ವಿಷಯಕ್ಕೆ ಹೋಗಿ

ಕರ್ನಾಟಕ ರತ್ನ ಡಾ|| ಶ್ರೀ.ಶಿವಕುಮಾರ ಸ್ವಾಮಿಗಳು

(೦೧ ಏಪ್ರಿಲ್ ೧೯೦೭ - ೨೧ ಜನವರಿ ೨೦೧೯) ತುಮಕೂರು ಜಿಲ್ಲೆಯ ಸಿದ್ದಗಂಗಾ ಮಠದ  ಮಠಾಧಿಪತಿಗಳು. ಇವರು ತ್ರಿವಿಧ (ಅನ್ನ, ಅಕ್ಷರ, ಜ್ಞಾನ) ದಾಸೋಹಿ. ೧೨ನೇ ಶತಮಾನದ ಯುಗಪುರುಷ ಕ್ರಾಂತಿಕಾರಿ ಬಸವಣ್ಣನವರ  "ಕಾಯಕವೇ ಕೈಲಾಸ" ಮತ್ತು ನಿತ್ಯ ದಾಸೋಹ ತತ್ವದ ಕೈಂಕರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಶ್ರೀಗಳು. ಮಾರ್ಚ್ ೩, ೧೯೩೦ರಲ್ಲಿ  ಇವರು ಶ್ರೀಮಠದ ಜವಾಬ್ದಾರಿಯನ್ನು ಹೊತ್ತು ಅಂದಿನಿಂದ ನಿರಂತರವಾಗಿ ಮಠ, ಯಾವುದೋ ಒಂದು ಧರ್ಮಕ್ಕೆ ಸ್ಥೀಮಿತವಾಗದೆ ಎಲ್ಲ ಧರ್ಮಗಳ ಮತ್ತು ಸಮಾಜದ ಏಳಿಗೆಗಾಗಿ ಶ್ರಮಿಸಿದ್ದಾರೆ

🙏🙏 ಶ್ರೀ ಶಿವಕುಮಾರ ಸ್ವಾಮಿಗಳು  🙏🙏

ಜನನ: 1 ಏಪ್ರಿಲ್ 1907

ಜನನ ಸ್ಥಳ: ಮಾಗಡಿ ತಾಲೂಕಿನ ವೀರಾಪುರ

ನಿಧನ: ಜನವರಿ 21, 2019

ಗುರು: - ಶ್ರೀ ಉದ್ಧಾನ ಸ್ವಾಮೀಜಿಗಳು

ಶಿಷ್ಯರು: ಸಿದ್ದಗಂಗಾ ಶಿಕ್ಷಣ ಸಂಸ್ಥೆಯಲ್ಲಿ ವಿಧ್ಯಾಭ್ಯಾಸ ಮಾಡಿದ ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ದೇಶದ ಅಸಂಖ್ಯಾತ ಭಕ್ತವರ್ಗ

ತತ್ವಜ್ಞ್ಯಾನ: 'ಕಾಯಕವೇ ಕೈಲಾಸ'

ಪ್ರಶಸ್ತಿಗಳು/ಬಿರುದುಗಳು: - ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಕಾಯಕ ಯೋಗಿ

ನುಡಿ: - ಕಾಯಕವೇ ಕೈಲಾಸ

ದೇಶ ಮತ್ತು ಸಮಾಜದ ಪ್ರಗತಿಯ ಬಗ್ಗೆ ಕಳಕಳಿಯಿರುವ ಸ್ವಾಮೀಜಿಯವರು ಮುಂದಿನ ಪೀಳಿಗೆಯ ಬೆಳವಣಿಗೆಗಾಗಿ ಪಣತೊಟ್ಟಿರುವರು. ಇವರು ಸಮಾಜದ ಎಷ್ಟೋ ಗಣ್ಯರ ಬಾಲ್ಯ ಜೀವನಗಳ ಪರಿವರ್ತನೆಗೆ ಕಾರಣವಾಗಿದ್ದಾರೆ. ತಮ್ಮ ಮಠದಲ್ಲಿ ಹತ್ತು ಸಾವಿರ ವಿದ್ಯಾರ್ಥಿಗಳಿಗೆ ಆಶ್ರಯವನಿತ್ತು ತ್ರಿವಿಧ ದಾಸೋಹವನ್ನು ಸತತವಾಗಿ ನಡೆಸುತ್ತಾ ಬಂದಿದ್ದಾರೆ.

ಶ್ರೀಗಳ ಪೂರ್ವಾಶ್ರಮ

ಮಾಗಡಿ ತಾಲೂಕಿನ ವೀರಾಪುರದ ಶ್ರೀಯುತ ಹೊನ್ನೇಗೌಡ ಮತ್ತು ತಾಯಿ ಗಂಗಮ್ಮನವರಿಗೆ ಎಪ್ರಿಲ್ ೧, ೧೯೦೮ರಲ್ಲಿ ೧೩ನೇ ಮಗು ಶಿವಣ್ಣನವರಾಗಿ ಜನಿಸಿದರು. ಹೊನ್ನೆಗೌಡ ದಂಪತಿಗಳಿಗೆ ಎಂಟು ಜನ ಗಂಡು ಮಕ್ಕಳು ಹಾಗೂ ಐದು ಹೆಣ್ಣು ಮಕ್ಕಳು, ಎಲ್ಲರಿಗಿಂತಲೂ ಕಿರಿಯರಾದ ಶಿವಣ್ಣನವರೆಂದರೆ ತಂದೆ ತಾಯಿಗಳಿಗೆ ಅಪಾರ ಪ್ರೀತಿ. ವೀರಾಪುರದಲ್ಲಿಯೇ ಇದ್ದ ಕೂಲಿಮಠ ದಲ್ಲಿ ಮರಳಿನ ಮೇಲೆ ಅಕ್ಷರ ತಿದ್ದುವ ಮೂಲಕ ಶಿವಣ್ಣನ ಶೈಕ್ಷಣಿಕ ಜೀವನ ಆರಂಭವಾಯಿತು. ಅನಂತರ ಪ್ರಾಥಮಿಕ ಶಾಲೆಗಾಗಿ ಪಕ್ಕದಲ್ಲಿಯೇ ಇರುವ ಪಾಲನಹಳ್ಳಿಯ ಶಾಲೆಗೆ ದಾಖಲಾದರು. ತಮ್ಮ ಶಾಲಾ ಪ್ರಾಥಮಿಕಾ ಶಾಲಾ ದಿನಗಳಲ್ಲಿಯೇ ತಾಯಿಯನ್ನು ಕಳೆದುಕೊಡ ಶಿವಣ್ಣ ಅನಂತರ ಬೆಳೆದಿದ್ದು ಅಕ್ಕನ ಆಸರೆಯಲ್ಲಿ. ತುಮಕೂರು ಬಳಿ ಇರುವ ನಾಗವಲ್ಲಿ ಯಲ್ಲಿ ಮಾಧ್ಯಮಿಕ ಶಿಕ್ಷಣ ಮುಗಿಸಿದ ಶಿವಣ್ಣ ೧೯೨೨ರಿಂದ ತುಮಕೂರಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಕಲಿತು ೧೯೨೬ರಲ್ಲಿ ಮೆಟ್ರಿಕ್ಯುಲೇಷನ್ ಗಳಿಸಿದರು. ೧೯೨೭ರಲ್ಲಿ ಆಗಿನ ಸಿದ್ದಗಂಗಾ ಮಠಾಧಿಪತಿಗಳಾದ ಶ್ರೀ ಶ್ರೀ ಶ್ರೀ ಉದ್ದಾನ ಶಿವಯೋಗಿಗಳವರೊಡನಾಟ ಆಯಿತು. ಇದೇ ವರ್ಷ ಎಂಟ್ರೆನ್ಸ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಬೆಂಗಳೂರಿನ ಸೆಂಟ್ರಲ್ ಕಾಲೇಜಿಗೆ ಸೇರಿದರು. ಬೆಂಗಳೂರಿನಲ್ಲಿ 'ರಾವ್ ಬಹದ್ದೂರ್ ಧರ್ಮಪ್ರವರ್ತ ಶ್ರೀ ಗುಬ್ಬಿ ತೋಟದಪ್ಪ ಧರ್ಮ ಛತ್ರ' ದಲ್ಲಿ ಉಳಿದುಕೊಂಡು, ಸೆಂಟ್ರಲ್ ಕಾಲೇಜ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಾ ಶಿವಣ್ಣನವರು ಶಿಸ್ತುಬದ್ಧವಾದ ಕಟ್ಟು ನಿಟ್ಟಾದ ವಿದ್ಯಾರ್ಥಿ ಜೀವನ ನಡೆಸಿದರು.ವಿದ್ಯಾಭ್ಯಾಸದೊಂದಿಗೆ ಸಿದ್ದಗಂಗಾ ಮಠದ ಒಡನಾಟವಂತೂ ಮುಂದುವರೆದೇ ಇತ್ತು. ಹಿರಿಯ ಗುರುಗಳಾದ ಶ್ರೀ ಉದ್ಧಾನ ಸ್ವಾಮಿಜಿಗಳ ಹಾಗು ಆಗ ಕಿರಿಯ ಶ್ರೀಗಳಾಗಿದ್ದ ಮರುಳಾರಾಧ್ಯರ ಸಂಗ ಶಿವಣ್ಣನವರಿಗೆ ಒಂದು ಹಿತಾನುಭೂತಿ ನೀಡುತ್ತಿತು. ಶಿವಣ್ಣನವರು ಎಲ್ಲ ಸಮಯಗಳಲ್ಲೂ ಮಠದ ಹಿತವನ್ನು ಬಯಸುತ್ತ ಮಠಕ್ಕೆ ಬಂದು ಹೋಗಿ ಮಾಡುತ್ತಿದ್ದರು, ಎಷ್ಟರ ಮಟ್ಟಿಗೆ ಎಂದರೆ ಇಡೀ ತುಮಕೂರು ಜಿಲ್ಲೆ ಒಮ್ಮೆ ಭೀಕರ ಪ್ಲೇಗ್ ರೋಗಕ್ಕೆ ತತ್ತರಿಸಿತು ಹಾಗಿದ್ದಾಗ್ಯೂ ಶಿವಣ್ಣನವರ ಹಾಗು ಮಠದ ಒಡನಾಟ ಎಂದಿನತೆಯೇ ಇತ್ತು.

ಮಠಾಧಿಪತಿಯಾಗಿ

ಶ್ರೀ ರಕ್ಷೆಯಿಂದ ಉತ್ತಮವಾಗಿ ನಡೆಯುತ್ತಿದ್ದ ಸಿದ್ದಗಂಗಾ ಮಠಕ್ಕೆ ೧೯೩೦ರಲ್ಲಿ ಬರ ಸಿಡಿಲು ಬಡಿದಂತಹ ಒಂದು ಘಟನೆ ನಡೆಯುತ್ತದೆ. ಅದೇನೆಂದರೆ ಉದ್ದಾನ ಶಿವಯೋಗಿಗಳ ಕಿರಿಯ ಶ್ರೀಗಳಾಗಿದ್ದ ಮರುಳಾರಾಧ್ಯರು ಆಕಸ್ಮಿಕವಾಗಿ ಶಿವೈಕ್ಯರಾಗುತ್ತಾರೆ. ಆಗ ಅವರ ಕ್ರಿಯಾ ಸಮಾಧಿ ಕಾರ್ಯಕ್ಕೆ ಆಗಮಿಸಿದ್ದ ಶಿವಣ್ಣನವರ ಕಡೆ ಉದ್ಧಾನ ಸ್ವಾಮಿಜಿಗಳ ದೃಷ್ಟಿ ಹರಿಯುತ್ತದೆ. ಅಷ್ಟರಲ್ಲಾಗಲೇ ಶಿವಣ್ಣನವರ ಹಿನ್ನೆಲೆಯ ಅರಿವಿದ್ದ ಉದ್ಧಾನ ಶ್ರೀಗಳು ಯಾರ ಹೇಳಿಕೆಗೂ ಕಾಯದೆ ಎಲ್ಲರ ಸಮ್ಮುಖದಲ್ಲಿ ಶಿವಣ್ಣನೇ ಈ ಮಠದ ಉತ್ತರಾಧಿಕಾರಿ ಎಂದು ಘೋಷಿಸಿ ಬಿಡುತ್ತಾರೆ. ಎಲ್ಲರಂತೆ ಸಾಮಾನ್ಯರಾಗಿ ಕ್ರಿಯಾ ಸಮಾಧಿ ಕಾರ್ಯಕ್ಕೆ ಬಂದಿದ್ದ ಶಿವಣ್ಣನವರು ಹೋಗುವಾಗ ಕಾವಿ, ರುದ್ರಾಕ್ಷಿಗಳನ್ನು ಧರಿಸಿದ ಸನ್ಯಾಸಿಯಾಗಿ 'ಶ್ರೀ ಶಿವಕುಮಾರ ಸ್ವಾಮಿಜಿ'ಗಳಾಗಿ ಹಿಂದಿರುಗುತ್ತಾರೆ ಇದನ್ನು ನೋಡಿ ಎಲ್ಲರೂ ಆಶ್ಚರ್ಯಚಕಿತರಾಗುತ್ತಾರೆ. ಸನ್ಯಾಸತ್ವ ಸ್ವೀಕಾರದ ನಂತರವೂ ವಿದ್ಯಾಭ್ಯಾಸ ಮುಂದುವರಿಸಿದ ಶಿವಣ್ಣನವರು ಮತ್ತೆ ಬೆಂಗಳೂರಿಗೆ ಬಂದು ಸನ್ಯಾಸತ್ವದ ರೀತಿ ರಿವಾಜುಗಳನ್ನು ಸಂಪ್ರದಾಯಬದ್ಧವಾಗಿ ಪಾಲಿಸುತ್ತಲೂ ಹಾಗು ಶಿಸ್ತುಬದ್ಧ ವಿದ್ಯಾರ್ಥಿಯಾಗಿಯೂ ತಮ್ಮ ಒಡನಾಡಿಗಳ ಮನ ಗೆಲ್ಲುವಲ್ಲಿ ಯಶಸ್ವಿಯಾಗುತ್ತಾರೆ.ವಿದ್ಯಾಭ್ಯಾಸ ಮುಗಿದು ಸ್ವಾಮಿಜಿಯವರು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿ ಸಿದ್ದಗಂಗಾ ಮಠಕ್ಕೆ ಹಿಂದಿರುಗಿ, ಅಂದಿನಿಂದ ತಮ್ಮ ಪೂರ್ಣ ಸಮಯವನ್ನು ಮಠದ ಏಳಿಗೆಗಾಗಿ ಮೀಸಲಿಡುತ್ತಾರೆ. ಇದಾಗಿ ಮುಂದೆ ಶ್ರೀ ಉದ್ಧಾನ ಶಿವಯೋಗಿಗಳು ಶಿವೈಕ್ಯರಾದಾಗ ಮಠದ ಸಕಲ ಆಡಳಿತವೂ, ಮಠದ ವಿದ್ಯಾರ್ಥಿಗಳ, ಶಿಕ್ಷಣ ಸಂಸ್ಥೆಗಳ ಯೋಗ ಕ್ಷೇಮದ ಜವಾಬ್ದಾರಿಯೂ ಶ್ರೀಗಳವರಿಗೆ ಹಸ್ತಾಂತರವಾಗುತ್ತದೆ.

ಮಠಾಧಿಕಾರದ ಆರಂಭದ ದಿನಗಳು

ಶ್ರೀಗಳು ಮಠದ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡ ಸಂಧರ್ಭದಲ್ಲಿ ಮಠದ ಆದಾಯ ತುಂಬಾ ಕಡಿಮೆ ಇತ್ತು. ಮಠಕ್ಕೆಂದು ಮೀಸಲಾಗಿದ್ದ ಜಮೀನಿನಲ್ಲಿ ಬೆಳೆದು ವಿಧ್ಯಾರ್ಥಿಗಳ ಸನಿವಾಸ ಶಿಕ್ಷಣ ಸಂಸ್ಥೆಗಳನ್ನು ನಡೆಸುವುದು ಕಷ್ಟದಾಯಕವಾಗಿತ್ತು. ಮಠದ ಭೂಮಿಯೆಲ್ಲ ಮಳೆಯಾಧಾರಿತವಾದದ್ದು ಮತ್ತೂ ತೊಡಕಾಗಿ ಅತಿವೃಷ್ಟಿ,  ಅನಾವೃಷ್ಟಿಗಳಂತಹ ಸಮಯದಲ್ಲಿ ಬಹಳ ಕಷ್ಟವಾಗುತ್ತಿತ್ತು. ಇದನ್ನೆಲ್ಲಾ ಧೈರ್ಯವಾಗಿ ಮೆಟ್ಟಿ ನಿಂತ ಶ್ರೀಗಳು ಭಕ್ತರ ಮನೆಗೆ ಭಿನ್ನಹವೇ ಮೊದಲಾದ ಆದ್ಯತೆಗಳ ಮೇರೆಗೆ ನಡೆದುಕೊಂಡೇ ಹೋಗಿ ಅಲ್ಲಿಂದ ಧವಸ ಧಾನ್ಯಗಳನ್ನು ತಂದಿದ್ದೂ ಉಂಟು. ಬರಿಯ ಶಿಕ್ಷಣ ಸಂಸ್ಥೆಗಳ ಜವಾಬ್ದಾರಿಯಷ್ಟೇ ಅಲ್ಲದೆ ದಿನ ನಿತ್ಯ ಮಠದಲ್ಲಿ ನಡೆಯಬೇಕಾದ ಧಾರ್ಮಿಕ ಕಾರ್ಯಗಳು, ಮಠಕ್ಕೆ ಭಕ್ತರ ಹಾಗು ಗಣ್ಯರ ಭೇಟಿ, ಮಠದ ಅರ್ಥಿಕ ನಿರ್ವಹಣೆಗಳೂ ಸೇರಿ ಶ್ರೀಗಳಿಗೆ ಬಿಡುವಿಲ್ಲದ ಕಾರ್ಯ ಪಟ್ಟಿಯೇ ಇರುತ್ತಿತ್ತು. ಆರಂಭದ ದಿನಗಳಲ್ಲಿ 'ಶ್ರೀಗಳು ಇವನ್ನೆಲ್ಲ ನಿಭಾಯಿಸಲು ಸಾಧ್ಯವಿಲ್ಲ' ಎಂಬ ಆಡು ನುಡಿಗಳೂ ಕೇಳಿಬಂದಿದ್ದವು. ಇದ್ಯಾವುದಕ್ಕೂ ಧೃತಿಗೆಡದ ಶ್ರೀಗಳು ಪೂಜ್ಯ ಲಿ. ಶ್ರೀ ಅಟವೀ ಸ್ವಾಮಿಗಳ ಹಾಗು ಲಿ. ಶ್ರೀ ಉದ್ಧಾನ ಸ್ವಾಮಿಗಳ ಆಶಯದಂತೆ ಯಾವುದೇ ತೊಡಕುಗಳಾಗದಂತೆ ಮಠದ ಶಿಕ್ಷಣ ಸಂಸ್ಥೆಗಳನ್ನು, ವಿದ್ಯಾರ್ಥಿ ನಿಲಯಗಳನ್ನು, ಪ್ರಸಾದ ನಿಲಯಗಳನ್ನು ಸಮರ್ಥವಾಗಿ ಮುನ್ನಡೆಸುತ್ತಾರೆ. ಅಷ್ಟರಲ್ಲಾಗಲೇ ಸ್ವಾತಂತ್ರ್ಯ ಕಂಡು ಸ್ವಾಯತ್ತತೆಯೆಡೆಗೆ ಅಡಿಯಿಡುತ್ತಿದ್ದ ಭಾರತ ಶಿಕ್ಷಣದ ಮಹತ್ವವನ್ನು ದೇಶದೆಲ್ಲೆಡೆ ಪಸರಿಸಲು ಹಾಗು ಮುಖ್ಯವಾಗಿ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣದ ಪ್ರಾಮುಖ್ಯತೆಯನ್ನು ತಿಳಿಸಲು ಸರ್ಕಾರವೂ ಸೇರಿದಂತೆ ಅನೇಕ ಮಹನೀಯರು ಮೊದಲಾದರು. ಆದರೆ ಸಿದ್ದಗಂಗೆಯಲ್ಲಿ ಅದಾಗಲೇ ಅವೆಲ್ಲವೂ ಕಾರ್ಯರೂಪಕ್ಕೆ ಬಂದಾಗಿತ್ತು. ಸಾಲದ್ದಕ್ಕೆ ಅಲ್ಲಿ ಕಲಿಯುತ್ತಿದ್ದ ಬಹುಪಾಲು ಎಲ್ಲರೂ ಗ್ರಾಮೀಣ ಮಕ್ಕಳೇ. ಈ ಕಾರ್ಯ ರಾಷ್ಟ್ರ ಮಟ್ಟದಲ್ಲೂ ಬಹಳ ಶ್ಲಾಘನೆಗೆ ಒಳಗಾಗಿ, ಸಿದ್ದಗಂಗೆಯ ಕೀರ್ತಿ ಎಲ್ಲೆಡೆ ಹರಡಲು ಪ್ರಾರಂಭವಾಯಿತು.ಸಿದ್ದಗಂಗೆಯ ಕೀರ್ತಿ ಪಸರಿಸಿದಂತೆ ಅಲ್ಲಿನ ಭಕ್ತ ವರ್ಗವೂ, ವಿಧ್ಯಾರ್ಥಿ ಸಂಕುಲವೂ ಕಾಲಕ್ರಮೇಣ ಹೆಚ್ಚುತ್ತಾ ಹೋಯಿತು. ಇದು ಸ್ವಾಮೀಜಿಯವರ ದೂರದರ್ಶಿತ್ವಕ್ಕೆ ಒಂದು ಉದಾಹರಣೆ.

ಶ್ರೀಗಳ ದಿನಚರಿ

ಪ್ರತಿದಿನವೂ ಶ್ರೀಗಳು ಬೆಳಗಿನ ನಾಲ್ಕುಗಂಟೆಗೆ ಎದ್ದು ಸ್ನಾನಮಾಡಿ, ಪೂಜಾಕೋಣೆಯಲ್ಲಿ ಒಂದು ತಾಸಿಗೂ ಹೆಚ್ಚು ಸಮಯ ಧ್ಯಾನದಲ್ಲಿ ತಲ್ಲೀನರಾಗುತ್ತಾರೆ. ನಂತರ ಇಷ್ಟಲಿಂಗ ಪೂಜೆ. ದೂರದಿಂದ ಸ್ವಾಮಿಗಳ ದರ್ಶನಕಾಗಿ ಬರುವ ಭಕ್ತರಿಗೆ ತ್ರಿಪುಂಢ್ರ ಭಸ್ಮವನ್ನು ಕೊಟ್ಟು ತಾವೂ ಧರಿಸಿ, ಪೂಜೆಯನ್ನು ಮುಗಿಸುತ್ತಾರೆ. ನಂತರ ಆಹಾರ ಸೇವನೆ, ಮುಂಜಾನೆ ಆರೂವರೆಗಂಟೆಗೆ. ಒಂದು ಅಕ್ಕಿ-ಇಡ್ಲಿ, ಸ್ವಲ್ಪ ಹೆಸರುಬೇಳೆ-ತೊವ್ವೆ, 'ಸಿಹಿ' ಹಾಗೂ 'ಖಾರ ಚಟ್ನಿ' ಸೇವನೆ. ಎರಡು ತುಂಡು ಸೇಬು. ಇದರ ಬಳಿಕ, 'ಬೇವಿನ-ಚಕ್ಕೆ ಕಷಾಯ' ಸೇವನೆಯಾಗುತ್ತದೆ.

ಪ್ರಾರ್ಥನೆ

ಮುಂಜಾನೆ ಮತ್ತು ಸಂಜೆ ಮಠದ ಆವರಣದಲ್ಲಿ ಮಕ್ಕಳಿಂದ ನಡೆಯುವ ಪ್ರಾರ್ಥನೆಯಲ್ಲಿ ಶ್ರೀಗಳು ಪಾಲ್ಗೊಳ್ಳುತ್ತಾರೆ, ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಂದ ಹಿಡಿದು ಪದವಿ ಅಭ್ಯಾಸದಲ್ಲಿರುವ ತರುಣರ ವರೆಗೂ ಸಾವಿರಾರು ಮಂದಿ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳುವುದನ್ನು ನೋಡಲು ಕಣ್ಣುಗಳು ಪುಣ್ಯ ಮಾಡಿರಬೇಕು. ಮಠದ ಆವರಣದಲ್ಲಿರುವ ವಿಧ್ಯಾರ್ಥಿ ನಿಲಯದ ಮುಂದಿರುವ ವಿಶಾಲವಾದ ಬಯಲಿನಲ್ಲಿ ಸಾವಿರಾರು ಜನ ಒಟ್ಟಿಗೆ ಪ್ರಾರ್ಥನೆ ಮಾಡುವುದನ್ನು ನೋಡುವುದೂ ಸಿದ್ಧಗಂಗೆಯ ಒಂದು ಪ್ರಮುಖ ಆಕರ್ಷಣೆ.
ಪ್ರಾರ್ಥನೆಯ ನಂತರ ಕಛೇರಿಗೆ ಧಾವಿಸುವ ಶ್ರೀಗಳು ದಿನ ಪತ್ರಿಕ... Read more, In list, 825,  items

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....

**ಜ್ಞಾನ ಕಾರಂಜಿ**::: ನೀತಿ ಆಯೋಗ ಸ್ಥಾಪನೆ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ಕ್ಕೆ ನಾಲ್ಕು ವರ್ಷ. ಸರ್ಕಾರದ ಈ ಅವಧಿಯ ಪಯಣದಲ್ಲಿನ ಪ್ರಮುಖ ರಂಗಗಳ ಚಿತ್ರಣವನ್ನು ವಿಜಯವಾಣಿ ಸರಣಿಯಾಗಿ ಕಟ್ಟಿಕೊಡಲಿದ್ದು, ಅದರ ಎರಡನೇ ಭಾಗ ಇಲ್ಲಿದೆ. ನೆಹರು ಅವಧಿಯಲ್ಲಿ ರಚನೆಯಾಗಿದ್ದ ಯೋಜನಾ ಆಯೋಗವನ್ನು ರದ್ದುಗೊಳಿಸಿ 2015ರ ಜ.1ರಂದು ನೀತಿ ಆಯೋಗ ರಚಿಸಲಾಯಿತು. ಅಮೃತ್, ಡಿಜಿಟಲ್ ಇಂಡಿಯಾ, ಅಟಲ್ ಇನೋವೇಷನ್, ಸಂಚಾರ ದಟ್ಟಣೆ ನಿಯಂತ್ರಣ ಸೇರಿ ಕೆಲ ಯೋಜನೆಗಳ ನೇರ ಉಸ್ತುವಾರಿಯನ್ನು ನೀತಿ ಆಯೋಗ ವಹಿಸಿಕೊಂಡಿದೆ. ಪ್ರಧಾನಿ ಅಧ್ಯಕ್ಷತೆಯ ಈ ಆಯೋಗದಲ್ಲಿ ರಾಜ್ಯಗಳ ಹಣಕಾಸು ಸಚಿವರು ಸದಸ್ಯರಾಗಿರುತ್ತಾರೆ. 15 ವರ್ಷ ಹಾಗೂ 7 ವರ್ಷಗಳ ಪ್ರತ್ಯೇಕ ಗುರಿಯ ಯೋಜನೆಯ ಜತೆಗೆ, ವಾರ್ಷಿಕ ಕಾರ್ಯಕ್ರಮಗಳ ಬಗ್ಗೆ ಈ ಸಂಸ್ಥೆ ನಿಗಾ ಇಡಲಿದೆ. ಆಡಳಿತಕ್ಕೆ ಹೊಸ ಸ್ಪರ್ಶ ‘ಮಿನಿಮಮ್ ಗವರ್ನಮೆಂಟ್, ಮ್ಯಾಕ್ಸಿಮಮ್ ಗವರ್ನನ್ಸ್’ (ಕನಿಷ್ಠ ಸರ್ಕಾರ ಗರಿಷ್ಠ ಆಡಳಿತ) ಧ್ಯೇಯ ವಾಕ್ಯದೊಂದಿಗೆ ಪ್ರಧಾನಿ ಕಚೇರಿಗೆ ನರೇಂದ್ರ ಮೋದಿ ಕಾಲಿಟ್ಟಿದ್ದರು. ತೆರಿಗೆ ವ್ಯವಸ್ಥೆಯಿಂದ ಹಿಡಿದು ಆಡಳಿತದ ಪ್ರತಿ ಹಂತದಲ್ಲಿಯೂ ಸುಧಾರಣೆ ತರುವ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಸರ್ಕಾರ ಕೆಲ ಹೆಜ್ಜೆಗಳನ್ನು ಇರಿಸಿದೆ. ಓಬೀರಾಯನ ಕಾಲದ ಕಾನೂನು ರದ್ದು ದೇಶದಲ್ಲಿ ಹಳೆಯ ಅನವಶ್ಯಕ ಕಾಯ್ದೆಗಳಿಂದ ಕೋರ್ಟ್ ಖಟ್ಲೆಗಳಲ್ಲಿ ವಿಳಂಬವಾಗುತ್ತದೆ. ಈ ಕಾರಣದಿಂದ ಸುಮಾರು 3 ಸಾವಿರ ...