ವಿಷಯಕ್ಕೆ ಹೋಗಿ

KAS ಪರೀಕ್ಷೆಯ ತಯಾರಿಗಾಗಿ ಅಭ್ಯರ್ಥಿಯಲ್ಲಿ ಈ ಕೆಳಗಿನ ಗುಣಗಳು ಇರಬೇಕು:~

★ ಕೆ.ಎ.ಎಸ್. ಅಧಿಕಾರಿಯಾಗಬೇಕೆಂಬ ಬಲವಾದ ಆಸಕ್ತಿ ಇರಬೇಕು. ಏನೋ ಒಂದು ಕೈ ನೋಡುತ್ತೇನೆಂಬ ಭಾವನೆ ಇರಬಾರದು. ನೂರಕ್ಕೆ ನೂರರಷ್ಟು ಉತ್ಸಾಹ ಹಾಗೂ ಛಲ ಇರಬೇಕು.
★ ಪರೀಕ್ಷೆ ತಯಾರಿ ಮಾಡುವುದು ಬೇರೆ. ಅದರಲ್ಲಿ ಇಳಿಯುವುದು ಬೇರೆ. ಇಲ್ಲಿ ಪರೀಕ್ಷೆಗಾಗಿ ಆಳವಾದ ಅಧ್ಯಯನ ಮಾಡಬೇಕು. ಸಮುದ್ರ ಮೇಲ್ಗಡೆ ತೆರೆಗಳು ಹೆಚ್ಚಾಗಿ ಇರುವುವು. ಆದರೆ ಒಳಗೆ ಹೋದಂತೆ ಅಲ್ಲಿ ಪ್ರಶಾಂತತೆ ಇರುವುದು. ಅದೇ ರೀತಿ ಮೇಲ್ನೋಟಕ್ಕೆ ತಯಾರಿ ನಡೆಸಿದಾಗ ಮೈಂಡ್ ಡಿಸ್ಟರ್ಬ್ ಜಾಸ್ತಿ ಇರುವುದು. ಅದರಲ್ಲಿ ಆಳವಾಗಿ ತೊಡಗಿದಾಗ ನಮ್ಮ ಓದಿಗೆ ಡಿಸ್ಟರ್ಬ್ ಕಡಿಮೆಯಾಗುವುದು.!!
★ ಪರೀಕ್ಷೆಗಾಗಿ ನಿಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಾಗ, ಅದರಿಂದ ಹೊರಗೆ ಬರಬಾರದು. ಅದನ್ನು ದೃಢತೆ ಎನ್ನುವರು. ದೃಢವಾದ ಮನಸ್ಸು ಇಟ್ಟು ತಯಾರಿ ನಡೆಸಬೇಕು. ಕೆಲವರು ಕೆ.ಎ.ಎಸ್. ಪರೀಕ್ಷೆಗಾಗಿ ಪೂರ್ಣ ತಯಾರಿ ನಡೆಸಿದ್ದಾಗ, ಇನ್ನೊಂದು ಪರೀಕ್ಷೆ ಕಾಲ್ ಫಾರ್ಂ ಆದ ಕೂಡಲೇ ಕೆ.ಎ.ಎಸ್. ಅಲ್ಲೇ ಬಿಟ್ಟು ಇನ್ನೊಂದು ಪರೀಕ್ಷೆಗೂ ತಯಾರಿ ನಡೆಸುತ್ತಾರೆ. ಅದನ್ನು ಪೂರ್ಣಗೊಳಿಸದೆ, ಮತ್ತೊಂದು ಪರೀಕ್ಷೆಗೆ ಜಿಗಿಯುತ್ತಾರೆ. ಇಂಥವರು ಯಾವ ಪರೀಕ್ಷೆಯಲ್ಲಿಯೂ ಯಶಸ್ವಿಯಾಗುವುದಿಲ್ಲ.
 
ಇಂಥ ಪರೀಕ್ಷೆ ತಯಾರಿ ನಡೆಸಿದಾಗ ನಿಮ್ಮ ಮನಸ್ಸನ್ನು ಆಕರ್ಷಣೆಯಿಂದ ದೂರ ಇಡಬೇಕು. ಆಕರ್ಷಣೆಗೆ ಒಳಗಾಗಿ ಓದುತ್ತಾ ಇದ್ದಾಗ ಅಭ್ಯಾಸ ಪರಿಪೂರ್ಣವಾಗುವುದಿಲ್ಲ. ಮುಗ್ಧ ಮನಸ್ಸು ಏಕಾಗ್ರತೆಗೊಳ್ಳುವುದಿಲ್ಲ. ಯಾವುದೋ ಭಾವಲೋಕದಲ್ಲಿ ಓದುತ್ತಾ ಇರುವುವರು ಅವರು ಎಷ್ಟೇ ಗಂಟೆ ಓದಿದರೂ ಕೂಡಾ, ತಾವು ಯಾವುದು ಓದಿದ್ದು ಎಂಬುದು ಗೊತ್ತಿರುವುದಿಲ್ಲ.!!
★ ಈ ಪರೀಕ್ಷೆಗೆ ಎಷ್ಟು ಗಂಟೆ ತಯಾರಿ ನಡೆಸಬೇಕು? ಎಂಬ ಪ್ರಶ್ನೆ ಬಹಳಷ್ಟು ಅಭ್ಯರ್ಥಿಗಳ ಪ್ರಶ್ನೆಯಾಗಿದೆ. ನನ್ನ ಪ್ರಕಾರ ಕನಿಷ್ಠ ೧೦ ರಿಂದ ೧೪ ತಾಸು ಓದಬೇಕು. ಕೆಲವರಿಗೆ ಗಾಬರಿಯಾಗಬಹುದು. ಇದಕ್ಕಿಂತ ಕಡಿಮೆ ಅವಧಿಯನ್ನು ತೆಗೆದುಕೊಂಡರೆ, ವಿಷಯವನ್ನು ಪೂರ್ಣಗೊಳಿಸಲು ಸಾಧ್ಯವಿಲ್ಲವೆನೋ? ಎಂದು ಕೆಲವರು ಹೇಳುವ ಪ್ರಕಾರ ಎಷ್ಟು ಗಂಟೆ ಓದುವುದು ಮುಖ್ಯವಲ್ಲ ಎಷ್ಟು ವಿಷಯ ತಿಳಿದುಕೊಂಡೆವು ಎಂಬುವುದು ಮುಖ್ಯವಾಗುತ್ತದೆ. ಆದರೆ, ಅಧ್ಯಯನಕ್ಕೆ ಕೂಡುವ ಅವಧಿ ಹೆಚ್ಚಿದಂತೆ, ಸಹಜವಾಗಿ ಏಕಾಗ್ರತೆ ಹಾಗೂ ಅರ್ಥ ಮಾಡಿಕೊಳ್ಳುವುದು ಕಡಿಮೆಯಾಗುತ್ತದೆ.!!
★ ಸಾಮಾನ್ಯವಾಗಿ ಯಾವ ಸಮಯದಲ್ಲಿ ಓದಬೇಕು? ಎಂಬುದು ಮತ್ತೊಂದು ಪ್ರಶ್ನೆಯಾಗಿದೆ. ಇಲ್ಲಿ ಯಾವ ಸಮಯದಲ್ಲಿ ಓದುತ್ತೇನೆ ಎಂಬುದು ಮುಖ್ಯವಲ್ಲ. ಯಾವುದೇ ಸಮಯದಲ್ಲಿ ಓದಿ ಆದರೆ, ಮನಸ್ಸು ಕೊಟ್ಟು ಅಧ್ಯಯನ ಮಾಡಿ. ಸಾಮಾನ್ಯವಾಗಿ ಇಂಥ ಪರೀಕ್ಷೆಗೆ ತಯಾರಿ ನಡೆಸುವವರು ರಾತ್ರಿಯೇ ಹೆಚ್ಚು ಅಧ್ಯಯನ ಮಾಡುತ್ತಾರೆ.!!
★ ಈ ಪರೀಕ್ಷೆಗೆ ವಿಶೇಷ ತಯಾರಿ ಹಾಗೂ ಪರಿಶ್ರಮ ಬೇಕಾಗುವುದು. ಅದಕ್ಕಾಗಿ ಸಹನೆ ಇರಬೇಕು. ನಿರಂತರ ಓದುತ್ತಾ ಇದ್ದಾಗ, ಅದನ್ನು ಬಿಟ್ಟು ಓಡಿಹೋಗೋಣ ಎಂಬ ಮನಸ್ಸು ಬರುತ್ತದೆ. ಕೆಲವರು ೧೧ನೇ ಹೆಜ್ಜೆವರೆಗೆ ಬಂದಿರುತ್ತಾರೆ. ಇನ್ನೊಂದು ಹೆಜ್ಜೆ ಇಟ್ಟರೆ, ಗುರಿ ಮುಟ್ಟಲು ಸಾಧ್ಯವಿರುತ್ತದೆ. ಅದನ್ನು ಗುರ್ತಿಸದೆ, ಸಹನೆ ಕಳೆದುಕೊಂಡು ಸ್ಪರ್ಧೆಯಿಂದ ಹಿಂದಕ್ಕೆ ಸರಿಯುತ್ತಾರೆ. ಓಡಿ ಹೋಗುತ್ತಾರೆ.
 
ಗೆಜೆಟೆಡ್ ಪ್ರೊಬೇಷನರಿ(KAS) ಪರೀಕ್ಷೆಗೆ ತಯಾರಿ ಮಾಡುವಾಗ ನಮ್ಮ ಓದು ಎಷ್ಟು ಮುಖ್ಯವಾಗಿರುತ್ತದೆ. ಅಷ್ಟೇ ಮುಖ್ಯ ನಮಗೆ ಪ್ರೇರಣೆ ಹಾಗೂ ಸ್ಫೂರ್ತಿ. ಅದಕ್ಕಾಗಿ ಈಗಾಗಲೇ ಯಶಸ್ವಿಯಾದವರ ಸಂದರ್ಶನ ಓದಿ ಹಾಗೂ KAS ಪರೀಕ್ಷೆಗೆ ಸಂಬಂಧಪಟ್ಟ ಸೆಮಿನಾರ್‌ಗಳಲ್ಲಿ ಪಾಲ್ಗೊಳ್ಳುವುದರಿಂದ ನಿಮ್ಮ ಮನಸ್ಸು ಗಟ್ಟಿಯಾಗುತ್ತದೆ.
ಸಾಧಿಸಲು ಅವರು ತೆಗೆದುಕೊಂಡ ಸಮಯ, ಯಶಸ್ಸಿಗಾಗಿ ಪಟ್ಟ ಪರಿಶ್ರಮ ಎಲ್ಲವೂ ಗೊತ್ತಾಗುತ್ತದೆ.!!
★ ಓದುವಾಗ ಯಾವುದೇ ವಿಷಯ ತಿಳಿಯದಿದ್ದಾಗ ಗಾಬರಿಯಾಬೇಡಿ. ಎಲ್ಲರಿಗೂ ಎಲ್ಲಾ ವಿಷಯ ಗೊತ್ತಿರುವುದಿಲ್ಲ. ಯಾಕೆಂದರೆ ಯಾರೂ ಇಲ್ಲಿಯವರೆಗೆ ೧೦೦ಕ್ಕೆ ೧೦೦ ಅಂಕಗಳನ್ನು ತೆಗೆದುಕೊಂಡ ಉದಾಹರಣೆ ಇಲ್ಲ. ಕೆಲವರು ಒಂದೂ ಪ್ರಶ್ನೆ ಬರದಿದ್ದಾಗ ನಾನು ದಡ್ಡನೆಂಬ ಭಾವನೆ ಬೆಳೆಸಿಕೊಂಡು ಉತ್ಸಾಹ ಕಳೆದುಕೊಳ್ಳುತ್ತಾರೆ.!!
★ ಕೆಲವರಿಗೆ ಈ ಪರೀಕ್ಷೆ ಎಂದರೆ ಪುಸ್ತಕಗಳನ್ನು ಸಂಗ್ರಹಿಸುವುದು ಎಂದು ತಿಳಿದುಕೊಂಡು ಎಲ್ಲಾ ಪುಸ್ತಕಗಳನ್ನು ಖರೀದಿಸುತ್ತಾರೆ. ಆದರೆ, ಯಾವುದನ್ನೂ ಪೂರ್ಣವಾಗಿ ಓದುವುದಿಲ್ಲ. ಉತ್ತಮ ಪುಸ್ತಕಗಳು ಇದ್ದರೆ ಸಾಕು.!!
★ ಉನ್ನತ ಪರೀಕ್ಷೆ ಬರೆಯಬೇಕಾದರೆ ಅಧ್ಯಯನದ ಕೊಠಡಿಯು ಕೂಡ ಅಷ್ಟೇ ಉತ್ತಮವಾಗಿರಬೇಕು. ಅಲ್ಲಿಯ ವಾತಾವರಣ ಬಹಳ ಚೆನ್ನಾಗಿರಬೇಕು. ಒಂದು ವೇಳೆ ನೀವು ಇರುವ ರೂಮಿನಲ್ಲಿ ಎಲ್ಲರೂ KAS ಆಕಾಂಕ್ಷಿಗಳು ಇದ್ದರೆ ಚೆಂದ. ಬೇರೆ ಪರೀಕ್ಷೆಗೆ ತಯರಾಗುವವರ ಜೊತೆ ಇರಬಾರದು. ಯಾಕೆಂದರೆ, ನಿಮ್ಮದೇ KAS ವಾತಾವರಣ ಇರುವುದಿಲ್ಲ. ಹಾಗೂ ಸ್ಫೂರ್ತಿ ಉಂಟಾಗುವುದಿಲ್ಲ.!!
★ ಬೇರೆಯವರು ಓದುವುದನ್ನು ನೋಡಿ, ಅವರ ಪುಸ್ತಕಗಳ ಸಂಗ್ರಹ ನೋಡಿ, ಅವರ ಚರ್ಚೆಯನ್ನು ನೋಡಿ ನೀವು ಗಾಬರಿಯಾಗಬೇಡಿ. ಯಾವತ್ತೂ ಮತ್ತೊಬ್ಬರೊಂದಿಗೆ ಹೋಲಿಕೆ ಮಾಡಿಕೊಳ್ಳಬೇಡಿ. ಓದುವಾಗ ನಿಮ್ಮದೇ ಶೈಲಿ ರೂಢಿಸಿಕೊಂಡು ಓದಬೇಕು.
 
ಓದುವಾಗ ಮುಖ್ಯವಾದ ವಿಷಯಗಳನ್ನು ಕುರಿತು ನಿಮ್ಮದೇ ಆದ Notes ಮಾಡಿಕೊಳ್ಳುವುದು ಉತ್ತಮ. ಸಮಯ ಇರದಿದ್ದಾಗ ಮಾತ್ರ ಪುಸ್ತಕದಲ್ಲಿ ಅಂಡರಲೈನ್ ಮಾಡಿಕೊಳ್ಳಿ. ಇದರಿಂದ ವೇಗವಾಗಿ Study ಮಾಡಲು ಹಾಗೂ ನೆನಪಿಟ್ಟುಕೊಳ್ಳಲು ಸುಲಭವಾಗುತ್ತದೆ.!!
★ ಇದಕ್ಕಾಗಿ ಗೆಳೆಯರ ಗುಂಪು ಮಾಡಿಕೊಳ್ಳಿ. ಯಾವುದೇ ಕಾರಣಕ್ಕೂ ಏಕಾಂಗಿ ಓದಬೇಡಿ. ಗುಂಪು ಚರ್ಚೆ ಮಾಡುವಾಗ ಹೊಸ ಹೊಸ ವಿಷಯ ತಿಳಿಯುವುದು ಅಲ್ಲದೆ ಚರ್ಚೆ ಮಾಡಿದ ವಿಷಯವು ಹೆಚ್ಚು ನೆನಪಿನಲ್ಲಿ ಉಳಿಯುತ್ತದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

**ಜ್ಞಾನ ಕಾರಂಜಿ**::: ಬೇನಾಮಿ ಆಸ್ತಿ ಪ್ರಕರಣ ವಿಲೇವಾರಿಗೆ ನ್ಯಾಯಾಧಿಕರಣ,

ಬೇನಾಮಿ ಆಸ್ತಿ ವ್ಯವಹಾರಗಳ ಪ್ರಕರಣಗಳ ತ್ವರಿತ ವಿಲೇವಾರಿಗೆ ಪ್ರತ್ಯೇಕ ಪ್ರಾಧಿಕಾರ ಹಾಗೂ ಮೇಲ್ಮನವಿ ನ್ಯಾಯಾಧಿಕರಣ ರಚನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇವೆರಡು ಸಂಸ್ಥೆಗಳ ರಚನೆಗೆ ಅನುಮೋದನೆ ನೀಡಲಾಗಿದೆ. ಈಗಾಗಲೇ ದೇಶಾದ್ಯಂತ 34 ವಿಶೇಷ ನ್ಯಾಯಾಲಯಗಳನ್ನು ಆರಂಭಿಸಲಾಗಿದ್ದು, ನೂತನವಾಗಿ ರಚನೆಯಾಗಿರುವ ಸಂಸ್ಥೆಗಳು ಇದಕ್ಕೆ ಪೂರಕವಾಗಿರಲಿವೆ. ಪ್ರಾಧಿಕಾರವು ಕೋಲ್ಕತ, ಮುಂಬೈ ಹಾಗೂ ಚೆನ್ನೈನಲ್ಲಿದ್ದರೆ, ನ್ಯಾಯಾಧಿಕರಣವು ದೆಹಲಿಯಲ್ಲಿರಲಿದೆ. 1988ರಲ್ಲೇ ಬೇನಾಮಿ ವ್ಯವಹಾರಗಳ ನಿಯಂತ್ರಣ ಕಾಯ್ದೆ ರಚನೆಯಾಗಿತ್ತು. ಆದರೆ, ಸೂಕ್ತ ನಿಯಮ ಅಥವಾ ಸಂಸ್ಥೆಗಳನ್ನು ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ರಚಿಸಿರಲಿಲ್ಲ. ಆಶಾ ಕಾರ್ಯಕರ್ತೆಯರಿಗೆ ಉಡುಗೊರೆ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಏರಿಸಿದ ಬೆನ್ನಲ್ಲೇ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಭೇಟಿ ಮಾಡುತ್ತಿದ್ದಕ್ಕೆ ನೀಡುತ್ತಿದ್ದ ಗೌರವಧನದಲ್ಲಿ -ಠಿ; 50 ಏರಿಕೆ ಮಾಡಲಾಗಿದೆ. ಪ್ರಸ್ತುತ ಪ್ರತಿ ಭೇಟಿಗೆ -ಠಿ; 250 ಇದ್ದು, ಇನ್ಮುಂದೆ 300 ದೊರೆಯಲಿದೆ. ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕವಾಗಿ 20 ಭೇಟಿ ಇರಲಿದ್ದು, ಇದರಿಂದ -ಠಿ; 1 ಸಾವಿರ ಹೆಚ್ಚುವರಿ ಗೌರವ ಧನ ದೊರೆಯಲಿದೆ. ಐಐಎಸ್​ಎಸ್ ಸ್ಥಾಪನೆ: ದೇಶದ ವಿವಿಧೆಡೆ ಇಂಡಿಯನ್ ಇನ್​ಸ್ಟಿ ಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್​ಎಸ್) ಆರಂಭಿಸಲು ಕೇಂದ್ರ ಸರ್ಕಾರ ಸಮ್ಮತಿಸಿ...

**ಜ್ಞಾನ ಕಾರಂಜಿ**::: ★ ವೈಜ್ಞಾನಿಕ ಉಪಕರಣಗಳು ಹಾಗೂ ಅವುಗಳ ಉಪಯೋಗಗಳು

1) ಅಲ್ಟಿಮೀಟರ್ —————> ಎತ್ತರ ಮತ್ತು ವಾಯುವಿನ ಒತ್ತಡವನ್ನು ಸೂಚಿಸುವ ಸಾಧನ. 2) ಲ್ಯಾಕ್ಟೊಮೀಟರ್ —————> ಹಾಲಿನಲ್ಲಿರುವ ನೀರಿನ ಪ್ರಮಾಣವನ್ನು ಅಳೆಯುವ ಸಾಧನ. 3) ಬ್ಯಾರೋಮೀಟರ್ —————> ಭೂಮಿಯ ಮೇಲಿನ ಹವೆಯ ಒತ್ತಡವನ್ನು ಅಳೆಯುವ ಸಾಧನ. 4) ಮೈಕ್ರೋಮೀಟರ್ —————> ಸಣ್ಣ ವಸ್ತುಗಳ ದಪ್ಪವನ್ನು ಅಳೆಯುವ ಸಾಧನ. 5) ಹೈಡ್ರೋಮೀಟರ್ —————> ದ್ರವಗಳ ಸಾಪೇಕ್ಷ ಸಾಂದ್ರತೆಯನ್ನು ಅಳೆಯುವ ಸಾಧನ. 6) ಪೈರೋಮೀಟರ್ —————> ಹೆಚ್ಚು ಉಷ್ಣತೆಯನ್ನು ಅಳೆಯುವ ಸಾಧನ. 7) ಪ್ಯಾಥೋಮೀಟರ್ —————> ಸಮುದ್ರದ ಆಳವನ್ನು ಅಳೆಯುವ ಸಾಧನ. 8) ವೋಲ್ಟಾಮೀಟರ್ —————> ವಿದ್ಯುತ್ ಕೋಶದ ವಿದ್ಯುತ್ ಚಾಲಕ ಬಲವನ್ನು ಅಳೆಯುವ ಸಾಧನ. 9) ಗ್ಯಾಲ್ವನೋಮೀಟರ್ —————> ಕಡಿಮೆ ವಿದ್ಯುತ್ ಅಳೆಯುವ ಸಾಧನ. 10) ಅನಿಮಾಮೀಟರ್ —————> ಗಾಳಿಯ ವೇಗವನ್ನು ಅಳೆಯುವ ಸಾಧನ. 11) ಓಡೋಮೀಟರ್ —————> ಚಕ್ರವಾಹನಗಳು ಚಲಿಸುವ ದೂರವನ್ನು ಅಳೆಯುವ ಸಾಧನ. 12) ಸ್ಪೀಡೋಮೀಟರ್ —————> ವಾಹನಗಳ ವೇಗವನ್ನು ಅಳೆಯುವ ಸಾಧನ. 13) ಗ್ರಾಫಿಮೀಟರ್ —————> ನೀರಿನ ಸೆಲೆಯನ್ನು ಪತ್ತೆ ಹಚ್ಚುವ ಸಾಧನ. 14) ಮೋನೋಮೀಟರ್ —————> ಅನಿಲಗಳ ಒತ್ತಡಗಳನ್ನು ಅಳೆಯುವ ಸಾಧನ. 15) ಕ್ರೋನೋಮೀಟರ್ —————> ಹಡಗಿನ ನಿಖರವಾದ ಕಾಲವನ್ನು ಅಳತೆ ಮಾಡುವ ಸಾಧನ. 16) ರೆಡಿಯೋಮೀಟರ್ —————> ವಿಕಿರಣಗಳಿಂದ ಹೊರಬರುವ ಶಕ್ತಿಯನ್ನು ಅಳೆಯುವ ಸಾಧನ. 1...

.. ಭಾರತೀಯ ಕಾವ್ಯ ಮೀಮಾಂಸೆ

ಭಾರತೀಯ ಕಾವ್ಯ ಮೀಮಾಂಸೆ ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ. ಇದನ್ನು ಅಲಂಕಾರ ಶಾಸ್ತ್ರವೆಂದೂ ಕರೆಯಲಾಗುತ್ತದೆ. ಪ್ರಾಚೀನ ಯುಗದಲ್ಲಿ ಅಲಂಕಾರಶಾಸ್ತ್ರವೆಂದರೆ ಪ್ರಧಾನವಾಗಿ ನಾಟ್ಯ ನೃತ್ಯ ಇತ್ಯಾದಿ ರಂಗ ಸಂಸ್ಕರಣ ಅಥವಾ ನಾಟ್ಯಕಲೆಯನ್ನು ಸರ್ವಾಂಗ ಸುಂದರವಾಗಿ ಮಾಡುವ ಒಂದು ಪರಿಷ್ಕಾರ ಶಾಸ್ತ್ರವಾಗಿದ್ದಿತು. ಕಾಲಕ್ರಮೇಣ ಇದು ಕಾವ್ಯಕಲೆಯನ್ನು ಪರಿಷ್ಕರಿಸುವ ಶಾಸ್ತ್ರವಾಗಿ ಪರಿಣಮಿಸಿತು. ಇದರ ಆರಂಭ ಯಾವಾಗಿ ಯಾರಿಂದ ಆಯಿತೆಂದು ಇತ್ಯರ್ಥಪಡಿಸುವುದು ಕಷ್ಟದ ಕೆಲಸ. ಸಾಹಿತ್ಯದಲ್ಲಿ ಸೌಂದರ್ಯೋಪಾಸನೆ ಪ್ರಾರಂಭವಾದಂದಿನಿಂದಲೂ ಪಂಡಿತರು ಮತ್ತು ವಿಮರ್ಶಕರು ಸಾಹಿತ್ಯದಲ್ಲಿ ಸೌಂದರ್ಯ ಅರಸಿ ಈ ಚಿತ್ತ ಸಂಸ್ಕರಣ ಶಾಸ್ತ್ರವನ್ನು ಬೆಳೆಸಿಕೊಂಡು ಬಂದಿದ್ದಾರೆ. ಕ್ರಿ. ಪೂ. 6ನೆಯ ಶತಮಾನದಲ್ಲಿದ ಯಾಸ್ಕಾಚಾರ್ಯ ಉಪಮೆ ರೂಪಕಗಳ ಬಗ್ಗೆ ಉಲ್ಲೇಖಸಿದ್ದಾನೆ. ಕ್ರಿ. ಪೂ. 5ನೆಯ ಶತಕದ ವೇಳೆಗೆ ಪಾಣಿನಿ ನಟರ ವಿಷಯ ಪ್ರಸ್ತಾಪಿಸಿದ್ದಾನೆ. ವೇದಗಳ ಕಾಲದಲ್ಲೂ ಉಪಮಾ ರೂಪಕಾದಿಗಳ ಪ್ರಯೋಗವಿದೆ. ಋಗ್ವೇದದಲ್ಲಿ ಕಂಡುಬರುವ ಯಮಯಮಿಯರ ಸಂವಾದ, ಊರ್ವಶೀ ಪುರೂರವರ ಸಂವಾದ_ಇವುಗಳಿಂದ ವೇದಕಾಲದಲ್ಲಿ ನಾಟಕದ ಅಂಕುರಾರ್ಪಣವಿದ್ದಂತಿದೆ....