ವಿಷಯಕ್ಕೆ ಹೋಗಿ

ಸಿ. ವಿ. ರಾಮನ್

ಸಿ. ವಿ. ರಾಮನ್

ಮಹಾನ್ ವಿಜ್ಞಾನಿ ನೊಬೆಲ್ ಪ್ರಶಸ್ತಿ ಪುರಸ್ಕೃತ   ಸರ್ ಸಿ ವಿ ರಾಮನ್ ಅವರ ವಿಸ್ತೃತ ಹೆಸರು ಚಂದ್ರಶೇಖರ ವೆಂಕಟರಾಮನ್ ಎಂದು.  ಈ ಅಪ್ರತಿಮ ವೈಜ್ಞಾನಿಕ ಋಷಿವರ್ಯರು  ನವೆಂಬರ್ 7, 1888ರ ವರ್ಷದಲ್ಲಿ ತಮಿಳುನಾಡಿನ ತಿರುಚಿನಾಪಳ್ಳಿಯಲ್ಲಿ ಜನಿಸಿದರು. ತಂದೆ ಚಂದ್ರಶೇಖರ ಅಯ್ಯರ್ ಅವರು ಭೌತಶಾಸ್ತ್ರ ಪ್ರಾಧ್ಯಾಪಕರಾಗಿದ್ದರು.  ತಾಯಿ ಪಾರ್ವತಿ ಅಮ್ಮಾಳ್ ಅವರು.  ಈ ದಂಪತಿಗಳ ಎಂಟು ಮಂದಿ ಮಕ್ಕಳಲ್ಲಿ ರಾಮನ್ ಎರಡನೆಯವರು.  ಮೊದಲನೆಯವರು ಮತ್ತೊಬ್ಬ ನೊಬೆಲ್ ಪ್ರಶಸ್ತಿ ವಿಜೇತರಾದ ಖಗೋಳ ವಿಜ್ಞಾನಿ ಚಂದ್ರಶೇಖರ್ ಸುಬ್ರಹ್ಮಣ್ಯನ್ ಆವರ ತಂದೆಯವರಾದ  ಚಂದ್ರಶೇಖರ್ ಅವರು.

ಚಿಕ್ಕವಯಸ್ಸಿನಲ್ಲೇ ಅಸಾಧಾರಾಣ ಪ್ರತಿಭಾವಂತರಾಗಿದ್ದ ರಾಮನ್ ಅವರನ್ನು ಶಾಲೆಯಲ್ಲಿ ಮೀರಿಸುವವರೇ ಇರಲಿಲ್ಲ.  1900ರ ವರ್ಷದಲ್ಲಿ ಅವರು ಮೆಟ್ರಿಕ್ಯುಲೇಷನ್ ಮುಗಿಸಿ ಮದ್ರಾಸಿನ ಪ್ರೆಸಿಡೆನ್ಸಿ ಕಾಲೇಜಿಗೆ ಸೇರಿದರು.  ರಾಮನ್ ತಮ್ಮ ಹದಿನೆಂಟನೆಯ ವಯಸ್ಸಿನ ವೇಳೆಗೆ ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಗಿಸುವ ವೇಳೆಗೆ ನಾಲ್ಕು ಭಾಷೆಗಳಲ್ಲಿ ಸಂಪೂರ್ಣ ಪ್ರಭುತ್ವ ಸಾಧಿಸಿದ್ದರು.  ಗ್ರೀಕ್ ಪುರಾಣಗಳು, ಮಹಾಭಾರತ, ರಾಮಾಯಣ, ಆಧುನಿಕ ಭಾರತ,  ಯುರೋಪಿನ ಇತಿಹಾಸ, ತರ್ಕಶಾಸ್ತ್ರ, ಅರ್ಥಶಾಸ್ತ್ರ ಮತ್ತು ಸಾರ್ವಜನಿಕ ಹಣಕಾಸಿನ ಗ್ರಂಥಗಳನ್ನು ಅಧ್ಯಯನ ಮಾಡಿ ಮುಗಿಸಿದ್ದರು.  ವಿಜ್ಞಾನದ ಹಲವಾರು ಗ್ರಂಥಗಳನ್ನು ಓದಿ ಅರಗಿಸಿಕೊಂಡಿದ್ದರು.  ಯುಕ್ಲಿಡ್ಡನ ಜ್ಯಾಮಿತಿ ಮತ್ತು ಸಂಗೀತದ ಕುರಿತಂತೆ ಹೆಲ್ಮ್ ಹೊಲ್ತ್ಜ್ ಅವರ ಪುಸ್ತಕ ಅವರ ಮೇಲೆ ಅತ್ಯಂತ ಪ್ರಭಾವ ಬೀರಿತ್ತು.  ಅವರು ಬಿ. ಎ. ಓದುತ್ತಿರುವಾಗಲೇ  ಅವರ  ಎರಡು ಮಹತ್ವದ ವೈಜ್ಞಾನಿಕ ಲೇಖನಗಳು ರಾಯಲ್ ಸೊಸೈಟಿಯ ಫಿಲಸಾಫಿಕಲ್ ಮ್ಯಾಗಜೈನಿನಲ್ಲಿ ಪ್ರಕಟಗೊಂಡಿದ್ದವು.    ಇವು ಅವರ ಭವಿಷ್ಯತ್ತಿನ ಸಂಶೋಧನೆಯ ಹಾದಿಯ ಸೂಚನೆಗಳಾಗಿದ್ದವು. ಇವರ ಮತ್ತೊಂದು ಮಹತ್ವದ ಲೇಖನ ‘ನೇಚರ್’ ಎಂಬ ಪತ್ರಿಕೆಯಲ್ಲಿ ಪ್ರಕಟವಾದವು.

ಬಿ. ಎ, ಎಂ. ಎ  ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಿದ ರಾಮನ್ ಭೌತಶಾಸ್ತ್ರದಲ್ಲಿ ಉನ್ನತ ಅಧ್ಯಯನ ನಡೆಸಲು ಇಂಗ್ಲೆಂಡಿಗೆ ಹೋಗಲು ಬಯಸಿದರಾದರೂ ದೈಹಿಕ ಕಾರಣಗಳಿಂದ ಅವರ ಅರ್ಜಿ ತಿರಸ್ಕೃತಗೊಂಡಿತು.  ತಂದೆಯವರ ಒತ್ತಾಯದಿಂದ ಅವರು ಐ.ಸಿ.ಎಸ್ ಪರೀಕ್ಷೆ ಬರೆದು ಎರಡನೆಯ ಸ್ಥಾನ ಗಳಿಸಿದರು. ಹೀಗೆ ಅವರಿಗೆ ಕಲ್ಕತ್ತಾದ ಹಣಕಾಸು ಇಲಾಖೆಯಲ್ಲಿ ಕೆಲಸ ದೊರಕಿತು.  ಆದರೆ ಅವರಿಗೆ ಮನವಿದ್ದದ್ದು ಬೌತಶಾಸ್ತ್ರದಲ್ಲಿ.  ಸಂಜೆ  ವೇಳೆಗಳಲ್ಲಿ ಇಂಡಿಯನ್ ಕಲ್ಟಿವೆಶನ್ ಆಫ್ ಸೈನ್ಸ್ ಎಂಬ ಸಂಸ್ಥೆಯ ಚಿಕ್ಕ ಪ್ರಯೋಗಾಲಯದಲ್ಲಿ ಪ್ರಯೋಗಗಳನ್ನು ಮಾಡಿ ಲೇಖನಗಳನ್ನು ಪ್ರಕಟಪಡಿಸುತ್ತಿದ್ದರು. ಇವರ ಅಸಾಧಾರಣ ಪ್ರತಿಭೆ ಮತ್ತು ಆಸಕ್ತಿಯನ್ನು ಕಂಡ ಕಲ್ಕತ್ತ ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿದ್ದ ಅಶುತೋಶ್ ಮುಖರ್ಜಿ ಅವರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಹುದ್ಧೆಗೆ ಆಹ್ವಾನಿಸಿದರು.  ಇದು ಭಾರತೀಯ ಮತ್ತು ವಿಶ್ವವಿಜ್ಞಾನಕ್ಕೆ ಒಂದು ಹೊಸ ತಿರುವನ್ನು ತಂದಿತು.  

1921ರ ವರ್ಷದ ಸೆಪ್ಟೆಂಬರ್ ಮಾಸದಲ್ಲಿ ಇಂಗ್ಲೆಂಡಿನಲ್ಲಿ ಒಂದು ವೈಜ್ಞಾನಿಕ ಸಮಾವೇಶದಿಂದ ಭಾರತಕ್ಕೆ ಹಿಂದಿರುಗುವ ಸಮಯದಲ್ಲಿ, ಮೆಡಿಟರೇನಿಯನ್ ಸಮುದ್ರದಲ್ಲಿ ಪಯಣಿಸುತ್ತಿದ್ದ ಸಿ ವಿ ರಾಮನ್ ಅವರು ಕಡಲಿನ ನೀಲಿ ಬಣ್ಣವನ್ನು ಕಂಡು ಆ ಸೊಬಗಿಗೆ ಪರವಶರಾದದ್ದು ಮಾತ್ರವಲ್ಲ, ಅವರಿಗೆ ನೀರಿನ ಬಣ್ಣ ಅದು ಹೇಗೆ ನೀಲಿಯಾಗಿದೆ ಎಂಬ ಸೋಜಿಗ ಕೂಡಾ ಉಂಟಾಯಿತು.  ಆಕಾಶವೂ ನೀಲಿ, ಸಮುದ್ರವೂ ನೀಲಿ.  ಹಾಗಾದರೆ ಆಕಾಶದ ಪ್ರತಿಫಲನ ನೀರಿನ ಮೇಲೆ ಕಾಣುತ್ತಿದೆಯೇ ಇಲ್ಲ ಇದಕ್ಕೆ ಇನ್ನೇನಾದರೂ  ಕಾರಣ ಇರಬಹುದೇ ಎಂದು ತೀವ್ರವಾಗಿ ಚಿಂತಿಸಿದ ಅವರಿಗೆ “ಸೂರ್ಯನ ಬೆಳಕು ನೀರಿನ ಕಣ ಕಣದಲ್ಲೂ  ಹರಡಿಕೊಳ್ಳುವುದೇ ಸಮುದ್ರವು ನೀಲಿಯಾಗಿ ಕಾಣುವುದಕ್ಕೆ ಕಾರಣ” ಎಂದು ದೃಢಪಟ್ಟಿತು.   ಆ ಕ್ಷಣದಿಂದಲೇ ತಮ್ಮ ತೀವ್ರವಾದ ಸಂಶೋಧನೆಗಳನ್ನು ನಡೆಸಿದ ರಾಮನ್ ದ್ರವಗಳಲ್ಲಿ ಬೆಳಕಿನ ಸಂಚಲನೆಯ ಕುರಿತಾದ ಸುದೀರ್ಘ ಅಧ್ಯಯನವನ್ನು ಕೈಗೊಂಡು ಆ ಪ್ರಯೋಗಗಳ ಪರಿಣಾಮವನ್ನು ಫೆಬ್ರುವರಿ 28, 1928ರಂದು  ವೈಜ್ಞಾನಿಕ ಲೋಕದೆದುರು ತೆರೆದಿಟ್ಟರು.  ‘ರಾಮನ್ ಪರಿಣಾಮ’ ಎಂದು ವಿಶ್ವಪ್ರಸಿದ್ಧವಾದ  ಈ ಸಂಶೋಧನೆಗಾಗಿ ರಾಮನ್ ಅವರಿಗೆ 1930ರ ವರ್ಷದಲ್ಲಿ  ನೋಬಲ್ ಪಾರಿತೋಷಕ ಸಂದಿತು ಎಂಬುದು ನಮಗೆಲ್ಲಾ ತಿಳಿದಿರುವ ವಿಚಾರ. ರಾಮನ್ ಅವರ ಈ ಸಂಶೋಧನೆ ಪ್ರಕಟಗೊಂಡ ದಿನವಾದ ಫೆಬ್ರುವರಿ 28 ದಿನವನ್ನು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸಲಾಗುತ್ತಿದೆ.

ಸಿ. ವಿ. ರಾಮನ್ನರು ಸುಮಾರು ಹದಿನೇಳು ವರ್ಷಗಳ ಕಾಲ ಕಲ್ಕತ್ತಾ ವಿಶ್ವವಿದ್ಯಾಲಯದಲ್ಲಿ ಭೌತಶಾಸ್ತ್ರ ಪ್ರಾಧ್ಯಾಪಕರಾಗಿದ್ದು ನಂತರ ಭಾ... Read more

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....