್‌ನಲ್ಲಿಯ  'ಯೆರ್ಕ್ಸ್ ಬಾಹ್ಯಾಕಾಶ ನಿರೀಕ್ಷಣಾಲಯ'ದಲ್ಲಿ ಸಂಶೋಧನಾ ಸಂಯೋಜಕರಾಗಿ ಕೆಲಸ ಮಾಡಲು ಚಂದ್ರ ಅವರಿಗೆ ಆಹ್ವಾನ ಬಂದಿತು.  ಯೆರ್ಕ್ಸ್‌ನಲ್ಲಿ ವಿಶ್ವದ ಅತ್ಯಂತ ದೊಡ್ಡ ವಕ್ರೀಭವನ ದೂರದರ್ಶಕವಿತ್ತು. ಇಲ್ಲಿ ಚಂದ್ರಶೇಖರ್‌ರವರು ಸುಮಾರು 27 ವರ್ಷಗಳ ಕಾಲ ಕೆಲಸ ಮಾಡಿದರು. ಉಪಾಧ್ಯಾಯ ವೃತ್ತಿಯೊಂದಿಗೆ ಸಂಶೋಧನೆಯೂ ಜೊತೆಜೊತೆಗೆ ನಡೆಯಿತು. 1938-44ರವರೆಗೆ ನಕ್ಷತ್ರಗಳ ಚಲನಶಾಸ್ತ್ರ, ಚಲನಘರ್ಷಣೆಯ ಬಗ್ಗೆ ಸಂಶೋಧನ ನಡೆಸಿದರು. 1943ರಲ್ಲಿ ಪ್ರಾಧ್ಯಾಪಕರಾದರು. 1952-1971ರವರೆಗೆ 'ಆಸ್ಟ್ರೋ ಫಿಸಿಕಲ್ ಜರ್ನಲ್‌'ನ ವ್ಯವಸ್ಥಾಪಕ ಸಂಪಾದಕರಾಗಿದ್ದರು.
1934ರಲ್ಲಿ ಶ್ವೇತ ಕುಬ್ಜಗಳು (White Dwarf) ಹಾಗೂ ಮಿತಿಯುಳ್ಳ ರಾಶಿ ಕುರಿತು ರಷ್ಯಾದ 'ಪುಲ್ಕೋವೊ ಗ್ರಹವೀಕ್ಷಣಾಲಯ'ದಲ್ಲಿ ಉಪನ್ಯಾಸಗಳನ್ನು ನೀಡಿದರು. ನಕ್ಷತ್ರಗಳಲ್ಲಿರುವ ಜಲಜನಕವು ವ್ಯಯವಾಗುತ್ತಾ ಹೋದಂತೆ, ಅವುಗಳ ಸ್ಥಾನದಲ್ಲಿ 1:4 ರ ಅನುಪಾತದಲ್ಲಿ ಹೀಲಿಯಮ್ ರೂಪುಗೊಂಡು, ನಕ್ಷತ್ರವು ಸಂಕುಚಿತವಾಗುತ್ತಾ ಹೋಗುತ್ತದೆ. ಹೀಗಾಗಿ ದ್ರವ್ಯರಾಶಿ ಸ್ಥಿರವಾಗಿ, ಸಾಂದ್ರತೆ ಹೆಚ್ಚಿ, ನಕ್ಷತ್ರದೊಳಗೆ ಒತ್ತಡವು ಅಧಿಕವಾಗುತ್ತದೆ.  ಇದರ ಫಲವಾಗಿ ಪರಮಾಣು ವ್ಯವಸ್ಥೆ ಬಲಹೀನವಾಗಿ, ಎಲೆಕ್ಟ್ರಾನ್ ಹಾಗೂ ನ್ಯೂಕ್ಲಿಯಸ್ ಪ್ರತ್ಯೇಕಗೊಳ್ಳುತ್ತವೆ.  ಈ ಪ್ರಕ್ರಿಯೆ ಮುಂದುವರೆದಂತೆ ಶ್ವೇತಕುಬ್ಜಗಳು ರೂಪುಗೊಳ್ಳುತ್ತವೆ.  ನಕ್ಷತ್ರಗಳ ಭಾರ ಹೆಚ್ಚಿದರೂ, ಅವುಗಳೊಳಗಿನ ದ್ರವ್ಯರಾಶಿ ಒಂದು ಪರಿಮಿತಿಯಲ್ಲಿರುತ್ತವೆ.  ಅಂಥ ನಕ್ಷತ್ರ ಸೂರ್ಯನ 1.44 ರಷ್ಟಕ್ಕಿಂತ ಹೆಚ್ಚಾಗಿರಲು ಸಾಧ್ಯವಿಲ್ಲವೆಂದು ಚಂದ್ರಶೇಖರ್ ಪ್ರತಿಪಾದಿಸಿದರು.  ಅಲ್ಲದೆ ಯಾವುದೇ ನಕ್ಷತ್ರದ ದ್ರವ್ಯರಾಶಿ ಈ ಮಿತಿಗಿಂತ ಹೆಚ್ಚಾಗಿದ್ದರೆ, ಅದು ಸ್ಫೋಟಗೊಂಡು ಸ್ವಲ್ಪಾಂಶ ವಸ್ತುವನ್ನು ವಿಸರ್ಜಿಸಿ, ಶ್ವೇತಕುಬ್ಜವಾಗುತ್ತದೆ ಎಂದು ವಿವರಿಸಿದರು.  ಅಂದರೆ ಯಾವುದೇ ಶ್ವೇತಕುಬ್ಜದ ದ್ರವ್ಯರಾಶಿ 1.44ರ ಮಿತಿಗಿಂತ ಹೆಚ್ಚಾಗಿರುವುದಿಲ್ಲ.  ಈ ಮಿತಿಯನ್ನು "ಚಂದ್ರಶೇಖರ್ ಮಿತಿ" ಎನ್ನುವರು. ಚಂದ್ರಶೇಖರ್ ಈ ಮಿತಿಯನ್ನು ಗಣಿತದ ಲೆಕ್ಕಾಚಾರಗಳಿಂದಲೇ ಕಂಡುಹಿಡಿದರು.  ಈ ಮಿತಿಗಿಂತ ಹೆಚ್ಚು ಹಿಗ್ಗುವ ನಕ್ಷತ್ರ ಸಾವಿರಾರು ಅಣುಬಾಂಬ್‌ಗಳು ಏಕಕಾಲದಲ್ಲಿ ಸ್ಫೋಟಿಸುವಂತೆ ಸಿಡಿದು, ಸೂಪರ್‌ನೋವಾ ಎಂಬ ಹೊಳಪಿನ ನಕ್ಷತ್ರವಾಗುತ್ತದೆ.  ಶ್ವೇತ ಕುಬ್ಜಗಳ ಬಗ್ಗೆ ಅವರು ನಡೆಸಿದ ಸಂಶೋಧನೆ 1944ರ ನಂತರ ಅವರಿಗೆ ಮನ್ನಣೆ ತಂದುಕೊಟ್ಟಿತು.
ಈ ಸಮಯದಲ್ಲಿ ಡಾ. ಚಂದ್ರ, ನಕ್ಷತ್ರಗಳ ಸಂರಚನೆಯ ಬಗ್ಗೆ ಹೊಸ ಕಾಣಿಕೆಯನ್ನು ಒದಗಿಸಿದರು. ಅದರ ಪರಿಪೂರ್ಣತೆಯ ಬದ್ಧತೆಗೆ 20 ಕ್ಕೂ  ಮಿಕ್ಕಷ್ಟು ಗ್ರಂಥಗಳು ಹಾಗೂ ನೂರಾರು, ಸಂಶೋಧನಾ ಸಂಬಂಧೀ ಲೇಖನಗಳು ಸಾಕ್ಷಿಯಾಗಿವೆ. ಅತ್ಯಂತ ಉಚ್ಚಮಟ್ಟದ ಶಿಕ್ಷಕರಾಗಿದ್ದ ಚಂದ್ರಶೇಖರ್ ಅವರ ಶಿಷ್ಯರೂ ಅವರಷ್ಟೇ ಪ್ರಗತಿಯನ್ನು ಸಾಧಿಸಿದರು. ಡಾ.ಚಂದ್ರಶೇಖರ್ ಅವರ ಮಾರ್ಗದರ್ಶನದಲ್ಲಿ 5೦ ಕ್ಕೂ ಮಿಗಿಲಾಗಿ 'ಡಾಕ್ಟೊರೇಟ್ ಪದವಿ' ಗಳಿಸಿದ್ದಾರೆ. 'ಯೇರ್ಕ್ಸ್ ಸಂಶೋಧನಾಲಯ'ದಲ್ಲಿ ಚಂದ್ರರ ಶಿಷ್ಯರಾಗಿದ್ದ  'ಲೀ' ಮತ್ತು  'ಯಾಂಗ್' ಮುಂದೆ 1957ರಲ್ಲಿ ಗುರುಗಳಿಗಿಂತ ಮೊದಲೇ ಕಣ-ಭೌತವಿಜ್ಞಾನದಲ್ಲಿ ನಡೆಸಿದ ಸಂಶೋಧನೆಗೆ 'ನೋಬೆಲ್ ಪ್ರಶಸ್ತಿ 'ಗಳಿಸಿದ್ದರು.
ಚಂದ್ರಶೇಖರ್ ಅವರಿಗೆ  'ಕೇಂಬ್ರಿಜ್ ವಿಶ್ವವಿದ್ಯಾನಿಲಯದ ಡಿಎಸ್‌ಸಿ ಪದವಿ',  'ಇಂಗ್ಲೆಂಡ್‌ನ ರಾಯಲ್ ಸೊಸೈಟಿಗೆ ಆಯ್ಕೆ ಗೌರವ',  'ರೇಡಿಯೋ ಆಕ್ಟಿವ್ ಟ್ರಾನ್ಸ್‌ಫರ್' ಪುಸ್ತಕಕ್ಕೆ, ಕೇಂಬ್ರಿಜ್ ವಿಶ್ವವಿದ್ಯಾನಿಲಯದ ಅತ್ಯುನ್ನತ ಪ್ರಶಸ್ತಿಯಾದ 'ಆಡಮ್ ಬಹುಮಾನ',  ಬ್ರೂಸ್ ಪದಕ,  'ರಾಯಲ್ ಅಸ್ಟ್ರಾನಾಮಿಕಲ್ ಸೊಸೈಟಿಯ ಚಿನ್ನದ ಪದಕ',  'ರಂಫರ್ಡ್ ಪ್ರಶಸ್ತಿ',  ಭಾರತ ಸರ್ಕಾರದ, 'ಪದ್ಮಭೂಷಣ ಪ್ರಶಸ್ತಿ’ ಮತ್ತು 1983ರಲ್ಲಿ ಇವೆಲ್ಲಕ್ಕೂ ಕಳಶವಿಟ್ಟಂತೆ  1983ರಲ್ಲಿ 'ಶ್ವೇತಕುಬ್ಜಗಳನ್ನು ಕುರಿತ ಸಂಶೋಧನೆಗೆ ನೊಬೆಲ್ ಪ್ರಶಸ್ತಿ' ಮುಂತಾದ ಪ್ರತಿಷ್ಟಿತ ಗೌರವಗಳು ಸಂದವು.
ಸುಬ್ರಹ್ಮಣ್ಯನ್ ಚಂದ್ರಶೇಖರ್, 'ಪ್ರಿನ್ಸಿಪಲ್ಸ್ ಆಫ್ ಸ್ಟೆಲಾರ್ ಡೈನಾಮಿಕ್ಸ್' ಮುಂತಾದ ಗ್ರಂಥಗಳನ್ನು ಬರೆದು ಪ್ರಕಟಿಸಿದರು. 1980ರಲ್ಲಿ ಸ್ವಇಚ್ಛೆಯಿಂದಲೇ ಕೆಲಸದಿಂದ ನಿವೃತ್ತಿ ಪಡೆದರು. ಇಳಿವಯಸ್ಸಿನಲ್ಲೂ ತಮ್ಮ ಸಂಶೋಧನೆಗಳನ್ನು ಮುಂದುವರೆಸಿದ್ದರು.  ಸಾಹಿತ್ಯದಲ್ಲೂ ಅವರಿಗೆ ಅಪಾರ ಆಸಕ್ತಿ ಇತ್ತು.  ಅಮೆರಿಕದಲ್ಲಿದ್ದರೂ ಪ್ರತಿನಿತ್ಯದಲ್ಲಿ ಅವರ ಉಡುಗೆ-ತೊಡುಗೆ ದಕ್ಷಿಣಭಾರತದ ಪಂಚೆ, ಮೇಲಂಗಿ ಮಾತ್ರ.  ಕೇಳುತ್ತಿದ್ದುದು ಕರ್ನಾಟಕ ಸಂಗೀತ. ಅರವತ್ತೈದು ವರ್ಷಗಳ ಕಾಲ ನಿರಂತರವಾಗಿ ಸಂಶೋಧನೆಯಲ್ಲಿ ನಿರತರಾಗಿದ್ದ 'ಸುಬ್ರಹ್ಮಣ್ಯನ್ ಚಂದ್ರಶೇಖರ್' 1995, ಆಗಸ್ಟ್, 21 ರ ರಾತ್ರಿ, ಮತ್ತೆ ತಿರುಗಿ ಮರಳಿಬಾರದ ನಕ್ಷತ್ರಲೋಕದೆಡೆಗೆ ತೆರಳಿ ಕಣ್ಮರೆಯಾದರು.
ಈ ಮಹಾನ್ ಚೇತನಕ್ಕೆ ನಮ್ಮ,  ನಮನ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....