ವಿಷಯಕ್ಕೆ ಹೋಗಿ

**ಜ್ಞಾನ ಕಾರಂಜಿ**::: ಹತ್ತು ಒಪ್ಪಂದ ಗಟ್ಟಿಬಂಧ,

ಭಾರತ ಪ್ರವಾಸದಲ್ಲಿರುವ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಹಾಗೂ ಪ್ರಧಾನಿ ನರೇಂದ್ರ ಮೋದಿ ರಕ್ಷಣೆ, ಬಾಹ್ಯಾಕಾಶ, ಇಂಧನ ಕ್ಷೇತ್ರಗಳಿಗೆ ಸಂಬಂಧಿತ ಒಟ್ಟು 10 ಒಡಂಬಡಿಕೆಗಳಿಗೆ ಶುಕ್ರವಾರ ಸಹಿ ಹಾಕಿದ್ದಾರೆ. ಉಭಯ ದೇಶಗಳ 19ನೇ ವಾರ್ಷಿಕ ಶೃಂಗ ಸಭೆ ಬಳಿಕ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ‘ದ್ವಿಪಕ್ಷೀಯ ಸಂಬಂಧದಲ್ಲಿ ಇಂದಿನಿಂದ ಹೊಸ ಪರ್ವ ಆರಂಭವಾಗಿದೆ. ಜಾಗತಿಕ ಪರಿಸ್ಥಿತಿ ಹಾಗೂ ಬೇಡಿಕೆಗೆ ತಕ್ಕಂತೆ ಭಾರತ-ರಷ್ಯಾ ನಡುವಿನ ವ್ಯವಹಾರದಲ್ಲಿ ಇನ್ನಷ್ಟು ವೃದ್ಧಿಯಾಗಲಿದೆ ’ಎಂದು ಭರವಸೆ ನೀಡಿದ್ದಾರೆ. ಈ ಮೂಲಕ ಅಮೆರಿಕದೊಂದಿಗಿನ ಸ್ನೇಹದ ಜತೆಗೆ ದಶಕಗಳ ಹಿಂದಿನ ಮಿತ್ರ ರಾಷ್ಟ್ರ ರಷ್ಯಾವನ್ನು ಕಡೆಗಣಿಸುವುದಿಲ್ಲ ಎಂಬ ಸಂದೇಶವನ್ನು ಪ್ರಧಾನಿ ಮೋದಿ ರವಾನಿಸಿದ್ದಾರೆ.
ಇನ್ವೆಸ್ಟ್ ಇಂಡಿಯಾ ಹಾಗೂ ಮೇಕ್ ಇನ್ ಇಂಡಿಯಾದಲ್ಲಿ ಭಾಗಿಯಾಗುವ ನಿಟ್ಟಿನಲ್ಲಿ ಸ್ಪೀಡ್ ರೈಲು ಯೋಜನೆ ಹಾಗೂ ರೈಲ್ವೆ ವಿಶ್ವವಿದ್ಯಾಲಯದ ಶಿಕ್ಷಣದಲ್ಲಿ ರಷ್ಯಾ ನೆರವಿಗೆ ಮುಂದಾಗಿದೆ. ಇನ್ನೊಂದು ಮಹತ್ವದ ಬೆಳವಣಿಗೆಯಲ್ಲಿ ದೇಶದ ರಸ್ತೆ ಸಾರಿಗೆ ಹಾಗೂ ಜಲಸಾರಿಗೆ ಅಭಿವೃದ್ಧಿಯಲ್ಲೂ ಬಂಡವಾಳ ಹೂಡಿಕೆಗೆ ರಷ್ಯಾ ಸಮ್ಮತಿಸಿದೆ. ಶೀಘ್ರದಲ್ಲೇ ರೂಪಾಯಿ ಮತ್ತು ರಷ್ಯಾದ ಕರೆನ್ಸಿ ರೂಬಲ್ ವಿನಿಮಯ ಆಧಾರಿತ ವಹಿವಾಟು ಆರಂಭವಾಗಲಿದೆ.
ಇರಾನ್-ಇಂಧನ ಚರ್ಚೆ: ಅಮೆರಿಕದ ವಾಣಿಜ್ಯ ಸಮರ ಹಾಗೂ ಇರಾನ್ ಮೇಲೆ ನಿರ್ಬಂಧ ಕುರಿತು ಮೋದಿ-ಪುತಿನ್ ಮಾತುಕತೆ ನಡೆಸಿದ್ದಾರೆ. ಜಾಗತಿಕವಾಗಿ ಈ ವಿಷಯಗಳನ್ನು ಹೇಗೆ ನಿಭಾಯಿಸಬೇಕು ಹಾಗೂ ಉಭಯ ದೇಶಗಳ ಆರ್ಥಿಕತೆ ಮೇಲಿನ ದುಷ್ಪರಿಣಾಮ ಬೀರದಂತೆ ನಿಯಂತ್ರಿಸುವ ಬಗ್ಗೆಯೂ ಚರ್ಚೆ ನಡೆದಿದೆ.
ಶೃಂಗಕ್ಕೆ ಆಹ್ವಾನ
2019ರ ಸೆಪ್ಟೆಂಬರ್​ನಲ್ಲಿ ರಷ್ಯಾದಲ್ಲಿ ಈಸ್ಟ್ ಎಕನಾಮಿಕ್ ಫೋರಂ ಆಯೋಜಿಸುವ ವ್ಲಾಡಿವೊಸ್ಟೋಕ್ ಸಮಾವೇಶಕ್ಕೆ ಮುಖ್ಯ ಅತಿಥಿಯಾಗುವಂತೆ ಮೋದಿಗೆ ಪುತಿನ್ ಆಹ್ವಾನಿಸಿದ್ದಾರೆ.
ವಿದ್ಯಾರ್ಥಿಗಳ ಜತೆ ಸಂವಾದ:ಅಟಲ್ ಇನ್ನೋವೇಷನ್ ಮಿಷನ್ ಹಾಗೂ ರಷ್ಯಾದ ಸೈರಸ್ ವಿದ್ಯಾರ್ಥಿಗಳೊಂದಿಗೆ ಮೋದಿ ಮತ್ತು ಪುತಿನ್ ಸಂವಾದ ನಡೆಸಿದರು. ಎರಡೂ ದೇಶಗಳ ವಿದ್ಯಾರ್ಥಿಗಳು ಶೈಕ್ಷಣಿಕ ಹಾಗೂ ಸಂಶೋಧನಾ ಅಭಿವೃದ್ಧಿಗಾಗಿ ಜ್ಞಾನ ವಿನಿಮಯ ಮಾಡಿಕೊಳ್ಳಬೇಕು. ಇದಕ್ಕೆ ಉಭಯ ದೇಶಗಳಲ್ಲಿ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ಮೋದಿ ತಿಳಿಸಿದ್ದಾರೆ. ಖಾಸಗಿ ಭೇಟಿ ಸಂದರ್ಭದಲ್ಲಿ ಶೈಕ್ಷಣಿಕ ವಿಚಾರಗಳಿಗೆ ಮೋದಿ ಒತ್ತು ನೀಡಿದ್ದಾರೆ.
ರಕ್ಷಣಾ ಕೈಗಾರಿಕೆ ಪಾರ್ಕ್​ಗೆ ಆಹ್ವಾನ
ದಶಕಗಳಿಂದ ಭಾರತಕ್ಕೆ ರಷ್ಯಾ ಮಿಲಿಟರಿ ಸಾಧನಗಳನ್ನು ಪೂರೈಕೆ ಮಾಡುತ್ತಿದೆ. ಜತೆಗೆ ಕಠಿಣ ಪರಿಸ್ಥಿತಿಯಲ್ಲಿ ಭಾರತದ ಪರ ನಿಂತಿದೆ. ಜಾಗತಿಕ ಬದಲಾವಣೆಯ ಕಾಲಘಟ್ಟದಲ್ಲಿ ಭಾರತ- ರಷ್ಯಾದ ಗೆಳೆತನ ಮತ್ತಷ್ಟು ಬಲಿಷ್ಠಗೊಳ್ಳುತ್ತಿದೆ. ಹೀಗಾಗಿ ಭಾರತದಲ್ಲಿ ರಕ್ಷಣಾ ಕೈಗಾರಿಕೆ ಪಾರ್ಕ್ ಆರಂಭಿಸಲು ಸಕಾಲವಾಗಿದೆ. ಇದರ ಜತೆಗೆ ಜಲಸಾರಿಗೆ, ಮೆಟ್ರೋ ಯೋಜನೆ, ರಸ್ತೆ ಅಭಿವೃದ್ಧಿ ಹಾಗೂ ವಿಮಾನ ನಿಲ್ದಾಣ ನವೀಕರಣದಲ್ಲಿಯೂ ಭಾಗಿಯಾಗಬಹುದು ಎಂದು ಪ್ರಧಾನಿ ಮೋದಿ ರಷ್ಯಾ ಉದ್ಯಮಕ್ಕೆ ಆಹ್ವಾನ ನೀಡಿದ್ದಾರೆ.
ಪಾಕ್ ಉಗ್ರವಾದಕ್ಕೆ ಪರೋಕ್ಷ ಎಚ್ಚರಿಕೆ
ಭಯೋತ್ಪಾದನೆ ನಿಗ್ರಹ ವಿಚಾರದಲ್ಲಿ ಇಬ್ಬಗೆಯ ನೀತಿ ಸರಿಯಲ್ಲ. ಉಗ್ರರ ರಕ್ಷಣೆಗೆ ನಿಂತು ಭಯೋತ್ಪಾದನೆ ನಿಯಂತ್ರಣ ಮಾಡಲು ಸಾಧ್ಯವಿಲ್ಲ. ಕೆಲ ದೇಶಗಳು ಉಗ್ರರ ಪಾಲಿಗೆ ಸ್ವರ್ಗವಾಗಿದ್ದು, ಗಡಿ ಪ್ರದೇಶಗಳಲ್ಲಿ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿವೆ. ಇದಕ್ಕೆ ನಿಯಂತ್ರಣ ಹೇರಬೇಕಿದೆ. ಜಾಗತಿಕ ಶಾಂತಿ ನಿರ್ಮಾಣ ಹಾಗೂ ಉಗ್ರ ನಿಗ್ರಹ ಕಾರ್ಯಾಚರಣೆಗೆ ಬದ್ಧವಾಗಿದ್ದೇವೆ ಎಂದು ಉಭಯ ನಾಯಕರು ಜಂಟಿ ಹೇಳಿಕೆಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಎರಡೂ ದೇಶಗಳು ಒಟ್ಟಾಗಿ ಉತ್ಪಾದನೆಯಲ್ಲಿ ತೊಡಗಬಹುದು. ಭಾರತದಲ್ಲಿನ ಮೇಕ್ ಇನ್ ಇಂಡಿಯಾ ಕಾರ್ಯಕ್ರಮವು ಇದಕ್ಕೆ ಪೂರಕವಾಗಿದೆ.
| ನರೇಂದ್ರ ಮೋದಿ ಪ್ರಧಾನಿ
ಭಾರತದ ಅಭಿವೃದ್ಧಿ ಪಥದಲ್ಲಿ ರಷ್ಯಾ ಖುಷಿಯಿಂದ ಭಾಗಿಯಾಗುತ್ತದೆ. ರೈಲ್ವೆ, ಜಲ ಸಾರಿಗೆ ಸೇರಿ ಇನ್ನಿತರ ಕ್ಷೇತ್ರಗಳಲ್ಲಿ ಬಂಡವಾಳ ಹೂಡಿಕೆಗೆ ಸಮ್ಮತಿಸಿದ್ದೇವೆ.
| ವ್ಲಾದಿಮಿರ್ ಪುತಿನ್ ರಷ್ಯಾ ಅಧ್ಯಕ್ಷ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...